AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮತ್ತೆ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಎಲೆಕ್ಷನ್: ವಿದ್ಯಾರ್ಥಿ ಚುನಾವಣೆ ಬೇಕಾ? ಬೇಡ್ವಾ?

Students Elections: ರಾಜ್ಯದಲ್ಲಿ ಬ್ಯಾನ್ ಆಗಿದ್ದ ಕಾಲೇಜು ಎಲೆಕ್ಷನ್ ಮತ್ತೆ ಶುರುವಾಗವ ಲಕ್ಷಣಗಳು ಕಂಡು ಬರ್ತಿದೆ.. ಸ್ಟೂಡೆಂಟ್ ಲೀಡರ್ ಹುಟ್ಟು ಹಾಕುಲು ಸರ್ಕಾರ ಮುಂದಾಗಿದೆ. ಈ ವರ್ಷದಿಂದ ಮತ್ತೆ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಎಲೆಕ್ಷನ್ ನಡೆಸಲು ಮುಂದಾಗಿದ್ದು ಮತ್ತೆ ರಾಜ್ಯದ ಕಾಲೇಜುಗಳಲ್ಲಿ ಮರುಕಳಿಸಲಿದೆ ಸ್ಟೂಡೆಂಟ್ ಯೂನಿಯನ್ ‌ಎಲೆಕ್ಷನ್ ಮರುಕಳಿಸಲಿದೆ.

ಕರ್ನಾಟಕದಲ್ಲಿ ಮತ್ತೆ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಎಲೆಕ್ಷನ್: ವಿದ್ಯಾರ್ಥಿ ಚುನಾವಣೆ ಬೇಕಾ? ಬೇಡ್ವಾ?
Students Elections
Vinay Kashappanavar
| Edited By: |

Updated on:Jan 16, 2026 | 10:33 PM

Share

ಬೆಂಗಳೂರು, (ಜನವರಿ 16): ಕರ್ನಾಟಕದಲ್ಲಿ  (Karnataka) ಮತ್ತೆ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು (Students elections) ನಡೆಸುವ ಸಂಬಂಧ ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಮೊದಲ ಹಂತದ ಸಭೆ ಸಹ ಆಗಿದೆ. ಉನ್ನತ್ತ ಶಿಕ್ಷಣ ಇಲಾಖೆಯು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಚುನಾವಣೆ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದ್ರೆ ಈ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಚುನಾವಣೆ ಬೇಕಾ ?ಬೇಡ್ವಾ ಎನ್ನುವ ಬಗ್ಗೆ ಅಭಿಪ್ರಾಯ ಕೇಳಲಾಗಿದೆ.

ಕಾಲೇಜು ಹಾಗೂ ವಿವಿಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ಸಂಬಂಧ ಈಗಾಗಲೇ ಸಮಿತಿ ರಚನೆ ಮಾಡಲಾಗಿದೆ. ಆದ್ರೆ ಇದಕ್ಕೆ ಈಗ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಚುನಾವಣೆ ಬೇಕಾ? ಇದರಿಂದ ವಿದ್ಯಾರ್ಥಿಗಳ ನಡುವೆ ಜಗಳ ಕಿತ್ತಾಟ ಹೊಡೆದಾಟ ರಾಜಕೀಯ ಶುರುವಾಗುತ್ತೆ ಎನ್ನುವ ಪರ ವಿರೋಧ ಅಭಿಪ್ರಾಯ ಕೇಳಿ ಬಂದಿತ್ತು. ಹೀಗಾಗಿ ಸರ್ಕಾರ ಕಾಲೇಜು ಹಾಗೂ ವಿವಿಗಳಲ್ಲಿ ವಿದ್ಯಾರ್ಥಿ ಚುನಾವಣೆ ಬೇಕಾ ಬೇಡ್ವ ಎಂಬುವುದರ ಕುರಿತು ಶಿಕ್ಷಣ ತಜ್ಞರು ಸಾರ್ವಜನಿಕರು ಹಾಗೂ ಪೋಷಕರಿಂದ ಅಭಿಪ್ರಾಯ ಸಂಗ್ರಹಣೆಗೆ ಮುಂದಾಗಿದೆ.

ಇದನ್ನೂ ಓದಿ: CUET PG 2026: CUET PG ಆನ್‌ಲೈನ್ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ; ಜ. 20ರ ವರೆಗೆ ಅವಕಾಶ

ನಿಮ್ಮ ಅಭಿಪ್ರಾಯವನ್ನು ಮೇಲ್ ಮಾಡಿ

ಪೋಷಕರು ಹಾಗೂ ಸಾರ್ವಜನಿಕರ ಅಭಿಪ್ರಾಯ ಏನು ಎಂಬ ಅಭಿಪ್ರಾಯ ಪಡೆದು ಚುನಾವಣೆ ಅಖಾಡಕ್ಕೆ ತಯಾರಿ ತಯಾರಿ ಮಾಡಲಾಗುತ್ತದೆ. ಹೀಗಾಗಿ ಅಭಿಪ್ರಾಯ ಸಂಗ್ರಹಕ್ಕೆ ಪ್ರತ್ಯೇಕ ಮೇಲ್ ಐಡಿ ಕೂಡಾ ನೀಡಿ ಪೋಷಕರ ಅಭಿಪ್ರಾಯ ಕೇಳಿದೆ. ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ karstudentselections@gmail.com ಇಲ್ಲಿ ಸಲಹೆ ರೂಪದಲ್ಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಬಹುದಾಗಿದೆ.

ಸರ್ಕಾರದ ನಿಲುವು ಏನು?

ಯುವಕರಲ್ಲಿ ಪ್ರಜಾಪ್ರಭುತ್ವದ ಬಗ್ಗೆ ತಿಳಿವಳಿಕೆ ಅರಿವು ಇರಬೇಕು. ನಾಯಕತ್ವ ಗುಣ ಅಳವಡಿಸಿಕೊಳ್ಳೋದಕ್ಕೆ ಇದು ಬುನಾದಿ ಆಗತ್ತೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಬೇಕಾದರೆ ಚುನಾವಣೆ ನಡೆಸುವುದು ಅತ್ಯಗತ್ಯ ಎನ್ನುವುದು ಸರ್ಕಾರದ ಅಭಿಪ್ರಾಯವಾಗಿದೆ.

ಕಮಿಟಿ ಮುಖ್ಯಸ್ಥರು ಹೇಳುವುದೇನು?

ಇನ್ನು ಈ ಬಗ್ಗೆ ಮಾತನಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ರಾಜ್ಯದ ಕಾಲೇಜುಗಳಲ್ಲಿ ಚುನಾವಣೆಗಳು ಆಗಬ್ಬೇಕು. ಅದರ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಒಂದು ವರದಿ ಒಪ್ಪಿಸಲಿಕ್ಕೆ ಹೇಳಿದ್ದಾರೆ. ಆ ಕಮಿಟಿ ಮುಖ್ಯಸ್ಥನನ್ನಾಗಿ ನನ್ನನ್ನ ನೇಮಕ ಮಾಡಿದ್ದಾರೆ. ಈಗಾಗಲೇ ಒಂದು ಸಭೆ ಮಾಡಿದ್ದೇವೆ. ಈಗ ಚುನಾವಣೆಗಳನ್ನ ಮಾಡ್ಬೇಕಂದ್ರೆ ಹೇಗೆ ಮಾಡಬೇಕು? ಅದರ ರೂಪುರೇಷೆ ಹೇಗಿರಬೇಕು? ಟರ್ಮ್ಸ್ ಆಫ್ ರೆಫರನ್ಸ್ ಬಗ್ಗೆ ಚರ್ಚೆ ಆಗಿದೆ. ಸಾರ್ವಜನಿಕರ ಅಭಿಪ್ರಾಯದ ಆಧಾರದ ಮೇಲೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ತಿವಿ ಎಂದಿದ್ದಾರೆ.

ಒಟ್ಟಿನಲ್ಲಿ ದಶಕಗಳ ಬಳಿಕ ಬ್ಯಾನ್ ಮಾಡಿದ್ದ ಎಲೆಕ್ಷನ್ ಈಗ ಮತ್ತೆ ಕಾಲೇಜು ಹಾಗೂ ವಿವಿಗಳಲ್ಲಿ ನಡೆಸಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಸಾರ್ವಜನಿಕರು ಶಿಕ್ಷಕರು ಸೇರಿದಂತೆ ಅನೇಕರ ಅಭಿಪ್ರಾಯಗಳನ್ನು ಸಲಹೆಗಳ ರೂಪದಲ್ಲಿ ಪಡೆಯಲು ಸಮಿತಿ ಮುಂದಾಗಿದ್ದು, ಕಾಲೇಜು ವಿವಿಗಳಲ್ಲಿ ಈ ವರ್ಷದಿಂದಲೇ ಮತ್ತೆ ಚುನಾವಣೆ ಆಂಭವಾಗುತ್ತಾ ಅಂತ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:21 pm, Fri, 16 January 26

ಆಮೆಗತಿಯ ಬ್ಯಾಟಿಂಗ್‌; ಬಾಬರ್​ ಆಝಂಗೆ ಸ್ಟ್ರೈಕ್ ನೀಡದ ಸ್ಮಿತ್
ಆಮೆಗತಿಯ ಬ್ಯಾಟಿಂಗ್‌; ಬಾಬರ್​ ಆಝಂಗೆ ಸ್ಟ್ರೈಕ್ ನೀಡದ ಸ್ಮಿತ್
ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್
ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್
ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ
ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ
ಇದು ಯಾವುದೋ ಜಾತ್ರೆಯಲ್ಲ: ಹೋರಿ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ
ಇದು ಯಾವುದೋ ಜಾತ್ರೆಯಲ್ಲ: ಹೋರಿ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ
‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಕಣ್ಣೀರು
‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಕಣ್ಣೀರು
ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ
ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ
ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ