ಹೊಸ ಕಾರು, ಬೈಕ್ ಖರೀದಿಸುವವರಿಗೆ ಸರ್ಕಾರದಿಂದ ಶಾಕ್: ಫೆಬ್ರವರಿಯಿಂದ ರಿಜಿಸ್ಟ್ರೇಷನ್ ದರ ಏರಿಕೆ

ರಾಜ್ಯ ಸಾರಿಗೆ ಇಲಾಖೆ ಜನವರಿ ತಿಂಗಳಲ್ಲೇ ರಾಜ್ಯದ ಜನರಿಗೆ ಎರಡೆರಡು ಶಾಕ್ ನೀಡಲು ಮುಂದಾಗಿದೆ. ಈಗಾಗಲೇ ಬಸ್ ಟಿಕೆಟ್ ದರ ಹೆಚ್ಚಳ ಮಾಡಿ ಶಾಕ್ ನೀಡಿದ್ದರೆ, ಇದೀಗ ಹೊಸ ಕಾರು, ಬೈಕ್ ಖರೀದಿ ನೋಂದಣಿ ಶುಲ್ಕ ಹೆಚ್ಚಳ ಮಾಡುವ ಮೂಲಕ ಶಾಕ್ ನೀಡಲು ಮುಂದಾಗಿದೆ. ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ವಿವರಗಳಿಗೆ ಮುಂದೆ ಓದಿ.

ಹೊಸ ಕಾರು, ಬೈಕ್ ಖರೀದಿಸುವವರಿಗೆ ಸರ್ಕಾರದಿಂದ ಶಾಕ್: ಫೆಬ್ರವರಿಯಿಂದ ರಿಜಿಸ್ಟ್ರೇಷನ್ ದರ ಏರಿಕೆ
ಸಾಂದರ್ಭಿಕ ಚಿತ್ರ
Follow us
Kiran Surya
| Updated By: Ganapathi Sharma

Updated on:Jan 17, 2025 | 7:21 AM

ಬೆಂಗಳೂರು, ಜನವರಿ 17: ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಫೆಬ್ರವರಿಯಿಂದ ಹೊಸ ಕಾರು, ಬೈಕ್ ಖರೀದಿಯ ನೋಂದಣಿ ಶುಲ್ಕ (ರಿಜಿಸ್ಟ್ರೇಷನ್) ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಫೆಬ್ರವರಿಯಿಂದ ಪರಿಷ್ಕೃತ ದರ ಜಾರಿ ಆಗಲಿದೆ.

ದರ ಹೆಚ್ಚಳದಿಂದ ಬಂದ ಹಣವನ್ನು ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ ಬಳಕೆ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ, ಇದಕ್ಕೆ ವಾಹನ ಮಾಲೀಕರು ಮಾತ್ರ ಗರಂ ಆಗಿದ್ದಾರೆ. ಈ ಹಣವನ್ನು ಚಾಲಕರ ಅಭಿವೃದ್ಧಿಗೆ ಬಳಸುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ ನಮ್ಮಿಂದ ಕಿತ್ತು ಅವರಿಗೆ ನೀಡುವುದು ಸರಿಯಲ್ಲ. ಸರ್ಕಾರವೇ ಅವರ ಕಲ್ಯಾಣಕ್ಕೆ ಹಣ ನೀಡಲಿ ಎಂದಿದ್ದಾರೆ.

ಅಂತಿಮ ಆದೇಶವಷ್ಟೇ ಬಾಕಿ

ದರ ಹೆಚ್ಚಳ ಸಂಬಂದ ಈಗಾಗಲೇ ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಸದ್ಯ ವಾಹನ್ – 4 ನಲ್ಲಿ ಅಪ್​ಡೇಟ್ ಮಾಡಲಾಗುತ್ತಿದೆ‌. ಸಾರಿಗೆ ಇಲಾಖೆ ಸದ್ಯದಲ್ಲೇ ಅಂತಿಮ ಆದೇಶ ಹೊರಡಿಸಲಿದೆ. ಆದೇಶ ಹೊರಡಿಸಿದ ಬೆನ್ನಲ್ಲೇ, ರಾಜ್ಯದ ಎಲ್ಲಾ ಆರ್​​ಟಿಒಗಳಲ್ಲೂ ನೂತನ ರಿಜಿಸ್ಟ್ರೇಷನ್ ದರ ಜಾರಿ ಆಗಲಿದೆ.

ಸಾರ್ವಜನಿಕರಿಂದ ಆಕ್ರೋಶ

ಈಗಾಗಲೇ ಸಾರಿಗೆ ಇಲಾಖೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಿದೆ. ಇದೀಗ ಮತ್ತೆ ಹೊಸ ಕಾರು, ಬೈಕ್ ಖರೀದಿ ಮಾಡುವವರಿಂದ ಹೆಚ್ಚುವರಿ ಹಣ ವಸೂಲಿ ಮಾಡುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

ಒಟ್ಟಿನಲ್ಲಿ ರಾಜ್ಯ ಸರ್ಕಾರ ಏನೋ ಚಾಲಕರ ಅಭಿವೃದ್ಧಿ ಮಾಡುತ್ತೇವೆ ಎಂದು ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ರಿಜಿಸ್ಟ್ರೇಷನ್ ಚಾರ್ಜ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಲು ಮುಂದಾಗಿದೆ. ಆದರೆ ಇದಕ್ಕೆ ಜನರು ಮಾತ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಬಸ್ ಟಿಕೆಟ್​​ ದರ ಹೆಚ್ಚಳ: ನಿಮ್ಮೂರಿನ ಬಸ್​​ ಟಿಕೆಟ್​​ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

ಹೊಸ ವರ್ಷದ ಆರಂಭದಲ್ಲಿಯೇ ಸಾರಿಗೆ ಇಲಾಖೆ ಬಸ್ ಟಿಕೆಟ್ ದರಗಳನ್ನು ಶೇಕಡಾ 15ರಷ್ಟು ಏರಿಕೆ ಮಾಡಿದೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ, ಎನ್​ಡಬ್ಲೂಕೆಆರ್​ಟಿಸಿ, ಕೆಕೆಆರ್​ಟಿಸಿ ಬಸ್​ಗಳ ಟಿಕೆಟ್ ದರ ಪರಿಷ್ಕರಣೆ ಮಾಡಿ ಜನರಿಗೆ ಶಾಕ್ ನೀಡಿದೆ. ಇದೀಗ ಕಾರು, ಬೈಕ್ ಖರೀದಿಸುವವರಿಗೂ ಶಾಕ್ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 am, Fri, 17 January 25

ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ
ಸುರ್ಜೆವಾಲಾ ರಾಜ್ಯದಲ್ಲಿರುವಾಗಲೇ ನಡೆದಿರುವ ಬೆಳವಣಿಗೆ ಕುತೂಹಲಕಾರಿ
ಸುರ್ಜೆವಾಲಾ ರಾಜ್ಯದಲ್ಲಿರುವಾಗಲೇ ನಡೆದಿರುವ ಬೆಳವಣಿಗೆ ಕುತೂಹಲಕಾರಿ
ಸುತ್ತೂರು ಮಠದಲ್ಲೇ ವಿಜಯೇಂದ್ರ ಮತ್ತು ಸಂಗಡಿಗರಿಗೆ ಉಪಹಾರ
ಸುತ್ತೂರು ಮಠದಲ್ಲೇ ವಿಜಯೇಂದ್ರ ಮತ್ತು ಸಂಗಡಿಗರಿಗೆ ಉಪಹಾರ
ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?
ತಪ್ಪಾದ ಬಸ್ ಹತ್ತಿ ಹೋದ 5 ವರ್ಷದ ಬಾಲಕ, ಮುಂದೇನಾಯ್ತು?
ತಪ್ಪಾದ ಬಸ್ ಹತ್ತಿ ಹೋದ 5 ವರ್ಷದ ಬಾಲಕ, ಮುಂದೇನಾಯ್ತು?
Daily Devotional: ಯಾವ ರಾಶಿಯವರು ಯಾವ ಉದ್ಯೋಗ ಮಾಡಿದರೆ ಉತ್ತಮ?
Daily Devotional: ಯಾವ ರಾಶಿಯವರು ಯಾವ ಉದ್ಯೋಗ ಮಾಡಿದರೆ ಉತ್ತಮ?