ಮದ್ಯಪ್ರಿಯರಿಗೆ ಶಾಕ್​: ವಿಸ್ಕಿ, ರಮ್, ಜಿನ್, ವೋಡ್ಕಾ ಬೆಲೆ ಏರಿಕೆ ಸಾಧ್ಯತೆ

Alcohol price Hike: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ಐಎಂಎಲ್​ಗಳ ಮೇಲಿನ ದರವನ್ನು ಹೆಚ್ಚಳ ಮಾಡಿತ್ತು. ಇದೀಗ ಮೂರನೇ ಬಾರಿ ದರ ಹೆಚ್ಚಳ ಮಾಡಲು ಅಬಕಾರಿ ಇಲಾಖೆ ಮುಂದಾಗಿದ್ದು, ಈ ವಾರದಿಂದಲೇ ನೂತನ ದರ ಜಾರಿಯಾಗುವ ಸಾಧ್ಯತೆ ಇದೆ. ಇದಕ್ಕೆ ಮದ್ಯಪ್ರಿಯರು ಮತ್ತು ಬಾರ್ ಮಾಲೀಕರು ಗರಂ ಆಗಿದ್ದಾರೆ.

ಮದ್ಯಪ್ರಿಯರಿಗೆ ಶಾಕ್​: ವಿಸ್ಕಿ, ರಮ್, ಜಿನ್, ವೋಡ್ಕಾ ಬೆಲೆ ಏರಿಕೆ ಸಾಧ್ಯತೆ
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ
Edited By: ವಿವೇಕ ಬಿರಾದಾರ

Updated on: May 05, 2025 | 10:46 PM

ಬೆಂಗಳೂರು, ಮೇ 05: ರಾಜ್ಯದಲ್ಲಿ ಮತ್ತೆ ಐಎಂಎಲ್ (IML) ಮೇಲಿನ ದರ ಏರಿಕೆ ಆಗಲಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ದರ ಹೆಚ್ಚಳ ಮಾಡಿದೆ. ಇದೀಗ ಮತ್ತೆ ಮೂರನೇ ಬಾರಿ ಮದ್ಯ ದರ ಹೆಚ್ಚಳವಾಗಲಿದ್ದು, ಈ ವಾರದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಕಾರಣ 2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ಬರೋಬ್ಬರಿ 38600 ಕೋಟಿ ರುಪಾಯಿ ಟಾರ್ಗೆಟ್ ನೀಡಿತ್ತು. ಈ ಬಾರಿಯ ಬಜೆಟ್‌ನಲ್ಲಿ 40 ಸಾವಿರ ಕೋಟಿ ಟಾರ್ಗೆಟ್ ನೀಡಲಾಗಿದೆ. ಅಂದರೆ ಈ ಸಾಲಿನಲ್ಲಿ ಹೆಚ್ಚುವರಿಯಾಗಿ 1400 ಕೋಟಿ ರುಪಾಯಿ ಟಾರ್ಗೆಟ್ ನೀಡಿದ್ದು, ಹೊಸ ಟಾರ್ಗೆಟ್ ರೀಚ್ ಆಗಲು ಅಬಕಾರಿ ಇಲಾಖೆ ಮತ್ತೆ ದರ ಹೆಚ್ಚಳ ಮಾಡಲು ಪ್ಲಾನ್ ಮಾಡಿದೆಯಂತೆ.

ಈ ವಾರದಿಂದಲೇ ಎಲ್ಲಾ ರೀತಿಯ ಐಎಂಎಲ್​ಗಳ ಮೇಲೆ ಶೇ 10 ರಷ್ಟು ಏರಿಕೆ ಆಗಲಿದೆ. ಈಗಾಗಲೇ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆಯಂತೆ. ದರ ಏರಿಕೆ ಬಗ್ಗೆ ಎಲ್ಲ ಮದ್ಯ ಮಾರಾಟಗಾರರಿಗೆ ಮಾಹಿತಿ ನೀಡಲಾಗಿದೆಯಂತೆ.

ಇನ್ನು, ಮದ್ಯದ 16 ಸ್ಲ್ಯಾಬ್​ಗಳಲ್ಲಿ 1 ರಿಂದ 4 ಸ್ಲ್ಯಾಬ್​ಗಳ ಮೇಲೆ ದರ ಏರಿಕೆ ಏರಿಕೆ ಮಾಡಲು ಅಬಕಾರಿ ಇಲಾಖೆ ಮುಂದಾಗಿದ್ದು, ಸ್ಯ್ಲಾಬ್-1, ಸದ್ಯ 80 ರೂಪಾಯಿ ಇದ್ದು ಅದರ ಮೇಲೆ 10 ರೂಪಾಯಿ ಏರಿಕೆ ಆಗಲಿದೆ. ಸ್ಲ್ಯಾಬ್- 2, 155 ರೂಪಾಯಿ ಇದ್ದು ಅದರ ಮೇಲೆ 15 ರೂಪಾಯಿ ಏರಿಕೆ ಆಗಲಿದೆ, ಸ್ಲ್ಯಾಬ್- 3, 185 ರೂಪಾಯಿ ಇದ್ದು ಅದರ ಮೇಲೆ 15 ರಿಂದ 20 ರೂಪಾಯಿ ಏರಿಕೆ ಆಗಲಿದೆ. ಸ್ಲ್ಯಾಬ್- 4, 235 ರೂಪಾಯಿ ಇದ್ದು ಅದರ ಮೇಲೆ 20 ರಿಂದ 25 ರೂಪಾಯಿ ಏರಿಕೆ ಆಗಲಿದೆ.

ಇದನ್ನೂ ಓದಿ
ಮತ್ತೆ ಹೆಚ್ಚಾಗಲಿದೆ ಮದ್ಯದ ದರ: ಎಣ್ಣೆ ಪ್ರಿಯಕರಿಗೆ 3ನೇ ಬಾರಿಗೆ ಶಾಕ್​!
ಮದ್ಯಪ್ರಿಯರಿಗೆ ಬಿಗ್ ಶಾಕ್: ಬಜೆಟ್​ಗೂ ಮೊದಲೇ ಬಿಯರ್ ದರ ಏರಿಕೆ..!
Beer Price Hike: ಬಿಯರ್ ಪ್ರಿಯರಿಗೆ ಕಹಿ ಸುದ್ದಿ: ಜ. 20ರಿಂದಲೇ ದರ ಏರಿಕೆ
ಇಳಿಕೆಯಾಗಲಿದೆ ಪ್ರೀಮಿಯಂ ಸ್ಕಾಚ್ ದರ, ದುಬಾರಿಯಾಗಲಿದೆ ಬಡವರ ಮದ್ಯ

ಇದನ್ನೂ ಓದಿ: ಲಂಡನ್ ಸ್ಪಿರಿಟ್ಸ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಭಾರತದ ಮದ್ಯ

ಕ್ವಾರ್ಟರ್ ಮೇಲೆ 10 ರಿಂದ 25 ರೂ. ಏರಿಕೆ

ಒಂದು ಕ್ವಾರ್ಟರ್ ಮೇಲೆ 10 ರಿಂದ 25 ರೂಪಾಯಿವರೆಗೆ ದರ ಏರಿಕೆ ಆದರೆ ಒಂದು ಫುಲ್ ಬಾಟಲ್ ಮೇಲೆ 50 ರಿಂದ 100 ರುಪಾಯಿ ವರೆಗೆ ಏರಿಕೆ ಆಗಲಿದೆ. ಈ ಬಗ್ಗೆ ಮದ್ಯ ಪ್ರಿಯರು ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು.

ಒಟ್ಟಿನಲ್ಲಿ ರಾಜ್ಯ ಸರ್ಕಾರ ನೀಡಿರುವ ಟಾರ್ಗೆಟ್ ರೀಚ್ ಮಾಡಲು ಅಬಕಾರಿ ಇಲಾಖೆ ‌ಮತ್ತೊಮ್ಮೆ ದರ ಹೆಚ್ಚಳ ಮಾಡಲು ಮುಂದಾಗಿರುವುದು ಮದ್ಯಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us