AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ನೌಕರರ 2026-27ನೇ ಸಾಲಿನ ವರ್ಗಾವಣೆ ಮಾರ್ಗಸೂಚಿ ಪ್ರಕಟ

ಕಳೆದ ವರ್ಷದಂತೆಯೇ ಈ ವರ್ಷ ಅಂದರೆ 2026-27ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.ವರ್ಗಾವಣೆ ಪ್ರಕ್ರಿಯೆಯು ಏಪ್ರಿಲ್ 13, 2026 ರಿಂದ ಅಧಿಕೃತವಾಗಿ ಜಾರಿಗೆ ಬಂದಿದ್ದು, ಆಸಕ್ತ ಮತ್ತು ಅರ್ಹ ನೌಕರರು ಅರ್ಜಿ ಸಲ್ಲಿಸಲು ಮೇ 31, 2026 ಕೊನೆಯ ದಿನಾಂಕವಾಗಿದೆ ಎಂದು ಸರ್ಕಾರ ತಿಳಿಸಿದೆ.

ಸರ್ಕಾರಿ ನೌಕರರ 2026-27ನೇ ಸಾಲಿನ ವರ್ಗಾವಣೆ ಮಾರ್ಗಸೂಚಿ ಪ್ರಕಟ
Vidhana SoudhaImage Credit source: google
ರಮೇಶ್ ಬಿ. ಜವಳಗೇರಾ
|

Updated on: Apr 13, 2026 | 8:11 PM

Share

ಬೆಂಗಳೂರು, (ಏಪ್ರಿಲ್ 13): ರಾಜ್ಯ ಸರ್ಕಾರವು 2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆಗೆ (employees transfer) ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಆಡಳಿತಾತ್ಮಕ ದಕ್ಷತೆ ಮತ್ತು ನೌಕರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿಯಮಾವಳಿಗಳನ್ನು ರೂಪಿಸಲಾಗಿದೆ. ಈ ಬಾರಿಯ ವರ್ಗಾವಣೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಸರ್ಕಾರ ನಿರ್ಧರಿಸಿದ್ದು ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ನೌಕರರು ತಮ್ಮ ಸೇವಾ ದಾಖಲೆಗಳನ್ನು (Service Records) ನಿಖರವಾಗಿ ಒದಗಿಸುವುದು ಕಡ್ಡಾಯವಾಗಿದೆ. ಕೇವಲ ವೈಯಕ್ತಿಕ ಬೇಡಿಕೆಗಳಲ್ಲದೆ, ಇಲಾಖೆಯ ಆಡಳಿತಾತ್ಮಕ ಅಗತ್ಯತೆಗಳನ್ನು (Administrative Exigencies) ಪ್ರಮುಖ ಮಾನದಂಡವಾಗಿ ಪರಿಗಣಿಸಿ ವರ್ಗಾವಣೆ ಆದೇಶ ಹೊರಡಿಸಲಾಗುತ್ತದೆ.

ಏಪ್ರಿಲ್ 13ರಿಂದ ಮೇ 31ರ ವರಗೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದ್ದು, ಈ ದಿನಾಂಕದೊಳಗೆ ಆಸಕ್ತ ಮತ್ತು ಅರ್ಹ ನೌಕರರು ಅರ್ಜಿ ಸಲ್ಲಿಸಬಹುದಾಗಿದೆ.  ಇನ್ನು ವಿಶೇಷಚೇತನ ನೌಕರರಿಗೆ ವಿನಾಯಿತಿ ಸೇರಿದಂತೆ ಹಲವು ನಿಯಮಗಳನ್ನು ವಿಧಿಸಲಾಗಿದೆ.

ಇದನ್ನೂ ಓದಿ: ಅಸ್ತಿತ್ವದಲ್ಲೇ ಇಲ್ಲದ ಕಂಪನಿಗೆ 53 ಎಕರೆ ಭೂಮಿ ಪರಭಾರೆ: ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್, ಸಿಬಿಐ ತನಿಖೆಗೆ ಆದೇಶ

ವಿಶೇಷ ವಿನಾಯಿತಿ ಮತ್ತು ಆದ್ಯತೆಗಳು

ಕೆಲವು ವಿಶೇಷ ಪ್ರಕರಣಗಳಲ್ಲಿ ಮಾನವೀಯ ನೆಲೆಯ ಮೇಲೆ ಆದ್ಯತೆ ನೀಡಲು ಮಾರ್ಗಸೂಚಿಯಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅವು ಈ ಕೆಳಗಿನಂತಿವೆ ನೋಡಿ.

ಆರೋಗ್ಯ ಸಮಸ್ಯೆ: ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ನೌಕರರಿಗೆ ವಿಶೇಷ ಆದ್ಯತೆ. ಮಹಿಳಾ ನೌಕರರು:ಗರ್ಭಿಣಿ ಮಹಿಳಾ ನೌಕರರ ವರ್ಗಾವಣೆ ವಿನಂತಿಗಳನ್ನು ಆದ್ಯತೆಯ ಮೇಲೆ ಪರಿಗಣಿಸಲಾಗುವುದು.

ಕುಟುಂಬದ ತುರ್ತು:ಕುಟುಂಬದ ಅನಿವಾರ್ಯ ಪರಿಸ್ಥಿತಿ ಅಥವಾ ಮಕ್ಕಳ ಶಿಕ್ಷಣದಂತಹ ಕಾರಣಗಳಿಗೆ ನಿಯಮಾನುಸಾರ ವಿನಾಯಿತಿ ನೀಡಲಾಗುತ್ತದೆ.

ಭತ್ಯೆ ಮತ್ತು ಸೌಲಭ್ಯಗಳು: ವರ್ಗಾವಣೆಗೊಂಡ ನೌಕರರಿಗೆ ಅವರ ಸೇವಾ ಅವಧಿ ಮತ್ತು ಪ್ರಸ್ತುತ ನಿರ್ವಹಿಸುತ್ತಿರುವ ಹುದ್ದೆಯ ಶ್ರೇಣಿಗೆ ಅನುಗುಣವಾಗಿ ನಿಗದಿಪಡಿಸಿದ ವರ್ಗಾವಣೆ ಭತ್ಯೆ (Transfer Allowance) ಹಾಗೂ ಇತರ ಸರ್ಕಾರಿ ಸೌಲಭ್ಯಗಳು ಲಭ್ಯವಿರಲಿವೆ.

ಸೂಚನೆ: ಅರ್ಹ ನೌಕರರು ನಿಗದಿತ ಕಾಲಮಿತಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕೃತ ಜಾಲತಾಣ ಅಥವಾ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!