ಬೆಳಗಾವಿ, ಡಿಸೆಂಬರ್ 14: ಎಲೆಕ್ಟ್ರಿಕ್ ವಾಹನಗಳ (Electric Vehicles) ಮೇಲೆ ಅವುಗಳ ಜೀವಿತಾವಧಿವರೆಗೆ ಶೇ 20ರ ತೆರಿಗೆ ವಿಧಿಸುವ ಪ್ರಸ್ತಾವವನ್ನು ಕೈಬಿಟ್ಟಿರುವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಬುಧವಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳ ಶಾಸಕರ ಒತ್ತಾಯದ ನಂತರ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.
ರೆಡ್ಡಿ ಅವರು ಕರ್ನಾಟಕ ಮೋಟಾರು ವಾಹನಗಳ ತೆರಿಗೆ (ಎರಡನೇ ತಿದ್ದುಪಡಿ) ಮಸೂದೆಯ ಭಾಗವಾಗಿ ಹೊಸ ಎಲೆಕ್ಟ್ರಿಕ್ ವಾಹನಗಳ ಮೇಲೆ ಶೇಕಡಾ 20 ರಷ್ಟು ಜೀವಿತಾವಧಿ ತೆರಿಗೆಯನ್ನು ಪ್ರಸ್ತಾಪಿಸಿದ್ದರು.
20ರಷ್ಟು ತೆರಿಗೆ ಪ್ರಸ್ತಾವನೆಯನ್ನು ಕೈಬಿಡಲು ಸಚಿವರು ಒಪ್ಪಿಗೆ ಸೂಚಿಸಿದ ಬಳಿಕ ವಿಧೇಯಕವನ್ನು ವಿಧಾನಸಭೆ ಅಂಗೀಕರಿಸಿತು. ಮಸೂದೆಯ ತಿದ್ದುಪಡಿ ಆವೃತ್ತಿಯು ಎಲೆಕ್ಟ್ರಿಕ್ ವಾಹನಗಳ ಮೇಲೆ ಶೇ 10ರ ತೆರಿಗೆಯನ್ನು ಪ್ರಸ್ತಾಪಿಸಿದೆ.
ಮಸೂದೆಯ ಪ್ರಕಾರ, 10 ಲಕ್ಷದಿಂದ 15 ಲಕ್ಷ ಮೌಲ್ಯದ ಹಳದಿ ಬೋರ್ಡ್ ಕಾರುಗಳು ಮತ್ತು 1,500-12,000 ಕೆಜಿ ಸಾಮರ್ಥ್ಯದ ಉತ್ತಮ ವಾಹನಗಳ ಮೇಲೆ ಸರ್ಕಾರವು ಜೀವಿತಾವಧಿಯ ತೆರಿಗೆ ವಿಧಿಸುವುದಿಲ್ಲ ಎಂದು ರೆಡ್ಡಿ ತಿಳಿಸಿದ್ದಾರೆ.
ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ತಂತ್ರ: ‘ಕೈ’ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಏನು?
ಎಇವಿಗಳ ಜೀವಿತಾವಧಿಗೆ ಶೇ 20ರ ತೆರಿಗೆ ವಿಧಿಸುವುದರಿಂದ ಎಲೆಕ್ಟ್ರಿಕ್ ವಾಹನ ಖರೀದಿಗೆ ಜನರ ಆಸಕ್ತಿ ಕಡಿಮೆಯಾಗಬಹುದು. ಹೀಗಾಗಿ ಎಲೆಕ್ಟ್ರಿಕ್ ವಾಹನಗಳ ಮೇಲೆ ಶೇ 20 ರ ತೆರಿಗೆ ವಿಧಿಸದಂತೆ ಮಾಜಿ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮತ್ತು ಇತರರು ಸಚಿವರನ್ನು ಒತ್ತಾಯಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ