AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ, ರಾಜ್ಯಪಾಲರ ನಡುವೆ ಮೂಡದ ಒಮ್ಮತ: 6 ವಿಧೇಯಕಗಳು ಬಾಕಿ ಉಳಿಸಿಕೊಂಡ ಗವರ್ನರ್​​

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿದ ನಂತರ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಸಂಘರ್ಷ ಜೋರಾಗಿದೆ. ಇದರ ಪರಿಣಾಮವೋ ಎಂಬಂತೆ ರಾಜ್ಯಪಾಲರು 2024ರಲ್ಲಿ 11 ಮತ್ತು 2025ರಲ್ಲಿ 6 ವಿಧೇಯಕಗಳಿಗೆ ಅಂಕಿತ ಹಾಕಿಲ್ಲ. ಹೆಚ್ಚಿನ ಮಾಹಿತಿ ಕೋರಿ ಸರ್ಕಾರಕ್ಕೆ ಕಳುಹಿಸಿದ್ದಾರೆ. ಯಾವ್ಯಾವ ವಿಧೇಯಕಗಳಿಗೆ ಸಹಿ ಹಾಕಿಲ್ಲ? ಇಲ್ಲಿದೆ ವಿವರ

ಸರ್ಕಾರ, ರಾಜ್ಯಪಾಲರ ನಡುವೆ ಮೂಡದ ಒಮ್ಮತ: 6 ವಿಧೇಯಕಗಳು ಬಾಕಿ ಉಳಿಸಿಕೊಂಡ ಗವರ್ನರ್​​
ಸಿದ್ದರಾಮಯ್ಯ, ಥಾವಂರ್​ ಚಂದ್​ ಗೆಹ್ಲೋಟ್
Follow us
ವಿವೇಕ ಬಿರಾದಾರ
|

Updated on:Apr 08, 2025 | 6:16 PM

ಬೆಂಗಳೂರು, ಏಪ್ರಿಲ್​ 08: ರಾಜ್ಯಗಳ ಅಧಿವೇಶನದಲ್ಲಿ ಅಂಗೀಕೃತಗೊಂಡ ವಿಧೇಯಕಗಳು (Bill) ಆಯಾ ರಾಜ್ಯಪಾಲರ (Governor) ಅಂಕಿತ ಅತ್ಯ ಅವಶ್ಯಕವಾಗಿದೆ. ಆದರೆ, ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ಏರ್ಪಟ್ಟರೆ ವಿಧಯೇಕಗಳು ಪಾಸಾಗದೆ ಬಾಕಿ ಉಳಿದುಕೊಳ್ಳುತ್ತವೆ. ಇದಕ್ಕೆ ಸೂಕ್ತ ಉದಾಹರಣೆ ತಮಿಳುನಾಡು ಮತ್ತು ಕರ್ನಾಟಕ (Karnataka). ತಮಿಳುನಾಡಿನಲ್ಲಿ ರಾಜ್ಯಪಾಲರು 10 ಪ್ರಮುಖ ಮಸೂದೆಗಳಿಗೆ ಅಂಕಿತ ಹಾಕದೆ ತಡೆ ಹಿಡಿದ್ದರು. ಈ ಸಂದರ್ಭದಲ್ಲಿ ಅಲ್ಲಿನ ಸರ್ಕಾರ ಸುಪ್ರೀಂಕೋರ್ಟ್​ನ ಮೆಟ್ಟಿಲು ಏರಿತು. ಆಗ  ಸುಪ್ರೀಂಕೋರ್ಟ್​, ಮಸೂದೆಗಳಿಗೆ ಅಂಕಿತ ಹಾಕದೆ ತಡೆಹಿಡಿದ ತಮಿಳುನಾಡು ರಾಜ್ಯಪಾಲರ ನಿರ್ಧಾರ ಕಾನೂನುಬಾಹಿರ ಮತ್ತು ನಿರಂಕುಶಯುತವಾದದು ಎಂದು ಹೇಳಿತ್ತು.

ಇದೀಗ, ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಬಿಬಿಎಂಪಿ ವಿಭಜನೆ ಮಾಡಿ ಬೆಂಗಳೂರು ನಗರ ವಿಸ್ತೀರ್ಣ ಮಾಡುವ ಗ್ರೇಟರ್​ ಬೆಂಗಳೂರು ಆಡಳಿತ ವಿಧೇಯಕ ಸೇರಿದಂತೆ ಒಟ್ಟು 6 ವಿಧೇಯಕಗಳಿಗೆ ಅಂಕಿತ ಹಾಕಿಲ್ಲ. ಈ ಆರು ವಿಧೇಯಕಗಳಲ್ಲಿ ಗ್ರೇಟರ್​ ಬೆಂಗಳೂರು ಆಡಳಿತ ವಿಧೇಯಕಕ್ಕೆ ಹೆಚ್ಚಿನ ಸ್ಪಷ್ಟನೆ ಕೋರಿ ರಾಜ್ಯ ಸರ್ಕಾರಕ್ಕೆ ವಾಪಸ್​ ಕಳುಹಿಸಿದ್ದಾರೆ.

ಬಾಕಿ ಇರುವ ವಿಧೇಯಕಗಳು

  1. ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ.
  2.  ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ.
  3.  ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿ‌ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ
  4. ಪಾರದರ್ಶಕತೆ ಅಧಿನಿಯಮ ( ತಿದ್ದುಪಡಿ) ವಿಧೇಯಕ 2025
  5. ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ. ಮತ್ತು ಪಂಚಾಯತ್‌ರಾಜ್. ವಿಶ್ವವಿದ್ಯಾಲಯ ವಿಧೇಯಕ
  6. ಕೃಷಿ ವಿಜ್ಞಾನಗಳ (ತಿದ್ದುಪಡಿ) ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ
  7. ಕರ್ನಾಟಕ ವೃತ್ತಿ, ಕಸುಬು, ಉದ್ಯೋಗಗಳ ಮೇಲಿನ ತೆರಿಗೆ ತಿದ್ದುಪಡಿ ವಿಧೇಯಕ-2025

ರಾಜ್ಯಪಾಲರು ಕೋರಿದ ಸ್ಪಷ್ಟನೆ ಏನು?

ಗ್ರೇಟರ್​ ಬೆಂಗಳೂರು ಆಡಳಿತ ವಿಧೇಯಕ ವಿರುದ್ಧ ನಾಗರಿಕ ಸಂಘಟನೆಗಳು ನನಗೆ ದೂರು ನೀಡಿವೆ. ಜೊತೆಗೆ, ವಿಧಾನಸಭೆ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರು, ಬಿಜೆಪಿ ಸದಸ್ಯರು ವಿಧೇಯಕ ವಿರೋಧಿಸಿ ಮನವಿ ಪತ್ರ ಸಲ್ಲಿಸಿದ್ದಾರೆ. ಅವರು ಸಲ್ಲಿಸಿರುವ ಆಕ್ಷೇಪಗಳಿಗೆ ಸ್ಪಷ್ಟನೆ ಅಗತ್ಯವಿದೆ ಎಂದು ರಾಜ್ಯಪಾಲರು ಸರ್ಕಾರಕ್ಕೆ ಹೇಳಿದ್ದಾರೆ.

ಇದನ್ನೂ ಓದಿ
Image
ವಿಧಾನಸೌಧ ವೀಕ್ಷಣೆಗೂ ಶುಲ್ಕ: ಸಂಸತ್ ಭವನ ಮಾದರಿಯಲ್ಲಿ ಟೂರ್​ ಗೈಡ್​ ಜಾರಿ
Image
ಸಿದ್ದರಾಮಯ್ಯ ಸರ್ಕಾರಕ್ಕೆ ಹಿನ್ನಡೆ: ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್..!
Image
ಸರ್ಕಾರ vs ರಾಜಭವನ: ವಿಧೇಯಕ ಅನುಮೋದಿಸದೆ ವಾಪಸ್ಸು​ ಕಳುಹಿಸಿದ ರಾಜ್ಯಪಾಲರು
Image
ಸರಕು ಮತ್ತು ಸೇವೆಗಳ ತೆರಿಗೆ 2ನೇ ತಿದ್ದುಪಡಿ ವಿಧೇಯಕ 2023 ಅಂಗೀಕಾರ

ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ವಿಧೇಯಕ ಪಾಸು ಮಾಡಿಕೊಳ್ಳಲು ಬಿಜೆಪಿಯ 18 ಶಾಸಕರನ್ನು ಸಸ್ಪೆಂಡ್ ಮಾಡಲಾಗಿದೆ: ಯತ್ನಾಳ್

ಈ ವಿಧೇಯಕದಲ್ಲಿ ಬಿಬಿಎಂಪಿಯನ್ನು ಏಳು ಪಾಲಿಕೆಗಳಾಗಿ ವಿಭಜಿಸಲು ಅವಕಾಶ ನೀಡಲಾಗಿದೆ. ಈ ಮಾದರಿ ದೆಹಲಿಯಲ್ಲಿ ವಿಫಲವಾಗಿದೆ. ವಿಧೇಯಕದಲ್ಲಿ ಗ್ರೇಟರ್​ ಬೆಂಗಳೂರು ಆಡಳಿತ ಪ್ರಾಧಿಕಾರ ರಚಿಸಲು ಉದ್ದೇಶಿಸಲಾಗಿದೆ. ಇದು ಚುನಾಯಿತ ಪಾಲಿಕೆಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದ್ದು ಮರುಪರಿಶೀಲಿಸುವಂತೆ ಸೂಚಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:37 pm, Tue, 8 April 25

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್