ಸರ್ಕಾರಿ ವಸತಿ ಶಾಲೆಯಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ನಿರ್ಬಂಧ ಆದೇಶ ವಾಪಸ್

Karnataka Residential Educational Institutions Society: ಕರ್ನಾಟಕದ ಎಲ್ಲ ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡದಂತೆ ಹೊರಡಿಸಿದ್ದ ಸುತ್ತೋಲೆಯನ್ನು ಹಿಂಪಡೆದುಕೊಂಡಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿದ್ದು, ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡದಂತೆ ಸುತ್ತೋಲೆ ಹೊರಡಿಸಿತ್ತು.

ಸರ್ಕಾರಿ ವಸತಿ ಶಾಲೆಯಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ನಿರ್ಬಂಧ ಆದೇಶ ವಾಪಸ್
ವಿಧಾನಸೌಧ
Edited By:

Updated on: Feb 15, 2024 | 6:36 PM

ಬೆಂಗಳೂರು, (ಫೆಬ್ರವರಿ 15): ಕರ್ನಾಟಕ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ (Religious festival) ಆಚರಣೆಗೆ ಹೇರಿದ್ದ ನಿರ್ಬಂಧ ಆದೇಶವನ್ನು ವಾಪಸ್ ಪಡೆಯಲಾಗಿದೆ. ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು (Karnataka Residential Educational Institutions Society) ಸುತ್ತೋಲೆ ಹೊರಡಿಸಿತ್ತು. ಇದಕ್ಕೆ ವಿರೋಧಗಳು ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಇದೀಗ ತನ್ನ ನಿರ್ಬಂಧ ಆದೇಶವನ್ನು ವಾಪಸ್ ಪಡೆದಿದೆ.

ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿರುವುದಕ್ಕೆ ಹಿಂದೂ ಪರ ಹೋರಾಟಗಾರ ಮೋಹನಗೌಡ ಆಕ್ರೋಶ ವ್ಯಕ್ತಪಡಿಸಿದ್ದರು. ಹಿಂದೂ ವಿದ್ಯಾರ್ಥಿಗಳಲ್ಲಿ ನಾಸ್ತಿಕ ಮನೋಭಾವ ಮೂಡಿಸುವ ಕೆಲಸವಾಗುತ್ತಿದೆ ಎಂದು ಕಿರಿಕಾರಿದ್ದರು. ಇನ್ನು ಸರ್ಕಾರದ ಸುತ್ತೋಲೆಗೆ ಹಿಂದೂ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ತಾರಕಕ್ಕೇರುತ್ತಿದ್ದಂತೆಯೇ ಎಚ್ಚೆತ್ತ ಸರ್ಕಾರ ಸುತ್ತೋಲೆಯನ್ನು ವಾಪಸ್ ಪಡೆದುಕೊಂಡಿದೆ.

ಇದನ್ನೂ ಓದಿ: ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರದಿಂದ ಸುತ್ತೋಲೆ

ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡಬಾರದು. ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು. ಅದು ಹೊರತುಪಡಿಸಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿತ್ತು. ಯುಗಾದಿ, ರಂಜಾನ್, ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾತಿ ಸೇರಿದಂತೆ ಯಾವುದೇ ಧಾರ್ಮಿಕ ಹಬ್ಬಗಳನ್ನು ಶಾಲೆ ಮತ್ತು ಕಾಲೇಜುಗಳಲ್ಲಿ ಆಚರಿಸುವಂತಿಲ್ಲ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿತ್ತು.

10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಶಾಲೆ, ಕಾಲೇಜುಗಳಲ್ಲಿ ಆಚರಿಸಬಹುದು. ಧಾರ್ಮಿಕ ಹಬ್ಬ ಆಚರಿಸಿದರೆ ಪ್ರಾಂಶುಪಾಲರು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿತ್ತು. ಆದ್ರೆ, ಇದಕ್ಕೆ ವಿರೋಧಗಳು ವ್ಯಕ್ತವಾಗುತ್ತಿದ್ದಂತೆಯೇ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ತನ್ನ ಸುತ್ತೋಲೆಯನ್ನು ಇದೀಗ ವಾಪಸ್ ಪಡೆದುಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:23 pm, Thu, 15 February 24

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us