AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಬರಸ್ತಾನಗಳಿಗೆ ಸರ್ಕಾರಿ, ಕಂದಾಯ ಭೂಮಿ ನೀಡಲು ಮುಂದಾದ ಕರ್ನಾಟಕ ಸರ್ಕಾರ

ಕರ್ನಾಟಕದಲ್ಲಿ ವಕ್ಫ್​ ಭೂ ವಿವಾದ ಬೆನ್ನಲ್ಲೇ ಮತ್ತೊಂದು ಭೂ ಸಮರ ಉದ್ಭವಿಸುವ ಸಾಧ್ಯತೆ ಇದೆ. ಖಬರಸ್ತಾನಗಳಿಗೆ ಸರ್ಕಾರಿ, ಕಂದಾಯ ಭೂಮಿ ನೀಡಲು ಸರ್ಕಾರ ಮುಂದಾಗಿದ್ದು, ಪರ-ವಿರೋಧ ಚರ್ಚೆ ಶುರುವಾಗಿದೆ. ಈಗಾಗಲೇ ವಕ್ಫ್​ ವಿಚಾರವಾಗಿ ದೊಡ್ಡ ಕದನವೇ ರಾಜ್ಯದಲ್ಲಿ ನಡೆಯುತ್ತಿದ್ದು, ಈಗ ಹೊಸದೊಂದು ವಿವಾದ ತಲೆದೋರಿದೆ.

ಖಬರಸ್ತಾನಗಳಿಗೆ ಸರ್ಕಾರಿ, ಕಂದಾಯ ಭೂಮಿ ನೀಡಲು ಮುಂದಾದ ಕರ್ನಾಟಕ ಸರ್ಕಾರ
ಖಬರಸ್ತಾನImage Credit source: Morocco world news
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Nov 15, 2024 | 9:05 AM

Share

ಕರ್ನಾಟಕದಲ್ಲಿ ವಕ್ಫ್​ ಭೂ ವಿವಾದ ಬೆನ್ನಲ್ಲೇ ಮತ್ತೊಂದು ಭೂ ಸಮರ ಉದ್ಭವಿಸುವ ಸಾಧ್ಯತೆ ಇದೆ. ಮುಸ್ಲಿಮರ ಖಬರಸ್ತಾನಗಳಿಗೆ ಸರ್ಕಾರಿ, ಕಂದಾಯ ಭೂಮಿ ನೀಡಲು ಸರ್ಕಾರ ಮುಂದಾಗಿದ್ದು, ಪರ-ವಿರೋಧ ಚರ್ಚೆ ಶುರುವಾಗಿದೆ. ಈಗಾಗಲೇ ವಕ್ಫ್​ ವಿಚಾರವಾಗಿ ದೊಡ್ಡ ಕದನವೇ ರಾಜ್ಯದಲ್ಲಿ ನಡೆಯುತ್ತಿದ್ದು, ಈಗ ಹೊಸದೊಂದು ವಿವಾದ ತಲೆದೋರಿದೆ.

ರಾಜ್ಯದ 328 ಖಬರಸ್ತಾನಗಳಿಗೆ ಸರ್ಕಾರಿ ಭೂಮಿ ನೀಡುವ ಬಗ್ಗೆ ಸರ್ಕಾರ ತೀರ್ಮಾನ ಮಾಡಿದೆ. ಸರ್ಕಾರಿ ಜಮೀನನ್ನು ಮಂಜುರಾತಿ ನೀಡಲು ಸರ್ಕಾರ ಮುಂದಾಗಿದೆ. ಸುಮಾರು 2750 ಎಕರೆ ಭೂಮಿ ಮಂಜುರಾತಿ ನೀಡಲು ತಯಾರಿ ನಡೆಸಿದ್ದು, ಸರ್ಕಾರಿ ಭೂಮಿಯನ್ನು ಖಬರಸ್ತಾನವಾಗಿ ಪರಿವರ್ತಿಸುವ ಯೋಜನೆ ಇದಾಗಿದೆ.

ಬೆಂಗಳೂರು, ರಾಯಚೂರು, ಕಲಬುರಗಿ, ಹಾಸನ, ದಕ್ಷಿಣಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೋಜನೆ ಕಾರ್ಯಗತಗೊಳಿಸಲಾಗುತ್ತಿದೆ. ವಕ್ಫ್ ಅಧೀನದ ಮಸೀದಿ, ಪ್ರಾರ್ಥನಾ ಮಂದಿರದ ಅಧೀನದಲ್ಲಿರುವ ಖಬರಸ್ತಾನಗಳಿಗೆ ಜಮೀನು ನೀಡಲಾಗುತ್ತಿದೆ.

ಮತ್ತಷ್ಟು ಓದಿ: ಮುಡಾ ಹಗರಣ ಬಗೆಯುತ್ತಿದೆ ಇಡಿ: ಸಿಎಂ ಸಿದ್ದರಾಮಯ್ಯ ಖಾಸಗಿ ಆಪ್ತ ಸಹಾಯಕನಿಗೆ ಗ್ರಿಲ್

ಈ ಬಗ್ಗೆ ಈ ಹಿಂದೆಯೇ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದರು. ಕಳೆದ ಎಪ್ರಿಲ್ 16ರಂದು ಅಂದಿನ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ , ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಗೆ ಸೂಚನೆ ನೀಡಿದ್ದರು.

ರಾಜ್ಯ ಮಟ್ಟದ ವಕ್ಫ್ ಆಸ್ತಿಗಳ ಕಾರ್ಯಪಡೆಯು ಈ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ಕಾರವನ್ನು 328 ಖಬರಸ್ತಾನಗಳಿಗೆ ಕಂದಾಯ ಭೂಮಿಯನ್ನು ಮಂಜುರಾತಿ ಮಾಡುವಂತೆ ಕೋರಿದ್ದರು. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಡಾ ಶಾಲಿನಿ ರಜನೀಶ್ ಸೂಚನೆ ನೀಡಿದ್ದರು. ಸರ್ಕಾರಿ ಭೂಮಿ ಲಭ್ಯವಿಲ್ಲದಿದ್ದರೆ ಖಾಸಗಿ ಜಮೀನು ಖರೀದಿಸಿ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದ್ದರು.

ಇನ್ನೊಂದೆಡೆ  ರಾಜ್ಯದ 34,223 ಸಿ ಗ್ರೇಡ್ ದೇವಾಲಯಗಳ ಸುತ್ತಲಿನ ಬಹುತೇಕ ಜಾಗ ಸರ್ಕಾರಿ ಭೂಮಿ. ಈ ಭೂಮಿಗೆ ದೇವಾಲಯದ ಹೆಸರಿನಲ್ಲಿ ಮಂಜೂರಾತಿ ನೀಡುವಂತೆ 2013ರಿಂದ ಧಾರ್ವಿುಕ ಪರಿಷತ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಲೇ ಇದೆ. ರಾಜ್ಯದ 5,730 ಪುರಾತನ ಧಾರ್ವಿುಕ ದೇವಾಲಯಕ್ಕೆ ಪಹಣಿ ಇಲ್ಲ. ಇವು ಇನ್ನೂ ಕಂದಾಯ ಇಲಾಖೆಯ ಭೂಮಿಯಲ್ಲೇ ಇವೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ