ಇನ್ನು ಮುಂದೆ ಎಸ್‌ಸಿ, ಎಸ್ಟಿ ಫಲಾನುಭವಿಗಳಿಗೆ ವಿರಳ ಕಾಯಿಲೆಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುವುದು: ಸಚಿವ ಕೆ.ಸುಧಾಕರ್‌

ಇನ್ನು ಮುಂದೆ ಆಯುಷ್ಮಾನ್‌ ಭಾರತ್‌ -ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಇನ್ನು ಮುಂದೆ ಎಸ್‌ಸಿ, ಎಸ್ಟಿ ಫಲಾನುಭವಿಗಳಿಗೆ ವಿರಳ ಕಾಯಿಲೆಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುವುದು: ಸಚಿವ ಕೆ.ಸುಧಾಕರ್‌
ಆರೋಗ್ಯ ಸಚಿವ ಕೆ ಸುಧಾಕರ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 08, 2022 | 3:16 PM

ಬೆಂಗಳೂರು: ಇನ್ನು ಮುಂದೆ ಆಯುಷ್ಮಾನ್‌ ಭಾರತ್‌ (Ayushman Bharat)-ಆರೋಗ್ಯ ಕರ್ನಾಟಕ  (Arogya Karnataka) ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ (K Sudhakar) ಹೇಳಿದ್ದಾರೆ. ಹಾಗೆಯೇ, ಹೆಚ್ಚು ಚಿಕಿತ್ಸಾ ವೆಚ್ಚ ತಗುಲುವ ಕಾಯಿಲೆಗಳಿಗೂ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗಿದೆ. ಈ ಮೂಲಕ ಬಡ ಜನರ ಆರೋಗ್ಯ ರಕ್ಷಣೆಗೆ ಹೊಸ ಕೊಡುಗೆಯನ್ನು ರಾಜ್ಯ ಸರ್ಕಾರ ನೀಡಿದೆ ಎಂದು ತಿಳಿಸಿದರು.

ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ, ವಿವಿಧ ಕಾಯಿಲೆಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಚಿಕಿತ್ಸಾ ವೆಚ್ಚ ಭರಿಸಲಾಗುತ್ತಿದೆ. ಆದರೆ ಕೆಲ ವಿರಳ ಕಾಯಿಲೆಗಳನ್ನು ಈ ಯೋಜನೆಯಡಿ ಸೇರಿಸಲಾಗಿಲ್ಲ. ಅಲ್ಲದೆ ಇಂತಹ ರೋಗಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಇರುವುದಿಲ್ಲ. ಅಂತಹ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿ ಆ ವೆಚ್ಚವನ್ನು ಭರಿಸಬೇಕಾಗುತ್ತದೆ ಎಂದು ಹೇಳಿದರು.

ಚಿಕಿತ್ಸೆಗಳು ಹಾಗೂ ವೆಚ್ಚದ ಪಟ್ಟಿಯನ್ನು ಸಿದ್ಧಪಡಿಸಿದ್ದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌, ಈ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ. ಇದರ ಜೊತೆಗೆ, ಹೆಚ್ಚು ವೆಚ್ಚ ತಗುಲುವ ಕಾಯಿಲೆಗಳ ಚಿಕಿತ್ಸಾ ವಿಧಾನ ಗುರುತಿಸಿ, ಅವುಗಳಿಗೂ ವೆಚ್ಚ ನಿಗದಿ ಮಾಡಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಗಿರಿಜನ ಉಪಯೋಜನೆಯಡಿ 7.39 ಕೋಟಿ ರೂ., ಪರಿಶಿಷ್ಟ ಜಾತಿ ಉಪಯೋಜನೆಯಡಿ 15.79 ಕೋಟಿ ಸೇರಿ, ಒಟ್ಟು 23.18 ಕೋಟಿ ರೂ. ಮೊತ್ತವನ್ನು ಪುನರ್‌ ವಿನಿಯೋಗದ ಮೂಲಕ ಬಿಡುಗಡೆ ಮಾಡಲಾಗಿದೆ. ಪಿಇಟಿ ಸ್ಕ್ಯಾನ್‌ಗೆ 10,000 ರೂ., ಅಸ್ತಿ ಮಜ್ಜೆ ಕಸಿಗೆ ಎರಡು ವಿಧಾನಗಳಲ್ಲಿ 7 ಲಕ್ಷ ರೂ. ಹಾಗೂ 21 ಲಕ್ಷ ರೂ., ರೋಬೋಟಿಕ್‌ ಸರ್ಜರಿಗೆ 1.50 ಲಕ್ಷ ರೂ. ಸೇರಿದಂತೆ ವಿವಿಧ ಚಿಕಿತ್ಸೆಗಳಿಗೆ ವೆಚ್ಚ ನಿಗದಿ ಮಾಡಲಾಗಿದೆ ಎಂದರು.

“ಪ್ರಧಾನಿ ನರೇಂದ್ರ ಮೋದಿಯವರು ಜನರ ಬಡ ಜನರ ಆರೋಗ್ಯ ರಕ್ಷಣೆಗಾಗಿ ಜಾರಿ ಮಾಡಿದ ಆಯುಷ್ಮಾನ್‌ ಯೋಜನೆಯನ್ನು ವಿಸ್ತರಿಸುವ ಕೆಲಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ರಾಜ್ಯ ಸರ್ಕಾರ ಮಾಡುತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಇದರಿಂದ ಬಹಳಷ್ಟು ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Thu, 8 September 22

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ