AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸೇರಿದ ಸಿದ್ದರಾಮಯ್ಯ ಸರ್ಕಾರದ ​ಶಕ್ತಿ ಯೋಜನೆ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುತ್ತಿದೆ. ಎರಡು ವರ್ಷಗಳಲ್ಲಿ 500 ಕೋಟಿಗೂ ಹೆಚ್ಚು ಮಹಿಳೆಯರು ಈ ಯೋಜನೆಯ ಲಾಭ ಪಡೆದು ಪ್ರಯಾಣಿಸಿದ್ದಾರೆ. ಈ ಅಪಾರ ಯಶಸ್ಸಿನಿಂದಾಗಿ ಶಕ್ತಿ ಯೋಜನೆ "ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್" ನಲ್ಲಿ ಸ್ಥಾನ ಪಡೆದಿದೆ. ಶಕ್ತಿ ಯೋಜನೆ ರಾಜ್ಯದ ಆರ್ಥಿಕತೆ ಮತ್ತು ಮಹಿಳಾ ಸಬಲೀಕರಣಕ್ಕೆ ಕೊಡುಗೆ ನೀಡಿದೆ.

ಗೊಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸೇರಿದ ಸಿದ್ದರಾಮಯ್ಯ ಸರ್ಕಾರದ ​ಶಕ್ತಿ ಯೋಜನೆ
ಗೊಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸೇರಿದ ಸರ್ಕಾರದ ​ಶಕ್ತಿ ಯೋಜನೆ
Kiran Surya
| Updated By: ವಿವೇಕ ಬಿರಾದಾರ|

Updated on:Aug 18, 2025 | 5:11 PM

Share

ಬೆಂಗಳೂರು, ಆಗಸ್ಟ್​ 18: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ (Shakti Schme) ಕೂಡ ಒಂದು. ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಕರ್ನಾಟಕ ಸಾರಿಗೆ ಇಲಾಖೆಯ (Karnataka Transport Department) KSRTC, BMTC, NWKRTC ಮತ್ತು KKRTC ನಾಲ್ಕೂ ನಿಗಮಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಇದೀಗ, ಶಕ್ತಿ ಯೋಜನೆ ಪ್ರತಿಷ್ಠಿತ “ಗೊಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್​”ಗೆ (Golden Book of Record)ಸೇರ್ಪಡೆಯಾಗಿದೆ. 2023ರ ಜೂನ್ 11 ರಿಂದ 2025 ಜುಲೈ 25ರ ಅವಧಿಯಲ್ಲಿ ನಾಲ್ಕೂ ನಿಗಮದ ಸಾರಿಗೆ ಬಸ್​ಗಳಲ್ಲಿ 5049476416 ಮಹಿಳೆಯರು (500 ಕೋಟಿ) ಉಚಿತ ಟಿಕೇಟ್ ಪಡೆದು ಪ್ರಯಾಣ ಮಾಡಿದ್ದಾರೆ. ಈ ಕಾರಣದಿಂದ ಶಕ್ತಿ ಯೋಜನೆ ಗೊಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್​​ನಲ್ಲಿ ಸ್ಥಾನ‌ ಪಡೆದಿದೆ.

Beyond Free Rides ಎಂಬ ಹೆಸರಿನಲ್ಲಿ Sustainable Mobility Network ವು ದೇಶದ 10 ನಗರಗಳಲ್ಲಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ನಡೆಸಿರುವ ಅಧ್ಯಯನ ನಡೆಸಿತು. ಬೆಂಗಳೂರಿನಲ್ಲಿ ಶೇ 23 ರಷ್ಟು ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಶೇ 21 ರಷ್ಟು ಹೆಚ್ಚು ಮಹಿಳಾ ಉದ್ಯೋಗಿಗಳು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಅಧ್ಯಯನ ವರದಿಯಲ್ಲಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಶಕ್ತಿ ಯೋಜನೆ ಜಾರಿಯಿಂದಾಗಿ ಇಷ್ಟು ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇದರಿಂದ‌ ರಾಜ್ಯದ ತಲಾ ಆದಾಯವು ಹೆಚ್ಚಳವಾಗಿದೆ. ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಗೌರವ ಸಮರ್ಪಿಸುತ್ತೇನೆ. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ‌ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿದೆ. ನಮ್ಮ ಸರ್ಕಾರದ ಶಕ್ತಿ‌ ಯೋಜನೆಯ ಯಶಸ್ಸಿಗೆ ಹಿಡಿ‌ದ ಕೈಗನ್ನಡಿಯಾಗಿದೆ. ಈ ಚಾರಿತ್ರಿಕ ಸಾಧನೆಗೆ ಕಾರಣರಾದ ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್​ಡಬ್ಲೂಕೆಆರ್​ಟಿಸಿ ಹಾಗೂ ಕೆಕೆಆರ್​ಟಿಸಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆಯಿಂದ ಬಹಳ ಪ್ರಯೋಜನವಾಗುತ್ತಿದೆ ಎನ್ನುವ ಮಹಿಳೆ ಮತ್ತು ಕಿನ್ನರ್ ಸಮುದಾಯ

ದಾಖಲೆ ನಿರ್ಮಿಸಿದ ಶಕ್ತಿ ಯೋಜನೆ

ಮಹಿಳೆಯರಿಗೆ ಉಚಿತ ಬಸ್‌ ಸೌಲಭ್ಯ ಒದಗಿಸುತ್ತಿರುವ ಶಕ್ತಿ ಯೋಜನೆ ಜಾರಿಗೆ ಬಂದು ಎರಡು ವರ್ಷ ಕಳೆದಿದೆ. 2023ರ ಜೂನ್‌ 11 ರಂದು ಆರಂಭವಾಗಿದ್ದ ಈ ಯೋಜನೆಗೆ ಮಹಿಳೆಯರು ‌ಬಹುಪರಾಕ್ ಎಂದಿದ್ದಾರೆ. 2025ರ ಜುಲೈ 14ರವರೆಗೆ ನಾಲ್ಕೂ ನಿಗಮಗಳಲ್ಲಿ 500 ಕೋಟಿ ಮಹಿಳೆಯರು ಸಂಚಾರ ಮಾಡಿದ್ದರು. ನಾಲ್ಕೂ ನಿಗಮಗಳಲ್ಲಿ ಪ್ರತಿದಿನ ಅಂದಾಜು 80 ಲಕ್ಷಕ್ಕೂ ಹೆಚ್ಚಿನ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಉಚಿತ ಟಿಕೆಟ್​ ಪಡೆದು ಪ್ರಯಾಣಿಸಿದ್ದರು.

ಬಿಎಂಟಿಸಿಯಲ್ಲಿ 157.33 ಕೋಟಿ, ಕೆಎಸ್​ಆರ್​ಟಿಸಿಯಲ್ಲಿ 151 ಕೋಟಿ, ಎನ್​ಡಬ್ಲೂಕೆಆರ್​ಟಿಸಿಯಲ್ಲಿ 117 ಕೋಟಿ ಮತ್ತು ಕೆಕೆಆರ್​ಟಿಸಿಯಲ್ಲಿ 72 ಕೋಟಿ ಮಹಿಳೆಯರು ಜುಲೈ 14ರವರೆಗೆ ಸಂಚಾರ ಮಾಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:11 pm, Mon, 18 August 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ