AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಕಂಡಕ್ಟರ್ ಪ್ಲ್ಯಾಂಟ್ ನಿರ್ಮಾಣ ಕಂಪನಿ ಜೊತೆ ಸರ್ಕಾರ ಒಪ್ಪಂದ; ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಒಡಂಬಡಿಕೆ ಪತ್ರಕ್ಕೆ ಸಹಿ

ರಾಜ್ಯ ಸರ್ಕಾರದ ಪರವಾಗಿ ಕೈಗಾರಿಕೆ ಇಲಾಖೆಯ ಎಸಿಎಸ್ ಡಾ.ರಮಣರೆಡ್ಡಿ ಮತ್ತು ISMC ಅನಲಾಗ ಫ್ಯಾಬ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ಅಜಯ ಜಲನ್ ಒಡಂಬಡಿಕೆ ಪತ್ರಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಹಿ ಹಾಕಲಾಯಿತು. ಹಾಗೂ ಒಡಂಬಡಿಕೆ ಪತ್ರವನ್ನು ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪರಸ್ಪರ ವಿನಿಮಯ ಮಾಡಿಕೊಳ್ಳಲಾಯ್ತು.

ಸೆಮಿಕಂಡಕ್ಟರ್ ಪ್ಲ್ಯಾಂಟ್ ನಿರ್ಮಾಣ ಕಂಪನಿ ಜೊತೆ ಸರ್ಕಾರ ಒಪ್ಪಂದ; ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಒಡಂಬಡಿಕೆ ಪತ್ರಕ್ಕೆ ಸಹಿ
ಸೆಮಿಕಂಡಕ್ಟರ್ ಪ್ಲ್ಯಾಂಟ್ ನಿರ್ಮಾಣ ಕಂಪನಿ ಜೊತೆ ಸರ್ಕಾರ ಒಪ್ಪಂದ
TV9 Web
| Edited By: |

Updated on:May 01, 2022 | 2:07 PM

Share

ಬೆಂಗಳೂರು: ಸೆಮಿಕಂಡಕ್ಟರ್ ಪ್ಲಾಂಟ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮತ್ತು ISMC ಅನಲಾಗ ಫ್ಯಾಬ್ ಪ್ರೈವೇಟ್ ಲಿಮಿಟೆಡ್ ಕಂಪನಿ ಜೊತೆ ಪರಸ್ಪರ ಒಡಂಬಡಿಕೆ ಪತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಹಿ ಹಾಕಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಕೈಗಾರಿಕೆ ಇಲಾಖೆಯ ಎಸಿಎಸ್ ಡಾ.ರಮಣರೆಡ್ಡಿ ಮತ್ತು ISMC ಅನಲಾಗ ಫ್ಯಾಬ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ಅಜಯ ಜಲನ್ ಒಡಂಬಡಿಕೆ ಪತ್ರಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಹಿ ಹಾಕಲಾಯಿತು. ಹಾಗೂ ಒಡಂಬಡಿಕೆ ಪತ್ರವನ್ನು ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪರಸ್ಪರ ವಿನಿಮಯ ಮಾಡಿಕೊಳ್ಳಲಾಯ್ತು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಮತ್ತು ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಸಿಎಂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಐಟಿ ಬಿಟಿ ನಿರ್ದೇಶಕಿ ಮೀನಾ ನಾಗರಾಜ, ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನಾವರ್ ಗಿಲೋನ್, ಇರೇಜ್ ಇಂಬರಮನ್ ಉಪಸ್ಥಿತರಿದ್ದರು.

CM Bommai

ಸೆಮಿಕಂಡಕ್ಟರ್ ಪ್ಲ್ಯಾಂಟ್ ನಿರ್ಮಾಣ ಕಂಪನಿ ಜೊತೆ ಸರ್ಕಾರ ಒಪ್ಪಂದ

ಜಾಗತಿಕ ಮಟ್ಟದಲ್ಲಿ ಸೆಮಿಕಂಡಕ್ಟರ್ ಚಿಪ್​​ಗಳ ಕೊರತೆ ಎದುರಾಗಿದೆ. ಆತ್ಮನಿರ್ಭರ ಪರಿಕಲ್ಪನೆಯಡಿಯಲ್ಲಿ ಸೆಮಿಕಂಡಕ್ಟರ್ ತಯಾರಿಕೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೆಮಿಕಂಡಕ್ಟರ್ ಪ್ಲಾಂಟ್ ನಿರ್ಮಾಣಕ್ಕೆ ಖಾಸಗಿ ಕಂಪನಿಯೊಂದಿಗೆ ರಾಜ್ಯ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ. ರಾಜ್ಯ ಸರ್ಕಾರದ ಪರವಾಗಿ ಕೈಗಾರಿಕೆ ಇಲಾಖೆಯ ಎಸಿಎಸ್ ಡಾ.ರಮಣರೆಡ್ಡಿ ಮತ್ತು ISMC ಅನಲಾಗ ಫ್ಯಾಬ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ಅಜಯ ಜಲನ್ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ 22,900 ಕೋಟಿ ರೂ.ಗಳ ಹೂಡಿಕೆಯ ದೇಶದ ಮೊದಲ ಪ್ರತಿಷ್ಠಿತ ಸೆಮಿಕಂಡಕ್ಟರ್ ಪ್ಲಾಂಟ್ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಾಗೂ ಐಎಸ್‍ಎಂಸಿ ಅನಲಾಗ್ ಫ್ಯಾಬ್ ಪ್ರೈ.ಲಿ ನಡುವೆ ಒಪ್ಪಂದಕ್ಕೆ ಇಂದು ಸಹಿ ಹಾಕಲಾಗಿದೆ. ಈ ಒಪ್ಪಂದದಿಂದ ಏಳು ವರ್ಷಗಳ ಅವಧಿಯಲ್ಲಿ ಒಟ್ಟು 1500 ಜನರಿಗೆ ಉದ್ಯೋಗ ಒದಗಿಸುವ ನಿರೀಕ್ಷೆ ಇದೆ. ಸೆಮಿಕಂಡಕ್ಟರ್ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮತ್ತು ಐಎಸ್​ಎಂಸಿ ಅನಲಾಗ್ ಫ್ಯಾಬ್ ಪ್ರೈ.ಲಿ. ಸಂಸ್ಥೆ ಪರಸ್ಪರ ಮಾಡಿಕೊಂಡಿರುವ ಒಪ್ಪಂದವು ವಿಶ್ವದ ಸೆಮಿಕಂಡಕ್ಟರ್ ನಕ್ಷೆಯಲ್ಲಿ ಕರ್ನಾಟಕವನ್ನು ಗುರುತಿಸುವಂತೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿವಿಧ ರಾಜ್ಯಗಳು ಸೆಮಿಕಂಡಕ್ಟರ್ ಫ್ಯಾಬ್ ಹೂಡಿಕೆಗಳನ್ನು ಆಕರ್ಷಿಸಲು ಸ್ಪರ್ಧಿಸುತ್ತಿದ್ಧ ವೇಳೆಯಲ್ಲಿಯೇ ಈ ಮಹತ್ವದ ಒಪ್ಪಂದಕ್ಕೆ ಕರ್ನಾಟಕ ಸರ್ಕಾರ ಸಹಿ ಹಾಕಿದೆ. ಕೇವಲ ಆರ್ಥಿಕ ಪ್ರೋತ್ಸಾಹಕಗಳು ಮಾತ್ರವಲ್ಲದೆ, ಒಟ್ಟಾರೆ ಕಾರ್ಯನಿರ್ವಹಣೆಗೆ ಅಗತ್ಯವಿರುವ ವಾತಾವರಣವನ್ನು ನಿರ್ಮಿಸುವುದೂ ಮುಖ್ಯ ಎನ್ನುವುದನ್ನು ಕರ್ನಾಟಕ ಸರ್ಕಾರ ಅರಿತಿದೆ. ದೇಶದಲ್ಲಿಯೇ ಅತ್ಯುತ್ತಮ ಮೂಲಭೂತ ಸೌಕರ್ಯ ಹಾಗೂ ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ಹೊಂದಿದೆ ಎಂದು ಸಿಎಂ ಹೇಳಿದರು. ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಇದೊಂದು ಬಹುದೊಡ್ಡ ಹೆಜ್ಜೆ. ಸವಾಲುಗಳು ಸಹ ದೊಡ್ಡಮಟ್ಟದಲ್ಲಿ ಇವೆ. ಈ ಸವಾಲುಗಳನ್ನು ಮೆಟ್ಟಿಲುಗಳನ್ನಾಗಿ ಪರಿವರ್ತಿಸಿಕೊಳ್ಳಲೂ ಈ ಒಪ್ಪಂದ ಅವಕಾಶವನ್ನು ಕಲ್ಪಿಸಿದೆ ಎಂದರು. ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಸರ್ಕಾರದ ಸೆಮಿಕಂಡಕ್ಟರ್ ಮಿಷನ್ ನ್ನು ಅನುಮೋದಿಸಿರುವುದರಿಂದ ಸೆಮಿಕಂಡಕ್ಟರ್ ವಲಯದಲ್ಲಿ ಕರ್ನಾಟಕ ಮುಂದುವರೆಯಲು ಸಾಧ್ಯವಾಗಿದೆ. ಒಡಂಬಡಿಕೆಯು ಇಸ್ರೇಲ್ ಹಾಗೂ ಭಾರತದ ನಡುವೆ ತಂತ್ರಜ್ಞಾನ ಹಾಗೂ ಸಂಸ್ಕೃತಿಗಳ ವಿನಿಮಯಕ್ಕೂ ವೇದಿಕೆ ಕಲ್ಪಿಸಲಿದೆ ಎಂದು ಸಿಎಂ ಹೇಳಿದರು.

CM Bommai

ಸೆಮಿಕಂಡಕ್ಟರ್ ಪ್ಲ್ಯಾಂಟ್ ನಿರ್ಮಾಣ ಕಂಪನಿ ಜೊತೆ ಸರ್ಕಾರ ಒಪ್ಪಂದ

ಇದನ್ನೂ ಓದಿ: ಫನ್ನಿ ಕಾರಣಕ್ಕೆ ಮತ್ತೆ ಒಂದಾದ ಕರೀನಾ ಕಪೂರ್​​-ಆಮಿರ್​ ಖಾನ್​; ವಿಡಿಯೋ ವೈರಲ್​

Published On - 1:17 pm, Sun, 1 May 22