AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ವರ್ಚಸ್ಸಿಗೆ ಧಕ್ಕೆ ತಂದರೆ ಶಿಸ್ತುಕ್ರಮ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ

ಅನುಮತಿ ಇಲ್ಲದೆ ಕೋರ್ಟ್‌ ಮತ್ತು ಮಾಧ್ಯಮಗಳ ಮೊರೆ ಹೋಗುವಂತಿಲ್ಲ. ನಿಯಮವನ್ನು ಮೀರಿ ಸರ್ಕಾರಕ್ಕೆ ವರ್ಚಸ್ಸಿಗೆ ಧಕ್ಕೆ ತಂದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ವಿಧಿಸಿದೆ.

ಸರ್ಕಾರದ ವರ್ಚಸ್ಸಿಗೆ ಧಕ್ಕೆ ತಂದರೆ ಶಿಸ್ತುಕ್ರಮ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Sep 18, 2021 | 10:09 PM

Share

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪ್ರಕರಣ ಆಧರಿಸಿ ಕರ್ನಾಟಕ ಸರ್ಕಾರ ಹಿರಿಯ ಅಧಿಕಾರಿಗಳಿಗೆ ಸಾಮಾಜಿಕ ಮಾಧ್ಯಮಗಳ ಬಳಕೆಗೆ ನಿರ್ಬಂಧ ವಿಧಿಸಿದೆ. ಸರ್ಕಾರಿ ಅಧಿಕಾರಿಗಳು ಕೇಂದ್ರ, ರಾಜ್ಯ ಸರ್ಕಾರದ ನೀತಿಗಳ ಬಗ್ಗೆ ಟೀಕಿಸಬಾರದು. ಸರ್ಕಾರದ ನೀತಿಗಳ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಬಾರದು. ಸಂಬಂಧಿಸಿದ ಪ್ರಾಧಿಕಾರದ ಪೂರ್ವಾನುಮೋದನೆ ಪಡೆಯದೆ ಯಾವುದೇ ಸರ್ಕಾರಿ ನೌಕರ ಪ್ರತಿಕೂಲ ಟೀಕೆ ಮಾಡುವಂತಿಲ್ಲ. ಅನುಮತಿ ಇಲ್ಲದೆ ಕೋರ್ಟ್‌ ಮತ್ತು ಮಾಧ್ಯಮಗಳ ಮೊರೆ ಹೋಗುವಂತಿಲ್ಲ. ನಿಯಮವನ್ನು ಮೀರಿ ಸರ್ಕಾರಕ್ಕೆ ವರ್ಚಸ್ಸಿಗೆ ಧಕ್ಕೆ ತಂದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ವಿಧಿಸಿದೆ.

ಸರ್ಕಾರಿ ಯೋಜನೆ ಪ್ರಚಾರಕ್ಕೆ ಮಾತ್ರ ಮಾಧ್ಯಮಗಳನ್ನು ಬಳಸಬೇಕು. ಕುಂದು ಕೊರತೆ ವ್ಯಕ್ತಪಡಿಸಲು ಮಾಧ್ಯಮಗಳನ್ನು ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಇಲಾಖೆಯ ಸಾಧನೆಗಳ ಬಗ್ಗೆ, ಅಥವಾ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ಪ್ರಸಾರ ಮಾಡಬೇಕಾದ ಸಂದರ್ಭದಲ್ಲಿ ಅಧಿಕಾರಿಗಳು ವೈಯಕ್ತಿಕ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಬಳಸದೇ ಸರ್ಕಾರದ ಆಡಳಿತ ಹೆಸರಿನಲ್ಲಿ ತೆರೆಯಲಾದ ಖಾತೆಗಳನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಕರ್ನಾಟಕ ಸರ್ಕಾರ ಸೂಚಿಸಿದೆ.

ನಿಯಮ 26: ಸರ್ಕಾರಿ ನೌಕರರ ಕೃತ್ಯಗಳು ಮತ್ತು ನಡತೆಯ ಪ್ರಕಾರ ನಿಯಮಿಸಲಾದ ಪ್ರಾಧಿಕಾರದ ಪೂರ್ವಾನುಮೋದನೆ ಪಡೆಯದ ಹೊರತು ಯಾವುದೇ ಸರ್ಕಾರಿ ನೌಕರನು ಸರ್ಕಾರದ ಯಾವ ಅಧಿಕೃತ ಕೃತ್ಯವು ಪ್ರತಿಕೂಲ ಟೀಕೆಯ ಅಥವಾ ಮಾನಹಾನಿ ಸ್ವರೂಪದ ನಿಂದನೆಯ ವಸ್ತು ವಿಷಯವಾಗಿರುವುದೋ ಆ ಯಾವುದೇ ಅಧಿಕೃತ ಕಡತದ ಸಮರ್ಥನೆಗಾಗಿ ಯಾವುದೇ ನ್ಯಾಯಾಲಯಕ್ಕೆ ಅಥವಾ ಪತ್ರಿಕೆಗೆ ಮೊರೆ ಹೋಗತಕ್ಕದಲ್ಲ ಎಮದು ರಾಜ್ಯ ಸರ್ಕಾರ ತಿಳಿಸಿದೆ.

ಮೇಲಿನ ನಿಯಮಗಳಲ್ಲಿನ ಅವಕಾಶಗಳಿಗೆ ವ್ಯತಿರಿಕ್ತವಾಗಿ ಯಾವುದೇ ಅಧಿಕಾರಿ ಸರ್ಕಾರದ ಕಾರ್ಯನೀತಿಗೆ ವ್ಯತಿರಿಕ್ತವಾಗಿ ಅನಪೇಕ್ಷಿತ ವೇದಿಕೆಗಳಲ್ಲಿ ತಮ್ಮದೇ ಆದ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುವ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಕೃತ್ಯಗಳಲ್ಲಿ ತೊಡಗುವುದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಮುಗಿಸಲಾಗುವುದು ಎಂದು ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: 

ಪಿಯುಸಿ ಫಲಿತಾಂಶ ಘೋಷಣೆಯಲ್ಲಿ ವಿಳಂಬ ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗಬಾರದು: ರಾಜ್ಯ ಸರ್ಕಾರ ಸೂಚನೆ

ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಯಡಿಯೂರಪ್ಪರಿಗೆ ಪತ್ರ ಬರೆದ ಸಂಸದ ಪ್ರತಾಪ್ ಸಿಂಹ

(Karnataka Government restricts government officers use of social media)

Published On - 10:07 pm, Sat, 18 September 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ