Govt Employees Strike: ಕರ್ತವ್ಯಕ್ಕೆ ಹಾಜರಾಗದ ನೌಕರರಿಗೆ ಸರ್ಕಾರ ಖಡಕ್​ ಎಚ್ಚರಿಕೆ, ಆದೇಶದಲ್ಲೇನಿದೆ?

7ನೇ ವೇತನ ಆಯೋಗ ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮುಷ್ಕರಕ್ಕೆ ಮುಂದಾಗಿರುವ ಸರ್ಕಾರಿ ನೌಕರರಿಗೆ ಸರ್ಕಾರ ಎಚ್ಚರಿಕೆ ಸುತ್ತೋಲೆ ಹೊರಡಿಸಿದೆ.

Govt Employees Strike: ಕರ್ತವ್ಯಕ್ಕೆ ಹಾಜರಾಗದ ನೌಕರರಿಗೆ ಸರ್ಕಾರ ಖಡಕ್​ ಎಚ್ಚರಿಕೆ, ಆದೇಶದಲ್ಲೇನಿದೆ?
Follow us
ರಮೇಶ್ ಬಿ. ಜವಳಗೇರಾ
| Updated By: Digi Tech Desk

Updated on:Mar 01, 2023 | 12:11 PM

ಬೆಂಗಳೂರು: 7ನೇ ವೇತನ ಆಯೋಗ (7th pay commission)ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಇಂದಿನಿಂದ (ಮಾರ್ಚ್​ 01) ಮುಷ್ಕರ ನಡೆಸುತ್ತಿರುವ ತನ್ನ ನೌಕರರಿಗೆ (Karnataka Government Employees) ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ. ಅನುಮತಿ ಪಡೆಯದೇ ಕರ್ತವ್ಯಕ್ಕೆ ಗೈರಾದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ನಿರ್ಧಾರ: ಮಧ್ಯಂತರ ಪರಿಹಾರ ವೇತನ ಘೋಷಿಸಿದ ಬೊಮ್ಮಾಯಿ

ಕೆಲಸಕ್ಕೆ ಗೈರಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿರುವ ನೌಕರರ ನಡೆಗೆ ಸುತ್ತೋಲೆಯ ಮೂಲಕ ಸರ್ಕಾರ ಎಚ್ಚರಿಕೆ ನೀಡಿದೆ. ಅನುಮತಿ ಪಡೆಯದೇ ಗೈರಾದರೆ ಯಾವುದೇ ಸರ್ಕಾರದ ಅಧಿಕೃತ ಕೆಲಸ ನಡೆದಿಲ್ಲ ಎಂದು ತೀರ್ಮಾನಿಸಲಾಗುತ್ತದೆ ಮತ್ತು ಶಿಸ್ತುಕ್ರಮದ ತೆಗೆದುಕೊಳ್ಳಲಾಗುತ್ತದೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

ಸರ್ಕಾರದ ಸುತ್ತೋಲೆಯಲ್ಲೇನಿದೆ?

ಕಚೇರಿಯ ಎಲ್ಲಾ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ತಿಳಿಯಪಡಿಸುವುದೇನೆಂದರೆ, ಸರ್ಕಾರಿ ನೌಕರರು ಕಚೇರಿಗೆ ಅನಿವಾರ್ಯ ಕಾರಣಗಳಿಂದ ಹಾಜರಾಗಲು ಸಾಧ್ಯವಾಗದೇ ಇದ್ದಲ್ಲಿ ಮುಂಚಿತವಾಗಿ ಅಥವಾ ಅಧಿಕೃತವಾಗಿ ರಜೆ ಮಂಜೂರಾತಿಯನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ. ಇದಕ್ಕೆ ವಿರುದ್ಧವಾಗಿ ಪೂರ್ವಭಾವಿಯಾಗಿ ರಜೆ ಮಂಜೂರಾತಿ ಪಡೆಯದೆ ಕರ್ತವ್ಯಕ್ಕೆ ಗೈರು ಹಾಜರಾದಲ್ಲಿ Dies Non ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಸರ್ಕಾರದ ವಿರುದ್ಧ ನೌಕರರ ಸಮರ.. ಇಂದಿನಿಂದ ಮುಷ್ಕರ: ಬಹುತೇಕ ಎಲ್ಲಾ ಸರ್ಕಾರಿ ಸೇವೆಗಳು ಬಂದ್

ವಿವಿಧ ಇಲಾಖೆಯ ಸುಮಾರು 10 ಲಕ್ಷ ರಾಜ್ಯ ಸರ್ಕಾರಿ ನೌಕರರು ಕರ್ತವವ್ಯಕ್ಕೆ ಹಾಜರಾಗದೆ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ಆಸ್ಪಯತ್ರೆಗಳಲ್ಲಿ ಓಪಿಡಿ ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಇನ್ನು ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಆಗಮಿಸಿ ಶಿಕ್ಷಕರು ಇಲ್ಲದೇ ವಾಪಸ್ ಮನೆ ಹೋಗುತ್ತಿದ್ದಾರೆ. ಇನ್ನು ಪ್ರಥಮ ಪಿಯುಸಿ ಹಾಗೂ ಎಸ್​ಎಸ್​ಎಲ್​ಸಿ ಪೂರ್ವಭಾವಿ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಮತ್ತೊಂದೆಡೆ ಕೆಲವೆಡೆ ನೌಕರರು ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Published On - 11:46 am, Wed, 1 March 23

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್