ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಮದ್ಯದ ದರ ಏರಿಕೆ ಸಾಧ್ಯತೆ

ಒಳಗೆ ಸೇರಿದರೆ ಗುಂಡು, ತಲೆಗೆ ಏರುತ್ತೆ ಗುಂಗು ಅಂತ ಎಣ್ಣೆ ಹೊಡೆಯಲು ಹೋದ್ರೆ ​ನಮ್ಮ ಸರ್ಕಾರ ಎಣ್ಣೆ ಹೊಡೆಯುವ ಮುಂಚೆನೇ ಕಿಕ್ ಏರಿಸಲು ಮುಂದಾಗಿದೆ. ರಾಜ್ಯದಲ್ಲಿ‌ ಮದ್ಯದ ಏರಿಸಲು ಸರ್ಕಾರ ಸದ್ದಿಲ್ಲದೆ ತಯಾರಿ ನಡೆಸಿದೆ. ಹೌದು ಅಗ್ಗದ ಮದ್ಯಗಳ ಬೆಲೆ ಹೆಚ್ಚಿಸಲು ಸರಕಾರ ತೆರೆಮರೆಯಲ್ಲೇ ಸಿದ್ಧತೆ ನಡೆಸಿದ್ದು, ಲೋಕಸಭಾ ಚುನಾವಣೆ ಬಳಿಕ ಮದ್ಯಪ್ರಿಯರಿಗೆ ದೊಡ್ಡ ಶಾಕ್‌ ಕಾದಿದೆ ಎನ್ನಲಾಗುತ್ತಿದೆ.

ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಮದ್ಯದ ದರ ಏರಿಕೆ ಸಾಧ್ಯತೆ
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರ
Follow us
Kiran Surya
| Updated By: ವಿವೇಕ ಬಿರಾದಾರ

Updated on:May 18, 2024 | 7:57 AM

ಬೆಂಗಳೂರು, ಮೇ 18: ಪಂಚ ಗ್ಯಾರಂಟಿ ಯೋಜನೆಗಳಿಗೆ (Guarantee Scheme) ಹಣ ಹೊಂದಿಸುವುದು ಸರಕಾರಕ್ಕೆ (Karnataka Government) ಸವಾಲಾಗಿದೆ. ಉಚಿತ ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲಗಳ ಸಂಗ್ರಹಕ್ಕಾಗಿ ತೀವ್ರ ಕಸರತ್ತು ನಡೆಸುತ್ತಿರುವ ಸರ್ಕಾರ, ದೇಶಿಯ ಮದ್ಯಗಳ (Alcohol) ಬೆಲೆ ಹೆಚ್ಚಿಸಲು ಮುಂದಾಗಿದೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಲವು ಸ್ಪ್ಯಾಬ್‌ಗಳ ಅಗ್ಗದ ಮದ್ಯಗಳ ಬೆಲೆ ತುಂಬಾ ಕಡಿಮೆಯಿದೆ. ರಾಜ್ಯದಲ್ಲಿ ಸೆಮಿ ಪ್ರೀಮಿಯಂ ಹಾಗೂ ಪ್ರೀಮಿಯಂ ವಿದೇಶಿ ಮದ್ಯಕ್ಕೆ ಹೋಲಿಸಿದರೆ ಅಗ್ಗದ ಬೆಲೆಯ ಮದ್ಯಗಳ ಮಾರಾಟ ಹೆಚ್ಚಿದೆ ಹೀಗಾಗಿ ಸರ್ಕಾರ ಮದ್ಯದ ಬೆಲೆ ಹೆಚ್ಚಿಸಲು ಚಿಂತನೆ ನಡೆಸಿದೆ.

ಅಬಕಾರಿ ಇಲಾಖೆಯಿಂದ ಸರ್ಕಾರದ ಬೊಕ್ಕಸಕ್ಕೆ ಹರಿದು ಬರುವ ಆದಾಯದಲ್ಲೂ ಅಗ್ಗದ ಮದ್ಯಗಳು ಸಿಂಹಪಾಲು ಹೊಂದಿವೆ. ಈಗ ರಾಜ್ಯದಲ್ಲಿ 2023ರ ಜುಲೈನಲ್ಲಿ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲಾಗಿತ್ತು. ನಂತರ ಲಿಕ್ಕರ್ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದವು. ನಂತರ ಜನ ಸಾಮಾನ್ಯರು ಬಳಕೆ ಮಾಡುವ ಲಿಕ್ಕರ್ ದರವನ್ನ 20 ರೂಪಾಯಿಗೆ ಏರಿಕೆ ಮಾಡಿತ್ತು. ಈಗ ಮತ್ತೆ ಲಿಕ್ಕರ್ ದರ ಏರಿಕೆಗೆ ಅಬಕಾರಿ ಇಲಾಖೆ ಪ್ಲಾನ್ ಮಾಡಿದ್ದು, ಸರ್ಕಾರ ಚುನಾವಣೆ ನಂತರ ಅನುಮೋದನೆ ನೀಡಲಿದೆಯಂತೆ.

ಈ ಬಗ್ಗೆ ಮಾತಾನಾಡಿದ ಮದ್ಯ ಮಾರಾಟಗಾರರು, ಅಧಿಕೃತವಾಗಿ ದರ ಏರಿಕೆಯ ಆದೇಶ ಇನ್ನೂ ಆಗಿಲ್ಲ. ಆದರೆ ದರ ಏರಿಕೆ ಮಾಡುವ ಬಗ್ಗೆ ಮಾತುಗಳು ಕೇಳಿ ಬರ್ತಿವೆ ಎಂದು ರಾಮಕೃಷ್ಣ ಬಾರ್ ಆ್ಯಂಡ್​ ರೆಸ್ಟೋರೆಂಟ್ ಮಾಲೀಕರು ಹೇಳಿದರು.

ಹೊರ ರಾಜ್ಯಗಳಲ್ಲಿ ದುಬಾರಿ ಮದ್ಯಗಳ ಬೆಲೆ ಕರ್ನಾಟಕಕ್ಕಿಂತಲೂ ಕಡಿಮೆ ಇದೆ. ಈ ಮದ್ಯಗಳ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಇವುಗಳ ಬೆಲೆ ಇಳಿಕೆ ಮಾಡಲಿದೆ. 6-12ನೇ ಸ್ಪ್ಯಾಬ್‌ವರೆಗಿನ ಸೆಮಿ ಪ್ರೀಮಿಯಂ ಮದ್ಯಗಳ ಬೆಲೆಯಲ್ಲಿ ಶೇ10ರಷ್ಟು, 12-18ನೇ ಸ್ಪ್ಯಾಬ್‌ವರೆಗಿನ ವಿದೇಶಿ ಅಥವಾ ಪ್ರೀಮಿಯಂ ಬ್ರಾಂಡ್‌ಗಳ ಮದ್ಯದ ಬೆಲೆಯಲ್ಲಿ ಶೇ12-15ರಷ್ಟು ಇಳಿಕೆ ಮಾಡುವ ಸಾಧ್ಯತೆಯಿದೆ. ಹೊರ ರಾಜ್ಯಗಳಲ್ಲಿನ ಮದ್ಯದ ದರಪಟ್ಟಿ ಆಧರಿಸಿ ಹೊಸದಾಗಿ ಬೆಲೆ ನಿಗದಿ ಮಾಡಲಾಗುತ್ತದೆ.

ಇದನ್ನೂ ಓದಿ: ಸೆಟ್​ನಲ್ಲಿ ಮದ್ಯ ಸೇವಸಿ ಸಮಸ್ಯೆ ಸೃಷ್ಟಿಸಿಕೊಂಡಿದ್ದ ನಟಿ ರಿಚಾ

2023ರ ವಿಧಾನಸಭಾ ಚುನಾವಣೆ ನಂತರ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಮೂರು ಬಾರಿ ಬಿಯರ್‌ ದರ ಹೆಚ್ಚಳ ಮಾಡಿದೆ. ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಂತೆ ಬಿಯರ್‌ ಮೇಲೆ ಶೇ20 ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ನಂತರ ಬಿಯರ್‌ ಉತ್ಪಾದನಾ ಕಂಪನಿಗಳು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್‌ ಮೇಲೆ ಕನಿಷ್ಠ 10 ರೂ. ವರೆಗೆ ದರ ಹೆಚ್ಚಿಸಿದ್ದವು. ಇದರ ಬೆನ್ನಲ್ಲೇ ಸರಕಾರ ಫೆ.1ರಿಂದ ಜಾರಿಗೆ ಬರುವಂತೆ ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು (ಎಇಡಿ) ಶೇ 185 ರಿಂದ 195ಕ್ಕೆ ಹೆಚ್ಚಳ ಮಾಡಿತ್ತು. ಇದರೊಂದಿಗೆ ಎಇಡಿ ಶೇ 10ರಷ್ಟು ಹೆಚ್ಚಳವಾಗಿತ್ತು. ಇದೀಗ ಮತ್ತೆ ದರ ಏರಿಕೆ ಆಗಲಿದೆ. ಇದಕ್ಕೆ ಮದ್ಯಪ್ರಿಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಿನಲ್ಲಿ ಸರ್ಕಾರ ಏನೋ ತನ್ನ ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪದೇ ಪದೇ ದರ ಏರಿಕೆ ಮಾಡುತ್ತಿದೆ. ಆದರೆ ಇದಕ್ಕೆ ಮದ್ಯಪ್ರಿಯರು ಮಾತ್ರ ತೀರ ಗರಂ ಆಗಿದ್ದು, ಮಧ್ಯಮ ವರ್ಗದವರು ಕುಡಿಯುವ ಮದ್ಯವನ್ನ ಎಷ್ಟು ಬಾರಿ ಏರಿಕೆ ‌ಮಾಡುತ್ತೀರಾ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:54 am, Sat, 18 May 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್