AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಥಸಂಚಲನದಲ್ಲಿ ಭಾಗಿ: RSS ಕಟ್ಟಾಳುಗೆ ನೀಡಿದ್ದ ಹುದ್ದೆ ವಾಪಸ್ ಪಡೆದ ಸರ್ಕಾರ, ಕ್ಷಮೆ ಕೇಳಿದ ಶಾಸಕ

ಆರ್​​ಎಸ್​ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಸರ್ಕಾರಿ ಹಾಗೂ ಗುತ್ತಿಗೆ ನೌಕರರನ್ನು ಸಸ್ಪೆಂಡ್ ಮಾಡಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಆರ್​​ಎಸ್​ಎಸ್​ ಕಟ್ಟಾಳು ಡಾ. ಶ್ರೀಧರ್​ ಗೆ ಸರ್ಕಾರ ಮಹತ್ವದ ಹುದ್ದೆ ನೀಡಿದ್ದು, ಇದು ಕಾಂಗ್ರೆಸ್​​ನಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆಕ್ರೋಶ ತೀವ್ರಗೊಳ್ಳುತ್ತಿದ್ದಂತೆಯೇ ನೀಡಲಾಗಿದ್ದ ಹುದ್ದೆಯನ್ನು ಹಿಂಪಡೆದುಕೊಂಡು ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಕೈ ಶಾಸಕ ಸಿಎಂ ಬಳಿ ಕ್ಷಮೆಯಾಚಿಸಿದ್ದಾರೆ.

ಪಥಸಂಚಲನದಲ್ಲಿ ಭಾಗಿ: RSS ಕಟ್ಟಾಳುಗೆ ನೀಡಿದ್ದ ಹುದ್ದೆ ವಾಪಸ್ ಪಡೆದ ಸರ್ಕಾರ, ಕ್ಷಮೆ ಕೇಳಿದ ಶಾಸಕ
Dr Sridhar
ರಮೇಶ್ ಬಿ. ಜವಳಗೇರಾ
|

Updated on:Oct 27, 2025 | 6:20 PM

Share

ತುಮಕೂರು, (ಅಕ್ಟೋಬರ್ 27): ಆರ್‌ಎಸ್‌ಎಸ್‌(RSS) ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯ ಶ್ರೀಧರ್ ಹೆಸರನ್ನು ಯಶಸ್ವಿನಿ ಟ್ರಸ್ಟ್‌ನಿಂದ ತೆಗೆದುಹಾಕಲಾಗಿದೆ. ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯರಿಗೆ ಸರ್ಕಾರದ ಯಶಸ್ವಿನಿ ಟ್ರಸ್ಟ್‌ ಟ್ರಸ್ಟಿಯಾಗಿ ನೇಮಿಸಲಾಗಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದು ಕಾಂಗ್ರೆಸ್‌ ಪಕ್ಷವು ಹೊಂದಿರುವ ಕೋಮುವಾದಿ ವಿರೋಧಿ ಮತ್ತು ಸಾಮರಸ್ಯ ನೀತಿಗೆ ವಿರುದ್ಧವಾಗಿದೆ. ತಕ್ಷಣವೇ ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಬಿ ಶಶಿಧರ್ ಒತ್ತಾಯಿಸಿದ್ದರು. ತೀವ್ರ ವಿರೋಧಗಳ ಬೆನ್ನಲ್ಲೇ ಯಶಸ್ವಿನಿ ಟ್ರಸ್ಟ್‌ನ ಟ್ರಸ್ಟಿ ಸ್ಥಾನದಿಂದ ವೈದ್ಯ ಶ್ರೀಧರ್ ಹೆಸರನ್ನು ಕೈಬಿಡಲಾಗಿದೆ. ಈ ಸಂಬಂಧ ಸರ್ಕಾರ ಆದೇಶವನ್ನು ಹೊರಡಿಸಿದ್ದು, ಆಡಳಿತಾತ್ಮಕ ದೃಷ್ಟಿಯಿಂದ ಈ ಹಿಂದಿನ ಆದೇಶವನ್ನು ಮಾರ್ಪಡಿಸಿ, ಡಾ. ಶೀಧರ್ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ತಿಳಿಸಿದೆ.

ಈ ಹಿಂದಿನ ಆದೇಶ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಶಶಿಧರ್, “ಅಕ್ಟೋಬರ್ 12ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಆಯೋಜಿಸಿತ್ತು. ಆ ಕಾರ್ಯಕ್ರಮದಲ್ಲಿ ಕುಮಾರ್ ಆಸ್ಪತ್ರೆಯ ಡಾ. ಶ್ರೀಧರ್ ಅವರು ಗಣವೇಶ ಧರಿಸಿ ಭಾಗಿಯಾಗಿದ್ದರು. ಮಾತ್ರವಲ್ಲದೆ, ಆ್ಯಂಬುಲೆನ್ಸ್‌ಅನ್ನೂ ಕೊಂಡೊಯ್ದಿದ್ದರು. ಅವರನ್ನು ಸರ್ಕಾರದ ‘ಯಶಸ್ವಿನಿ ಟ್ರಸ್ಟ್‌’ಗೆ ಟ್ರಸ್ಟಿಯಾಗಿ ನೇಮಿಸುವಂತೆ ಕಾಂಗ್ರೆಸ್‌ ಶಾಸಕ ಪಡಕ್ಷರಿ ಅವರು ಶಿಫಾರಸು ಮಾಡಿದ್ದರು. ಅವರ ಶಿಫಾರಸಿನಂತೆ ಸರ್ಕಾರವು ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿದೆ. ಇದು, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಕಳವಳ ಹುಟ್ಟುಹಾಕಿದೆ” ಎಂದು ತಿಳಿಸಿದ್ದರು.

ಇದನ್ನೂ ಓದಿ: RSS ಕಾರ್ಯಕರ್ತನಿಗೆ ಮಹತ್ವದ ಹುದ್ದೆ: ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದ ಕೈ ಕಾರ್ಯಕರ್ತರು

ಸಿಎಂ ಬಳಿಕ ಕ್ಷಮೆಯಾಚಿಸಿದ ಶಾಸಕ

ಇನ್ನು ಈ ಬಗ್ಗೆ ತಿಪಟೂರಿನಲ್ಲಿ ಶಾಸಕ ಕೆ. ಷಡಾಕ್ಷರಿ ಪ್ರತಿಕ್ರಿಯಿಸಿದ್ದು, ಪ್ರಕರಣದಿಂದ ಸಿಎಂಗೆ ಮುಜುಗರವಾಗಿದ್ದರೆ ಕ್ಷಮೆ ಕೇಳುತ್ತೇನೆ. ಡಾ.ಶ್ರೀಧರ್ ಆರ್.ಎಸ್.ಎಸ್ ನಲ್ಲಿ ಸಕ್ರಿಯವಾಗಿರುವುದು ನನಗೆ ಗೊತ್ತಿರಲಿಲ್ಲ. ಅವರ ಅಭಿಮಾನಿಗಳು ಜನರ ಸೇವೆ ಮಾಡಿದ್ದಾರೆ ಅವಕಾಶ ನೀಡಿ ಎಂದು ಪ್ರಸ್ತಾಪ ಮಾಡಿದ್ದರು. ಉಚಿತವಾಗಿ ಆಪರೇಷನ್, ಔಷಧಿ ನೀಡಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಎಂದು ಮನವಿ ಮಾಡಿದ್ದರು. ಆರ್.ಎಸ್.ಎಸ್ ನಾವು ಬೆಂಬಲಿಸುವುದಿಲ್ಲ. ನನಗೆ ಆರ್.ಎಸ್.ಎಸ್ ಸಂಪರ್ಕ ಇಲ್ಲ. ಉದ್ದೇಶ ಪೂರಕವಾಗಿ ಆರ್.ಎಸ್.ಎಸ್ ಬೆಂಬಲಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:39 pm, Mon, 27 October 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ