ಇನ್ಮುಂದೆ ಸರ್ಕಾರವೇ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ: ಸಚಿವ ದಿನೇಶ್​ ಗುಂಡೂರಾವ್

ಆರೋಗ್ಯ ಇಲಾಖೆಯ ಕುರಿತು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್, ಇನ್ಮುಂದೆ ಸರ್ಕಾರವೇ 108 ಆ್ಯಂಬುಲೆನ್ಸ್ ಕಾರ್ಯ ನಿರ್ವಹಿಸುತ್ತೆ. ಯಾವುದೇ ಏಜೆನ್ಸಿ ಮೂಲಕ ಕಾರ್ಯ ನಿರ್ವಹಿಸುವುದಿಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಇನ್ಮುಂದೆ ಸರ್ಕಾರವೇ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ: ಸಚಿವ ದಿನೇಶ್​ ಗುಂಡೂರಾವ್
ಸಚಿವ ದಿನೇಶ್​ ಗುಂಡೂರಾವ್, 108 ಆ್ಯಂಬುಲೆನ್ಸ್
Updated By: ಗಂಗಾಧರ​ ಬ. ಸಾಬೋಜಿ

Updated on: May 14, 2025 | 1:35 PM

ಬೆಂಗಳೂರು, ಮೇ 14: ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ (108 ambulance) ಸರ್ವಿಸ್ ನೀಡುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸರ್ವಿಸ್ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.

ನಗರದ ಶೇಷಾದ್ರೀಪುರಂ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ ಎಂದು ಹೇಳಿದ್ದಾರೆ. 108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ವಿಚಾರವಾಗಿ ಮಾತನಾಡಿದ ಅವರು, ಇದು ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದಿದ್ದಾರೆ.

ನಾವು ಯಾವುದೇ ವೇತನ ತಡೆ ಹಿಡದಿಲ್ಲ: ದಿನೇಶ್​ ಗುಂಡೂರಾವ್

30 ಸಾವಿರ ಸಿಬ್ಬಂದಿ ವೇತನವಾಗದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, 2023-24 ರಲ್ಲಿ ಓಪನಿಂಗ್ ಬ್ಯಾಲೆನ್ಸ್ ಹೆಚ್ಚು ಇರ್ತಾ ಇತ್ತು. ಆದರೆ ಕಳೆದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನಲೆ ಕೊಂಚ ಲೇಟ್ ಆಗಿದೆ. ಇನ್ನೇರಡು ಮೂರು ದಿನಗಳಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆ ಹಿಡದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮನೆ ಬದಲಾಯಿಸಿದಾಗ ಉಚಿತ ವಿದ್ಯುತ್ ಪಡೆಯೋದು ಇನ್ನು ಸುಲಭ: ಇಲ್ಲಿದೆ ಮಾಹಿತಿ
ಬಿಬಿಎಂಪಿಯಲ್ಲ ಇನ್ಮುಂದೆ ಗ್ರೇಟರ್ ಬೆಂಗಳೂರು: ನಾಳೆಯಿಂದಲೇ ಜಾರಿ
ಸೋಫಿಯಾ ಪತಿ ಮನೆ ಮೇಲೆ RSS ದಾಳಿ: ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿ

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷ ಗಾದಿಗೆ ಮಾಜಿ ರೌಡಿಶೀಟರ್​ ಆಯ್ಕೆ: ಬಿಜೆಪಿ ಕಾರ್ಯಕರ್ತರಿಂದ ಆಕ್ರೋಶ

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಹಾಗೂ ಎಸ್​​ಎನ್​​ಸಿಯು ಮತ್ತು ಐಸಿಯುದಲ್ಲಿ ಕಾರ್ಯ ನಿರ್ವಹಿಸುವ ಸ್ಟಾಫ್ ನರ್ಸ್​ಗಳ ವೇತನ ಪರಿಷ್ಕರಿಸಿ
ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ನಾನು ಯಾರಿಗೂ ಶಿಫಾರಸು ಮಾಡಿಲ್ಲ

ಕುಕ್ಕೆ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷನಾಗಿ ಹರೀಶ್ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ನಾನು ಯಾರಿಗೂ ಶಿಫಾರಸು ಮಾಡಿಲ್ಲ. ಚುನಾವಣೆ ಮೂಲಕವೇ ಹರೀಶ್ ಇಂಜಾಡಿ ಆಯ್ಕೆ ಮಾಡಿರುವುದು. ಇದು ಒಳ್ಳೆ ಬೆಳವಣಿಗೆ ಅಲ್ಲ. ಇದರ ಬಗ್ಗೆ ಮುಜರಾಯಿ ಇಲಾಖೆ ಸಚಿವರ ಜತೆ ಮಾತನಾಡುತ್ತೇನೆ. ರೂಲ್ಸ್ ಪ್ರಕಾರ ಹರೀಶ್​ನನ್ನು ಬದಲಾವಣೆ ಮಾಡಲು ಆಗುವುದಿಲ್ಲ. 3 ವರ್ಷ ಅಧಿಕಾರಾವಧಿ ಇರುತ್ತೆ, ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿಯಲ್ಲ ಇನ್ಮುಂದೆ ಗ್ರೇಟರ್ ಬೆಂಗಳೂರು: ನಾಳೆಯಿಂದಲೇ ಜಾರಿ

ನಾಳೆಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರ ಬಂದ ಮೇಲೆ ಹೊಸ ಕಾಯಕಲ್ಪ ಕೊಟ್ಟಿದೆ. ಅಧಿವೇಶನದಲ್ಲಿ ಕೂಡ ಚರ್ಚೆ ಆಗಿ ಶಾಸಕರ ಸಮಿತಿ ವರದಿ ಕೊಟ್ಟು, ಸಾರ್ವಜನಿಕರ ಜೊತೆ ಚರ್ಚೆ ಆಗಿ ರಾಜ್ಯ ಪಾಲರು ಅನುಮೋದನೆ ಕೊಟ್ಟು ಮಾನ್ಯತೆ ಸಿಕ್ಕಿದೆ. ಬೆಂಗಳೂರು ವಿಶ್ವ ದರ್ಜೆ ನಗರ. ಇದರ ಬೆಳವಣಿಗೆ ಮತ್ತು ಮುಖ್ಯ ವಿಷ್ಯ ಏನಂದರೆ, ಆಡಳಿತ ವ್ಯವಸ್ಥೆ ಸುಧಾರಣೆ ಮಾಡುವ ಅವಶ್ಯಕತೆ ಇದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:27 pm, Wed, 14 May 25