ಕರ್ನಾಟಕದ ಮುಜರಾಯಿ ಇಲಾಖೆ ಅರ್ಚಕರಿಗೆ ಗುಡ್ ನ್ಯೂಸ್, ತಸ್ತಿಕ್​​ ಹಣ ರಿಲೀಸ್​

Karnataka government releases priests tastik: ಕರ್ನಾಟಕದ ಅರ್ಚಕರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. 27000 ದೇವಾಲಯಗಳ ಅರ್ಚಕರಿಗೆ ತಸ್ತಿಕ್ ಬಿಡುಗಡೆ ಮಾಡಿದೆ.

ಕರ್ನಾಟಕದ ಮುಜರಾಯಿ ಇಲಾಖೆ ಅರ್ಚಕರಿಗೆ ಗುಡ್ ನ್ಯೂಸ್, ತಸ್ತಿಕ್​​ ಹಣ ರಿಲೀಸ್​
ವಿಧಾನಸೌಧ
Edited By:

Updated on: Sep 03, 2023 | 10:59 AM

ಬೆಂಗಳೂರು, (ಸೆಪ್ಟೆಂಬರ್, 03): ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಅರ್ಚಕರ(Temples priests) ಭತ್ಯೆಯನ್ನು ರಾಜ್ಯ ಸರ್ಕಾರ(Karnataka government) ಬಿಡುಗಡೆ ಮಾಡಿದೆ. ಧಾರ್ಮಿಕ ದತ್ತಿ ಇಲಾಖೆ ದೇಗುಲಗಳ ಅರ್ಚಕ ಭತ್ಯೆಯ ಒಟ್ಟು 77.85 ಕೋಟಿ ರೂ. ಬಿಡುಗಡೆಗೊಳಿಸಿದೆ.  ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿನ ಸಿ ದರ್ಜೆ ದೇವಸ್ಥಾನಗಳ ಅರ್ಚಕರು ತಸ್ತಿಕ್​ ಹಣವನ್ನು ತಹಶೀಲ್ದಾರ್ ಮೂಲಕ ಪಡೆಯುತ್ತಿದ್ದಾರೆ. ಗುಮಾಸ್ತು, ಶಿರಸ್ತೇದಾರರು, ಟ್ರಿಜರಿ ಅಧಿಕಾರಿಗಳು ಕಮೀಷನ್​ ಬೇಡಿಕೆ ಇಡುತ್ತಿರುವ ಆರೋಪ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ನೇರವಾಗಿ ಅರ್ಚಕರ ಬ್ಯಾಂಕ್​ ಖಾತೆಗಳಿಗೆಗೆ ಹಣ ಜಮೆ ಮಾಡುವುದಾಗಿ ಹೇಳಿದ್ದರು. ಇದೀಗ ಸರ್ಕಾರ ಹಣ ಬಿಡುಗಡೆ ಮಾಡಿದ್ದು, ಇದನ್ನು ನೇರವಾಗಿ ಅರ್ಚಕರ ಖಾತೆಗೆ ಜಮೆ ಮಾಡುತ್ತಾ ಅಥವಾ ತಹಶೀಲ್ದಾರ್​ ಕಚೇರಿಗೆ ಕಳುಹಿಸುತ್ತಾ ಎನ್ನುವುದು ತಿಳಿದುಬರಬೇಕಿದೆ.

ಕಮೀಷನ್​ ಆರೋಪ ಮಾಡಿದ್ದ ಅರ್ಚಕರ ಸಂಘ

ರಾಜ್ಯದ ದೇವಸ್ಥಾನಗಳ ಪೂಜಾ ಕಾರ್ಯ ಇತ್ಯಾದಿಗಳ ಕೆಲಸಕ್ಕೆಂದು ಸರ್ಕಾರ ಬಿಡುಗಡೆ ಮಾಡುವ ‘ತಸ್ತಿಕ್‌’ ಹಣಕ್ಕೂ ಖಜಾನೆ ಅಧಿಕಾರಿಗಳು ಪರ್ಸೆಂಟೇಜ್‌ ಕೇಳುತ್ತಿದ್ದಾರೆಂದು ಮುಜರಾಯಿ ಇಲಾಖೆಗೆ ಒಳಪಟ್ಟದೇವಸ್ಥಾನಗಳ ಅರ್ಚಕರ ಸಂಘ ಇತ್ತೀಚೆಗೆ ಆರೋಪಿಸಿತ್ತು. ಈ ಕುರಿತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮುಜರಾಯಿ ಇಲಾಖೆಯ ಸಿ ದರ್ಜೆ ದೇವಸ್ಥಾನಗಳ ಅರ್ಚಕರ ಸಂಘ ಪತ್ರ ಬರೆದಿತ್ತು. ಸರ್ಕಾರ ಪ್ರತಿ ವರ್ಷ ದೇವಸ್ಥಾನಗಳಲ್ಲಿ ನಿತ್ಯ ಪೂಜಾ ಕಾರ್ಯ ಇತ್ಯಾದಿ ಸಣ್ಣ ಪುಟ್ಟಗಳ ಕೆಲಸಗಳಿಗೆ ತಸ್ತಿಕ್‌ ಹಣ ಬಿಡುಗಡೆ ಮಾಡುತ್ತಿದೆ. ಈ ಹಣ ಬಿಡುಗಡೆ ಮಾಡಲು ಖಜಾನೆ ಅಧಿಕಾರಿಗಳಿಗೆ ಶೇ.20ರಷ್ಟುಕಮಿಷನ್‌ ಕೇಳುತ್ತಿದ್ದಾರೆ. ಕಮಿಷನ್‌ ಕೊಡದೇ ಇದ್ದರೆ ಹಣ ಬಿಡುಗಡೆ ಮಾಡುತ್ತಿಲ್ಲ. ಹಣ ಬಿಡುಗಡೆಗೂ ದಲ್ಲಾಳಿಗಳಿಗೆ ಹಣ ಕೊಡಬೇಕಾಗಿದೆ. ಆದ್ದರಿಂದ ಕಮಿಷನ್‌ ವ್ಯವಹಾರವನ್ನು ಸರ್ಕಾರ ತಡೆಯಬೇಕು ಎಂದು ಆಗ್ರಹಿಸಿತ್ತು. ಅರ್ಚಕರ ಮನವಿಗೆ ಸ್ಪಂದಿಸಿದ್ದ ಸಚಿವ ರಾಮಲಿಂಗರೆಡ್ಡಿ. ಇನ್ಮುಂದೆ ಅರ್ಚಕರ ಖಾತೆಗೆ ನೇರವಾಗಿ ತಸ್ತಿಕ್‌ ಹಣ ಜಮೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us