AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡ್​ನ್ಯೂಸ್: ಇಂದಿನಿಂದ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿಗೆ ಅವಕಾಶ

ಬಿಪಿಎಲ್ ಕಾರ್ಡ್ ನಲ್ಲಿ ಪುರುಷ ಮುಖ್ಯಸ್ಥರಾಗಿದ್ದರಿಂದ ಕೆಲ ಮಹಿಳೆಯರಿಗೆ ಸಂಕಷ್ಟ ಎದುರಾಗಿದೆ. ಮನೆ ಮುಖ್ಯಸ್ಥರು ಪುರುಷನಾಗಿದ್ದರಿಂದ ಮಹಿಳೆಗೆ ಗೃಹಲಕ್ಷ್ಮೀ ಯೋಜನೆ ಸಿಗುತ್ತಿಲ್ಲ. 2000 ರೂ.ಸಿಗುತ್ತಿಲ್ಲ ಎಂದು ನಿರಾಸೆಗೊಂಡ ಮಹಿಳೆಯರಿಗೆ ಸರ್ಕಾರದ ಸಿಹಿ ಸುದ್ದಿ ನೀಡಿದೆ. ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಅವಕಾಶ ಮಾಡಿಕೊಟ್ಟಿದೆ.

ಗುಡ್​ನ್ಯೂಸ್: ಇಂದಿನಿಂದ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿಗೆ ಅವಕಾಶ
ರೇಷನ್ ಕಾರ್ಡ್
Poornima Agali Nagaraj
Poornima Agali Nagaraj| Edited By: |

Updated on: Sep 01, 2023 | 8:59 AM

Share

ಬೆಂಗಳೂರು, (ಸೆಪ್ಟೆಂಬರ್ 01): ಹೊಸ ಪಡಿತರ ಚೀಟಿ (ration card) ವಿತರಣೆಗೆ ಸರ್ಕಾರ ಯಾವಾಗ ಅನುಮತಿ ಕೊಡುತ್ತದೆ ಎಂಬ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇಲ್ಲ. ಇನ್ನು ಈಗಾಗಲೇ ಬಿಪಿಎಲ್ ಕಾರ್ಡ್​​ಗೆ ಸಲ್ಲಿಕೆಯಾದ ಅರ್ಜಿಗಳು ವಿಲೇವಾರಿಯಾಗಿಲ್ಲ. ಇದರ ಮಧ್ಯೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪಡೆದುಕೊಳ್ಳಲು ಬಿಪಿಎಲ್​ ಕಾರ್ಡ್​ಗಾಗಿ ಜನರು ಅಲೆದಾಡುತ್ತಿದ್ದಾರೆ. ಇದರ ಮಧ್ಯೆ ಬಿಪಿಎಲ್ ದಾರರಿಗೆ ಹೊಸ ಸಂಕಷ್ಟ ಎದುರಾಗಿದೆ. ಹೌದು…ಬಿಪಿಎಲ್​ ಕಾರ್ಡ್​ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರಿಂದ ಮಹಿಳೆಯರಿಗೆ ಸರ್ಕಾರ ನೀಡುತ್ತಿರುವ 2000 ರೂ. ಗೃಹಲಕ್ಷ್ಮೀ ಯೋಜನೆಯಿಂದ(gruha lakshmi scheme)  ವಂಚಿತರಾಗಿದ್ದಾರೆ. ಇದೀಗ ಸರ್ಕಾರ, ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಇಂದಿನಿಂದ(ಸೆಪ್ಟೆಂಬರ್ 01) ಅವಕಾಶ ನೀಡಿದೆ.

ಇಂದಿನಿಂದ ತಿದ್ದುಪಡಿಗೆ ಅವಕಾಶ

ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ವಯಸ್ಕ ಮಹಿಳೆ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರೆಯಲಿದೆ. ಆದ್ರೆ, ಆಹಾರ ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪುರುಷ ಮುಖ್ಯಸ್ಥ ಕಾರ್ಡ್ ದಾರರು ಇದ್ದಾರೆ. ವಯಸ್ಕ ಮಹಿಳೆ ಇದ್ದೂ ಪುರುಷ ಮುಖ್ಯಸ್ಥ ಇರುವ ಕಾರ್ಡ್ ನಿಂದ ಅರ್ಜಿ ಸಲ್ಲಿಸಲು ಬರಲ್ಲ. ಅಲ್ಲದೇ ಮನೆಯ ಮಹಿಳೆ ಇದ್ದರೂ ಗೃಹಲಕ್ಷ್ಮಿ ಎರಡು ಸಾವಿರ ದುಡ್ಡು ಸಿಗದ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಮನೆಯೊಡತಿ ಹೆಸರು ಬದಲಾವಣೆಗೆ ಸೆಪ್ಟೆಂಬರ್​ 1ರಿಂದ ಸೆ,10ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಈ ಹತ್ತು ದಿನದಲ್ಲಿ ಹೆಸರು ಬದಲಾವಣೆ ಮಾಡಿಸಿಕೊಳ್ಳಬೇಕು.

ಇದನ್ನೂ ಓದಿ: ಸೆಪ್ಟೆಂಬರ್​ 4 ರಂದು ರಾಜ್ಯದ ಬರ ಪೀಡಿತ ತಾಲೂಕು ಘೋಷಣೆ : ಚೆಲುವರಾಯಸ್ವಾಮಿ

ರೇಷನ್ ಕಾರ್ಡ್​ನಲ್ಲಿ ಹೆಸರು ಬದಲಾವಣೆ, ಆಧಾರ್ ಕಾರ್ಡ್​ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರು ಸೇರಿಸುವುದು, ಯಾರಾದರೂ ಮೃತಪಟ್ಟರೆ ಅಂಥವರ ಹೆಸರು ಡಿಲೀಟ್, ಬೇರೆ ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ಪರಿಷ್ಕರಣೆ ಮಾಡಲು ಆಹಾರ ಇಲಾಖೆ ಅವಕಾಶ ಕೊಟ್ಟಿದೆ. ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಓನ್ ಹಾಗೂ ಕರ್ನಾಟಕ ಓನ್ ಸೇರಿ ಇತರ ಕಡೆಗಳಲ್ಲಿ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.

ಆಹಾರ ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪುರುಷ ಮುಖ್ಯಸ್ಥ ಕಾರ್ಡ್ ದಾರರು ಇದ್ದಾರೆ. ಕಾರ್ಡ್​ನ ಮುಖ್ಯಸ್ಥರು ಪುರುಷಾರಾಗಿದ್ದರೆ ಅನ್ನಭಾಗ್ಯ, ಗೃಹಲಕ್ಷ್ಮಿ ಸ್ಕೀಂ ಸಿಗಲ್ಲ. ಗೃಹಲಕ್ಷ್ಮಿ ಅರ್ಜಿ ಸಲ್ಲಿಸಲು ಬಿಪಿಎಲ್, ಎಪಿಎಲ್ ಕಾರ್ಡ್ ಮನೆಯೊಡತಿಯೇ ಇರಬೇಕು. ಇಲ್ಲದಿದ್ದರೆ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಎರಡೂ ಯೋಜನೆಗೂ ಅನರ್ಹರು. ಅಲ್ಲದೇ ಕಾರ್ಡ್ ನಲ್ಲಿ 18 ವರ್ಷದ ಒಳಗಿದ್ದ ಬಾಲಕಿಯರು ಇದ್ರೆ ತೊಂದರೆ ಇಲ್ಲ. ಆದ್ರೆ ವಯಸ್ಕ ಮಹಿಳೆ ಇದ್ದೂ ಕಾರ್ಡ್ ಮುಖ್ಯಸ್ಥ ಗಂಡಸಾಗಿದ್ದರೆ ಅಂತವರಿಗೆ ಅನ್ನಭಾಗ್ಯ ಸ್ಕೀಂ ಸಿಗಲ್ಲ. ಹೀಗಾಗಿ ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಅವಕಾಶ ನೀಡಲಾಗಿದೆ.

ನಿಮ್ಮ ಜಿಲ್ಲೆಗಳ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Poornima Agali Nagaraj
Poornima Agali Nagaraj
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ