ಜನರಿಗೆ ಕಿರುಕುಳ ನೀಡುವ 42 ಸಾಲದ ಆ್ಯಪ್​ಗಳ ವಿರುದ್ಧ ಕ್ರಮ; ಕರ್ನಾಟಕ ಸರ್ಕಾರ ಮಾಹಿತಿ

ಕೇಂದ್ರ ಮತ್ತು ಗೂಗಲ್‌ನೊಂದಿಗೆ ಸಮಸ್ಯೆಯನ್ನು ಪ್ರಸ್ತಾಪಿಸಲಾಗಿದೆ. ಈಗಾಗಲೇ ಅಂತಹ 42 ಅಪ್ಲಿಕೇಶನ್‌ಗಳನ್ನು ಪ್ಲೇ ಸ್ಟೋರ್​​ನಿಂದ ತೆಗೆದುಹಾಕಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಜನರಿಗೆ ಕಿರುಕುಳ ನೀಡುವ 42 ಸಾಲದ ಆ್ಯಪ್​ಗಳ ವಿರುದ್ಧ ಕ್ರಮ; ಕರ್ನಾಟಕ ಸರ್ಕಾರ ಮಾಹಿತಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Jul 11, 2023 | 6:44 PM

ಬೆಂಗಳೂರು: ಜನರಿಗೆ ಕಿರುಕುಳ ನೀಡುತ್ತಿರುವ 42 ಸಾಲ ನೀಡುವ ಮೊಬೈಲ್ ಅಪ್ಲಿಕೇಶನ್‌ಗಳನ್ನು (Lending Apps) ಗೂಗಲ್ ಪ್ಲೇ ಸ್ಟೋರ್‌ನಿಂದ (Google Play store) ಗೆದುಹಾಕಲು ಕ್ರಮಕೈಗೊಳ್ಳಲಾಗಿದೆ ಎಂದು ಕರ್ನಾಟಕ ಸರ್ಕಾರ (Karnataka) ವಿಧಾನ ಪರಿಷತ್ತಿಗೆ ಮಾಹಿತಿ ನೀಡಿದೆ. ಆನ್‌ಲೈನ್ ಗೇಮಿಂಗ್ ಮತ್ತು ಆನ್‌ಲೈನ್ ಸಾಲ ನೀಡುವ ಮೊಬೈಲ್ ಆ್ಯಪ್​ಗಳ ಬಗ್ಗೆ ಬಿಜೆಪಿ ಎಂಎಲ್‌ಸಿ ಡಿಎಸ್ ಅರುಣ್ ಪ್ರಸ್ತಾವಿಸಿದ್ದು, ಇದಕ್ಕೆ ಸರ್ಕಾರ ಉತ್ತರ ನೀಡಿದೆ. ಆನ್‌ಲೈನ್ ಗೇಮಿಂಗ್ ಮತ್ತು ಆನ್‌ಲೈನ್ ಸಾಲ ನೀಡುವ ಆ್ಯಪ್​ಗಳು ಜನರಿಗೆ ಕಿರುಕುಳ ನೀಡುತ್ತಿವೆ ಮತ್ತು ವಿಶೇಷವಾಗಿ ಗೇಮಿಂಗ್ ಅಪ್ಲಿಕೇಶನ್‌ಗಳು ಯುವಕರ ಶಿಕ್ಷಣ ಮತ್ತು ಜೀವನವನ್ನು ಹಾಳು ಮಾಡುತ್ತಿವೆ ಎಂದು ಅವರು ಡಿಎಸ್ ಅರುಣ್ ಆರೋಪಿಸಿದ್ದಾರೆ. ಸೆಲೆಬ್ರಿಟಿಗಳು ಇಂತಹ ಗೇಮಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡುತ್ತಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದರೆ ಜತೆಗೆ, ಇದು ಯುವಜನರನ್ನು ಆನ್‌ಲೈನ್ ಜೂಜಿನಲ್ಲಿ ತೊಡಗಿಸಿಕೊಳ್ಳಲು ಆಮಿಷವೊಡ್ಡುತ್ತದೆ ಎಂದು ಅವರು ಪರಿಷತ್ತಿನಲ್ಲಿ ಹೇಳಿದ್ದಾರೆ.

ಇದಕ್ಕೆ ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಂತಹ ಆ್ಯಪ್‌ಗಳ ಹಾವಳಿಯನ್ನು ತಡೆಯಲು ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಕೇಂದ್ರ ಮತ್ತು ಗೂಗಲ್‌ನೊಂದಿಗೆ ಸಮಸ್ಯೆಯನ್ನು ಪ್ರಸ್ತಾಪಿಸಲಾಗಿದೆ. ಈಗಾಗಲೇ ಅಂತಹ 42 ಅಪ್ಲಿಕೇಶನ್‌ಗಳನ್ನು ಪ್ಲೇ ಸ್ಟೋರ್​​ನಿಂದ ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ಇನ್ನೂ ಸುಮಾರು 800 ಅಕ್ರಮ ಆ್ಯಪ್‌ಗಳು ಸಕ್ರಿಯವಾಗಿವೆ ಎಂದು ಅರುಣ್ ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರವು ಅಂತಹ ಅಪ್ಲಿಕೇಶನ್‌ಗಳನ್ನು ನಿಯಂತ್ರಿಸುವುದರಿಂದ ರಾಜ್ಯ ಸರ್ಕಾರವೊಂದರಿಂದಲೇ ಈ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರವು ಈ ವಿಷಯವನ್ನು ಕೇಂದ್ರದೊಂದಿಗೆ ಚರ್ಚಿಸಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 2,200 ಎಕರೆಗೂ ಹೆಚ್ಚು ಅರಣ್ಯ ಒತ್ತುವರಿ

1978ರ ನಂತರ ಬೆಂಗಳೂರು ನಗರ ಪ್ರದೇಶದಲ್ಲಿ ಲಭ್ಯವಿರುವ 16,988.26 ಎಕರೆ ಅರಣ್ಯ ಭೂಮಿಯ ಪೈಕಿ 2,284.22 ಎಕರೆ ಒತ್ತುವರಿಯಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ವಿಧಾನ ಪರಿಷತ್ತಿನಲ್ಲಿ ಹೇಳಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ತಿಳಿಸಿದೆ.

ಇದನ್ನೂ ಓದಿ: ಕುಂದುಕೊರತೆ, ಸಮಸ್ಯೆ ಆಲಿಸಲು ಸಿಎಂ ಹೊಸ ಟ್ವಿಟರ್​​ ಹ್ಯಾಂಡಲ್; ಏನೇನು ದಾಖಲೆ ಬೇಕು? ದೂರು ನೀಡುವುದು ಹೇಗೆ?

ಪರಿಷತ್ತಿನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅರಣ್ಯ ಭೂಮಿ ಒತ್ತುವರಿಯಾಗಿದ್ದು, 1,277.33 ಎಕರೆ ಒತ್ತುವರಿಯಾಗಿದೆ. ಬೆಂಗಳೂರು ಪೂರ್ವದಲ್ಲಿ 570 ಎಕರೆ ಮತ್ತು ಆನೇಕಲ್‌ನಲ್ಲಿ ಕ್ರಮವಾಗಿ 332 ಎಕರೆ ಒತ್ತುವರಿಯಾಗಿದೆ. ಬನ್ನೇರುಘಟ್ಟ ವಿಭಾಗದಲ್ಲಿ 587.15 ಎಕರೆ ಒತ್ತುವರಿಯಾಗಿದೆ. ಕರ್ನಾಟಕ ಅರಣ್ಯ ಕಾಯ್ದೆ 1963ರ ಅಡಿಯಲ್ಲಿ 1,051 ಪ್ರಕರಣಗಳು ದಾಖಲಾಗಿದ್ದು, ಒತ್ತುವರಿ ತೆರವಿಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ