AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಜ್ಯೋತಿ ಯೊಜನೆಯಡಿ ವಿದ್ಯುತ್​ ನಿಗಮಗಳಿಗೆ ಹಣ ಬಿಡುಗಡೆ ಮಾಡಿದ ಸರ್ಕಾರ: ಯಾವ ನಿಗಮಕ್ಕೆ ಎಷ್ಟು ಸಿಕ್ತು?

Gruha Jyothi Scheme: ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿಗಳಲ್ಲಿ ಮಹತ್ವದ ಯೋಜನೆಯಾದ 200 ಯುನಿಟ್​ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗಾಗಿ ಸಹಾಯಧನ ಬಿಡುಗಡೆ ಮಾಡಿದೆ. ರಾಜ್ಯದ ಎಲ್ಲಾ ವಿದ್ಯುತ್ ಪೂರೈಕೆ ಸಂಸ್ಥೆ (ಎಸ್ಕಾಂ)ಗಳಿಗೆ ಮುಂಗಡ ಸಹಾಯಧನ ಬಿಡುಗಡೆ ಮಾಡಲಾಗಿದ್ದು, ಯಾವ ನಿಗಮಕ್ಕೆ ಎಷ್ಟು ಹಣ ಸಿಕ್ಕಿದೆ ಎನ್ನುವ ವಿವರ ಇಲ್ಲಿದೆ.

ಗೃಹ ಜ್ಯೋತಿ ಯೊಜನೆಯಡಿ ವಿದ್ಯುತ್​ ನಿಗಮಗಳಿಗೆ ಹಣ ಬಿಡುಗಡೆ ಮಾಡಿದ ಸರ್ಕಾರ: ಯಾವ ನಿಗಮಕ್ಕೆ ಎಷ್ಟು ಸಿಕ್ತು?
ಗೃಹ ಜ್ಯೋತಿ
Poornima Agali Nagaraj
| Edited By: |

Updated on:Aug 22, 2023 | 10:24 AM

Share

ಬೆಂಗಳೂರು, (ಆಗಸ್ಟ್ 22): ಶಕ್ತಿ ಯೋಜನೆ (Shakti Scheme) ಅಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್​​ಗಳಲ್ಲಿ ವಿತರಿಸಲಾಗಿರುವ ಟಿಕೆಟ್​​ನ ಒಟ್ಟು ಮೊತ್ತದ ಮೊದಲ ಕಂತನ್ನು ಈಗಾಗಲೇ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ಸಾರಿಗೆ ನಿಗಮಗಳಿಗೆ ನಿಗಮಗಳಿಗೆ ಮೊದಲ ಕಂತಿನ ಹಣವಾಗಿ 125.48 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇದರ ಬೆನ್ನೆಲ್ಲೇ ಇದೀಗ ಕಾಂಗ್ರೆಸ್ ಸರ್ಕಾರದ ಮತ್ತೊಂದು ಮಹತ್ವದ ಗ್ಯಾರಂಟಿ ಯೋಜನೆಯಾದ 200 ಯುನಿಟ್​ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗಾಗಿ(gruha lakshmi scheme) ಸರ್ಕಾರ ಅನುದಾನ ಬಿಡುಗಡೆಗೊಳಿಸಿದೆ. 2023-24ನೇ ಸಾಲಿನ ಗೃಹಜ್ಯೋತಿ ಯೋಜನೆಯಡಿ ರಾಜ್ಯದ ಎಲ್ಲಾ ವಿದ್ಯುತ್ ಪೂರೈಕೆ ಸಂಸ್ಥೆ (ಎಸ್ಕಾಂ)ಗಳಿಗೆ ಮುಂಗಡ ಸಹಾಯಧನ ಬಿಡುಗಡೆ ಮಾಡಲಾಗಿದೆ. ಜುಲೈ-2023ರ ಮಾಹೆಗೆ ಒಟ್ಟು 476 ಕೋಟಿ ರೂಪಾಯಿ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ, ಮಂಗಳೂರು, ವಿದ್ಯುತ್ ಸರಬರಾಜು ಕಂಪನಿ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ, ಗುಲ್ಬರ್ಗಾ ವಿದ್ಯುತ್‌ ಸರಬರಾಜು ಕಂಪನಿ ಮತ್ತು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತಕ್ಕೆ ಹಣ ಬಿಡುಗಡೆ ಮಾಡಲಾಗಿದೆ. ಈ ಮುಂಗಡ ಸಹಾಯಧನದಲ್ಲಿ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಬೆಸ್ಕಾಂ)ಗೆ ಸಿಂಹಪಾಲು ಸಿಕ್ಕಿದೆ.

ಇದನ್ನೂ ಓದಿ: ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ಸರ್ಕಾರ; ಯಾವ ನಿಗಮಕ್ಕೆ ಎಷ್ಟು ಸಿಕ್ತು?

ಆದೇಶದ ಪ್ರಕಾರ ಹಣ ಸ್ವೀಕೃತಿ ಮಾಡುವ ಸಂಸ್ಥೆಗಳು ಅನುಸರಣಾ ವರದಿ ಮತ್ತು ಬಳಕೆಯ ಪ್ರಮಾಣ ಪತ್ರವನ್ನು (Utilization Certificate), ಈ ಪ್ರವರ್ಗದ ಫಲಾನುಭವಿಗಳ ಮಾಹಿತಿಯೊಂದಿಗೆ ಸಲ್ಲಿಸಲು ಸರ್ಕಾರ ಸೂಚನೆ ನೀಡಿದೆ. ಹಾಗಾದ್ರೆ, ಯಾವೆಲ್ಲ ವಿದ್ಯುತ್ ಪೂರೈಕೆ ಸಂಸ್ಥೆಗಳಿಗೆ ಎಷ್ಟು-ಎಷ್ಟು ಅನುದಾನ ಸಿಕ್ಕಿದೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಸಹಾಯಧನ ಹಂಚಿಕೆಯ ವಿವರ

  •  ಬೆಸ್ಕಾಂ – 235.07 ಕೋಟಿ ರೂ.
  • ಮೆಸ್ಕಾಂ – 52.73 ಕೋಟಿ ರೂ.
  •  ಹೆಸ್ಕಾಂ – 83.48 ಕೋಟಿ ರೂ.
  •  ಗೆಸ್ಕಂ – 53.46 ಕೋಟಿ ರೂ.
  •  ಚೆಸ್ಕಾಂ – 51.26 ಕೋಟಿ ರೂ.
  • ಒಟ್ಟು – 476 ಕೋಟಿ ರೂಪಾಯಿ

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:22 am, Tue, 22 August 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ