AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಐಎಎಸ್, ಇಬ್ಬರು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕರ್ನಾಟಕದಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಜೋರಾಗಿದೆ. ಮೊನ್ನೇ ಅಷ್ಟೇ ಇನ್ಸ್​ಪೆಕ್ಟರ್ ಡಿವೈಎಸ್​ಪಿ, ಐಪಿಎಸ್​ ವರ್ಗಾವಣೆ ಮಾಡಲಾಗಿದ್ದು, ಇದೀಗ ಇಬ್ಬರು ಐಎಎಸ್ ಹಾಗೂ ಇಬ್ಬರು ಕೆಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಇಬ್ಬರು ಐಎಎಸ್, ಇಬ್ಬರು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ವಿಧಾನಸೌಧ
TV9 Web
| Edited By: |

Updated on: Feb 02, 2024 | 8:15 PM

Share

ಬೆಂಗಳೂರು, (ಫೆಬ್ರವರಿ 02): ರಾಜ್ಯ ಸರ್ಕಾರ ಇಂದು(ಫೆಬ್ರವರಿ 02) ಇಬ್ಬರು ಐಎಎಸ್ ಹಾಗೂ ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ​ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ(ಚುನಾವಣೆ) ಆರ್ ರಾಮಚಂದ್ರನ್ ಅವರನ್ನು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಇನ್ನು ಬಿಬಿಎಂಪಿ ವಿಶೇಷ ಆಯುಕ್ತ(ಚುನಾವಣೆ) ಹುದ್ದೆಗೆ ಡಾ.ಸೆಲ್ವಂಮಣಿ ಆರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ​ ಇಬ್ಬರು KAS ಅಧಿಕಾರಿಗಳ ವರ್ಗಾವಣೆ

ಇನ್ನು ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ಇಂದು(ಶುಕ್ರವಾರ) ರಾಜ್ಯ ಸರ್ಕಾರ ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿ ಹೆಚ್.ಬಿ.ವಿಜಯಕುಮಾರ್ ವರ್ಗಾಹಿಸಿದರೆ, ರಾಜು ಮೊಗವೀರ ಅವರನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರ ಹುದ್ದೆಗೆ ವರ್ಗಾವಣೆ ಮಾಡಿದೆ. ನಿನ್ನೆ ಅಷ್ಟೇ ಬರೋಬ್ಬರಿ 42 ಕೆಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು.

42 ಕೆಎಎಸ್​ ಅಧಿಕಾರಿಗಳ ವರ್ಗಾವಣೆ

ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ವರ್ಗಾವಣೆ 42 ಕೆಎಎಸ್​ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಹುದ್ದೆಗಳಲ್ಲೇ ಕಾರ್ಯ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು.

ನಿನ್ನೆ ಅಷ್ಟೇ ನಾಲ್ವರು ಐಪಿಎಸ್ ವರ್ಗಾವಣೆ

ಬೆಂಗಳೂರು, ನಿನ್ನೆ (ಫೆಬ್ರುವರಿ 1) ಅಷ್ಟೇ ನಾಲ್ವರು ಐಪಿಎಸ್​ (IPS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಅಮಿತ್ ಸಿಂಗ್, ಡಿಐಜಿಪಿ, ದಕ್ಷಿಣ ವಲಯ (ಮೈಸೂರು), ಡಾ.ಎಂ.ಬಿ.ಬೋರಲಿಂಗಯ್ಯ, ಡಿಐಜಿಪಿ, ಪಶ್ಚಿಮ ವಲಯ (ಮಂಗಳೂರು), ಶಿವಪ್ರಕಾಶ್ ದೇವರಾಜು, ಪೊಲೀಸ್ ವರಿಷ್ಠಾಧಿಕಾರಿ, (ಕಲಬುರಗಿ) ಮತ್ತು ಎ.ಶ್ರೀನಿವಾಸುಲು, ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.