ಡಿಕೆ ಶಿವಕುಮಾರ್ ವಿರುದ್ಧದ ತನಿಖೆ ವಾಪಸ್: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ಸಿಬಿಐಗೆ ನೀಡಿದ್ದನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಹಿಂಪಡಿದಿತ್ತು. ಇದನ್ನು ಪ್ರಶ್ನಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ.

ಡಿಕೆ ಶಿವಕುಮಾರ್ ವಿರುದ್ಧದ ತನಿಖೆ ವಾಪಸ್: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್
ಡಿಕೆ ಶಿವಕುಮಾರ್, ಬಸನಗೌಡ ಪಾಟೀಲ್​ ಯತ್ನಾಳ್​
Follow us
Ramesha M
| Updated By: ವಿವೇಕ ಬಿರಾದಾರ

Updated on:Dec 06, 2023 | 9:06 PM

ಬೆಂಗಳೂರು ಡಿ.06: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಸಿಬಿಐ (CBI) ತನಿಖೆಗೆ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ (Congress Government) ವಾಪಸ್ ಪಡೆದಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ (Basangouda Patil Yatnal) ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದಲ್ಲಿ ರಿಟ್​ ಅರ್ಜಿ ಸಲ್ಲಿಸಿದ್ದು, ಒಪ್ಪಿಗೆ ಹಿಂಪಡೆದ ಸರ್ಕಾರದ ಆದೇಶ ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ.

ರಿಟ್​ ​ಅರ್ಜಿಯಲ್ಲಿ ತನಿಖೆ ಮುಂದುವರಿಸಲು ಸಿಬಿಐಗೆ ನಿರ್ದೇಶಿಸಬೇಕು. ಅಲ್ಲದೆ ಕಾಜಿ ಲೆಂಡಪ್‌ ದೋರ್ಜಿ ಪ್ರಕರಣದ ತೀರ್ಪಿನ ಉಲ್ಲೇಖಿಸಿ ಒಮ್ಮೆ‌ ಸಿಬಿಐ ತನಿಖೆಗೆ ನೀಡಿದ ಒಪ್ಪಿಗೆ ಹಿಂಪಡೆಯುವಂತಿಲ್ಲ. ಸಿಬಿಐ ತನಿಖೆ‌ ಬಹುತೇಕ ಮುಕ್ತಾಯದ ಹಂತದಲ್ಲಿದೆ‌. ಈ ಹಂತದಲ್ಲಿ ಸರ್ಕಾರ ಕಾನೂನುಬಾಹಿರ ಕ್ರಮ ಕೈಗೊಂಡಿದೆ. ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಸರ್ಕಾರ ಹೊಂದಿದೆ ಎಂದು ಪಿಐಎಲ್ ಅರ್ಜಿ ಸಲ್ಲಿಸಿದ್ದಾರೆ.

ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನರಿದ್ದ ಪೀಠ, ಸಾರ್ವಜನಿಕ ಹಿತಾಸಕ್ತಿ ಬದಲು ರಿಟ್ ಅರ್ಜಿ ಸಲ್ಲಿಸಿದ್ದೇಕೆ?  ರಾಜ್ಯ ಸರ್ಕಾರದ ಕ್ರಮದಿಂದ ನೀವು ಹೇಗೆ ಬಾಧಿತರಾಗುತ್ತೀರಿ. ವಿವರಣೆ ನೀಡುವಂತೆ ಯತ್ನಾಳ್ ಪರ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ. ವಿಚಾರಣೆಯನ್ನು ಡಿ.15ಕ್ಕೆ ಮುಂದೂಡಿ ಪೀಠ ಆದೇಶ ಹೊರಡಿಸಿದೆ.

ಇನ್ನು ಯತ್ನಾಳ್​ ಅವರ ರಿಟ್ ಅರ್ಜಿಗೆ ಸರ್ಕಾರಿ ವಕೀಲ ಶಶಿಕಿರಣ್ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದರು. ಯತ್ನಾಳ್ ಅವರ ಮೂಲಕ ಸಿಬಿಐ ಅರ್ಜಿ ಸಲ್ಲಿಸಿರುವಂತಿದೆ‌ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿವಾದಿಸಿದ ಸಿಬಿಐ ಪರ ವಕೀಲ ಪ್ರಸನ್ನಕುಮಾರ್ ಸಿಬಿಐ ತನ್ನ ಪ್ರಕರಣವನ್ನು ಸಮರ್ಥಿಸಿಕೊಳ್ಳಲು ಸಮರ್ಥವಾಗಿದೆ. ಸರ್ಕಾರದ ವಾದದಲ್ಲಿ ಹುರುಳಿಲ್ಲವೆಂದು ಹೇಳಿದರು.

ಏನಿದು ಪ್ರಕರಣ

2018ರಲ್ಲಿ ಡಿಕೆ ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ‌ ನಡೆಸಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ಭ್ರಷ್ಟಾಚಾರ ತಡೆ ಕಾಯ್ದೆಯಡಿ ತನಿಖೆ ಅಗತ್ಯವಿದೆ ಎಂಬ ಕಾರಣಕ್ಕೆ ಸಿಬಿಐ ತನಿಖೆ ನಡೆಸಲು ಬಿಎಸ್​ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಅನುಮತಿ ನೀಡಿತ್ತು. ಅಂದಿನ ಸರ್ಕಾರದ ಸಮ್ಮತಿ ಪಡೆದು ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.

ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ಕೇಸ್ ದಾಖಲಿಸಿದ್ದ ಸಿಬಿಐ, 2013 ರಿಂದ 2018ರ ಅವಧಿಯಲ್ಲಿ ಗಳಿಸಿದ ಆದಾಯ, ಹಾಗೂ ವೆಚ್ಚದ ಮಾಹಿತಿ ಆಧರಿಸಿ 74.93 ಕೋಟಿ ರೂ. ಆದಾಯ ಮೀರಿ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಈ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ.

ಈ ಹಂತದಲ್ಲಿ ಸರ್ಕಾರದ ಸಮ್ಮತಿ ಪ್ರಶ್ನಿಸಿ ಡಿಕೆ ಶಿವಕುಮಾರ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಏಕಸದಸ್ಯ ಪೀಠ ರಿಟ್ ಅರ್ಜಿ ವಜಾಗೊಳಿಸಿತ್ತು. ನಂತರ ಡಿಕೆ ಶಿವಕುಮಾರ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಸಿಬಿಐ ತನಿಖೆಗೆ ಸರ್ಕಾರದ ಸಮ್ಮತಿ ನೀಡಿದ ಕ್ರಮಕ್ಕೆ ತಡೆ ನೀಡಿದೆ. ಇದೀಗ ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ನಡೆಸಿ ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆಯಲು ಡಿಕೆ ಶಿವಕುಮಾರ್ ಅವರಿಗೆ ಒಪ್ಪಿಗೆ ಸೂಚಿಸಿತ್ತು.

ಈ ಮಧ್ಯೆ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಸರ್ಕಾರ‌ ನೀಡಿದ ಸಮ್ಮತಿಯನ್ನು ಹಿಂಪಡೆಯಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿತ್ತು. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕಾನೂನು ಅಭಿಪ್ರಾಯ ಆಧರಿಸಿ ಸರ್ಕಾರ ಈ ತೀರ್ಮಾನಕ್ಕೆ ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:49 pm, Wed, 6 December 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ