AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರನ್ಯಾ ರಾವ್​ ಕೇಸ್‌: ಸಿಐಡಿ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರ, ಚರ್ಚೆಗೆ ಗ್ರಾಸ

ಸೊಂಟದಲ್ಲೂ ಚಿನ್ನ. ಕಾಲಿನಲ್ಲೂ ಬಂಗಾರ. ಶೂನಲ್ಲೂ ಗೋಲ್ಡ್. ಪಟಾಕಿ ಬೆಡಗಿ ರನ್ಯಾ ರಾವ್​ ಗೋಲ್ಡ್ ಸ್ಮಗ್ಲಿಂಗ್ ಕಳ್ಳಾಟ ದಿನಕ್ಕೊಂದು ತಿರುವುಪಡೆದುಕೊಳ್ಳುತ್ತಿದೆ. ಕ್ಷಣಕ್ಕೊಂದು ರೋಚಕ ಸಂಗತಿ ಬಯಲಾಗುತ್ತಿದೆ. ಈ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ರನ್ಯಾ ರಾವ್ ತಂದೆ ಡಿಜಿಪಿ ಕೆ ರಾಮಚಂದ್ರ ರಾವ್​ ಮತ್ತು ಪೊಲೀಸ್ ಸಿಬ್ಬಂದಿಯ ಪಾತ್ರದ ಕುರಿತು ಅನುಮಾನ ವ್ಯಕ್ತವಾಗಿದ್ದು, ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಆದ್ರೆ, ಇದೀಗ ಅದೇನಾಯ್ತೋ ಏನೋ ಏಕಾಏಕಿ ಸಿಐಡಿ ತನಿಖೆ ಆದೇಶವನ್ನು ವಾಪಸ್ ಪಡೆದುಕೊಂಡಿದೆ

ನಟಿ ರನ್ಯಾ ರಾವ್​ ಕೇಸ್‌: ಸಿಐಡಿ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರ, ಚರ್ಚೆಗೆ ಗ್ರಾಸ
Kannada Actress Ranya Rao
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Mar 12, 2025 | 10:13 PM

Share

ಬೆಂಗಳೂರು, (ಮಾರ್ಚ್​ 12): ಸ್ಯಾಂಡಲ್​ವುಡ್​ ನಟಿ ರನ್ಯಾ ರಾವ್​ (Kannada Actress Ranya Rao)  ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಪ್ರಭಾವಿ ರಾಜಕೀಯ ನಾಯಕರ ಹೆಸರು ಕೇಳಿಬರುತ್ತಿವೆ. ಈ ಹಿನ್ನಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ನಟಿ ಹಿಂದೆ ಇರುವ ಆ ಪ್ರಭಾವಿ ರಾಜಕಾರಣ ಯಾರು ಎನ್ನುವ ಬಗ್ಗೆ ಚರ್ಚೆಗಳು ಶುರುವಾಗಿವೆ. ಇದರ ಮಧ್ಯ ಇದೀಗ ಈ ಪ್ರಕರಣದ ಸಿಐಡಿ ತನಿಖೆಗೆ ವಹಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ. ಪೊಲೀಸರಿಂದಲೇ ಪ್ರೋಟೊಕಾಲ್‌ ಉಲ್ಲಂಘನೆಯಾದ ಹಿನ್ನೆಲೆ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಪ್ರೋಟೊಕಾಲ್‌ ಉಲ್ಲಂಘನೆಯಲ್ಲಿ ಕಾನ್ ಸ್ಟೇಬಲ್ ಗಳು ಭಾಗಿಯಾಗಿದ್ದಾರೆ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಸರ್ಕಾರ ಸಿಐಡಿಗೆ ಆದೇಶಿಸಿತ್ತು. ಆದ್ರೆ, ಇಂದು(ಮಾರ್ಚ್ 12) ಏಕಾಏಕಿ ಸರ್ಕಾರ, ಸಿಐಡಿ ಆದೇಶವನ್ನು ವಾಪಸ್ ಪಡೆದುಕೊಂಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.

ರನ್ಯಾ ರಾವ್ ವಿದೇಶಗಳಿಗೆ ಹೋಗಿ ಬರುವಾಗ ಪೊಲೀಸ್ ಸಿಬ್ಬಂದಿ ಲೋಪ ಇಲ್ಲಿ ಎದ್ದು ಕಣುತ್ತಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಿತ್ತು.  ಆದ್ರೆ, ಮತ್ತೊಂದೆಡೆ  ಎಸಿಎಸ್ ಗೌರವ್ ಗುಪ್ತ ನೇತೃತ್ವದಲ್ಲಿ ಪ್ರತ್ಯೇಕ ತನಿಖೆಗೆ ವಹಿಸಿರುವ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ಆದೇಶವನ್ನು ವಾಪಸ್ ಪಡೆದಿರುವುದಾಗಿ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಗೃಹ ಇಲಾಖೆ ಆದೇಶ

ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಮಂಗಳವಾರ ಆದೇಶಿಸಿದೆ. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ಒಂದು ವಾರದ ಒಳಗೆ ತನಿಖೆ ನಡೆಸಲು ಸೂಚಿಸಲಾಗಿದೆ.

ಇದನ್ನೂ ಓದಿ
Image
ಚಿನ್ನ ಕಳ್ಳ ಸಾಗಣೆ: ರನ್ಯಾ ಜತೆ ನಿರಂತರ ಸಂಪರ್ಕದಲ್ಲಿ ಇದ್ದ ಪ್ರಭಾವಿಗಳು
Image
ಅಪ್ಪ ಪೋಲಿಸ್.. ಮಗಳು ಕಳ್ಳಿ.. ನಟಿ ರನ್ಯಾ ಚಿನ್ನದ ರಹಸ್ಯ!
Image
ನಟಿ ರನ್ಯಾ ಚಿನ್ನ ಸ್ಮಗ್ಲಿಂಗ್​ನಲ್ಲಿ ಮಲತಂದೆ ಡಿಜಿಪಿಯ ಕೈವಾಡವೂ ಇತ್ತೇ?
Image
ಚಿನ್ನ ಕಳ್ಳಸಾಗಣೆ: ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್​ಗೆ ನ್ಯಾಯಾಂಗ ಬಂಧನ

ನಟಿ ರನ್ಯಾ ಚಿನ್ನ ನಸಾಗಾಟ ಮಾಡುವಾಗ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಹೆಸರು ಬಳಸಿದ್ದರು. ಹೀಗಾಗಿ ಶಿಷ್ಟಾಚಾರದ ಸೌಲಭ್ಯ ಪಡೆಯಲು ಕಾರಣವಾದ ಸಂಗತಿಗಳು ಯಾವುವು? ಕೇಸ್​​ನಲ್ಲಿ ರಾಮಚಂದ್ರರಾವ್ ಪಾತ್ರ ಏನೇನಿದೆ ಎಂಬ ಬಗ್ಗೆ ತನಿಖೆ ನಡೆಸಲು ಅಧಿಕಾರಿ ನೇಮಿಸಲಾಗಿದೆ. ಇವರು ತಕ್ಷಣ ತನಿಖೆ ಪ್ರಾರಂಭಿಸಿ ಒಂದು ವಾರದಲ್ಲಿ ವರದಿ ಸಲ್ಲಿಸಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:42 pm, Wed, 12 March 25