ಬೆಂಗಳೂರು: ರಾಜ್ಯ ಸರ್ಕಾರ (Karnataka Governmnet) ಎರಡು ದಿನದ ಹಿಂದೆ 53 ಐಪಿಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಿಸುವುದರ ಜೊತೆಗೆ ಬಡ್ತಿ ನೀಡಿತ್ತು. ಇದೀಗ 4 ಹಿರಿಯ ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆ (Transferred) ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಳೆದ ಕೆಲವು ತಿಂಗಳಿಂದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಸರಣಿ ವರ್ಗಾವಣೆಯನ್ನು ಮಾಡಿತ್ತು. ಈ ಹಿಂದೆ ನೂರಾರು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು, ಕೆಲವು ಡಿಜಿಪಿಗಳನ್ನು ವರ್ಷಗಾವಣೆ ಮಾಡಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ.
ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ಸರಣಿ ವರ್ಗಾವಣೆ ಮಾಡಿತ್ತು. ಈ ಮಧ್ಯೆಯೇ 42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ನೀಡಿದೆ. ಜೊತೆಗೆ 5 ಐಎಎಸ್ ಅಧಿಕಾರಿಗಳಿಗೆ ಹುದ್ದೆಯಲ್ಲಿ ಮುಂದುವರಿಸಿ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಹೊಸವರ್ಷದ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:49 pm, Mon, 2 January 23