
ಬೆಂಗಳೂರು, ಏಪ್ರಿಲ್ 08: ರಾಜ್ಯಗಳ ಅಧಿವೇಶನದಲ್ಲಿ ಅಂಗೀಕೃತಗೊಂಡ ವಿಧೇಯಕಗಳು (Bill) ಆಯಾ ರಾಜ್ಯಪಾಲರ (Governor) ಅಂಕಿತ ಅತ್ಯ ಅವಶ್ಯಕವಾಗಿದೆ. ಆದರೆ, ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ಏರ್ಪಟ್ಟರೆ ವಿಧಯೇಕಗಳು ಪಾಸಾಗದೆ ಬಾಕಿ ಉಳಿದುಕೊಳ್ಳುತ್ತವೆ. ಇದಕ್ಕೆ ಸೂಕ್ತ ಉದಾಹರಣೆ ತಮಿಳುನಾಡು ಮತ್ತು ಕರ್ನಾಟಕ (Karnataka). ತಮಿಳುನಾಡಿನಲ್ಲಿ ರಾಜ್ಯಪಾಲರು 10 ಪ್ರಮುಖ ಮಸೂದೆಗಳಿಗೆ ಅಂಕಿತ ಹಾಕದೆ ತಡೆ ಹಿಡಿದ್ದರು. ಈ ಸಂದರ್ಭದಲ್ಲಿ ಅಲ್ಲಿನ ಸರ್ಕಾರ ಸುಪ್ರೀಂಕೋರ್ಟ್ನ ಮೆಟ್ಟಿಲು ಏರಿತು. ಆಗ ಸುಪ್ರೀಂಕೋರ್ಟ್, ಮಸೂದೆಗಳಿಗೆ ಅಂಕಿತ ಹಾಕದೆ ತಡೆಹಿಡಿದ ತಮಿಳುನಾಡು ರಾಜ್ಯಪಾಲರ ನಿರ್ಧಾರ ಕಾನೂನುಬಾಹಿರ ಮತ್ತು ನಿರಂಕುಶಯುತವಾದದು ಎಂದು ಹೇಳಿತ್ತು.
ಇದೀಗ, ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಿಬಿಎಂಪಿ ವಿಭಜನೆ ಮಾಡಿ ಬೆಂಗಳೂರು ನಗರ ವಿಸ್ತೀರ್ಣ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಸೇರಿದಂತೆ ಒಟ್ಟು 6 ವಿಧೇಯಕಗಳಿಗೆ ಅಂಕಿತ ಹಾಕಿಲ್ಲ. ಈ ಆರು ವಿಧೇಯಕಗಳಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ ಹೆಚ್ಚಿನ ಸ್ಪಷ್ಟನೆ ಕೋರಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ವಿರುದ್ಧ ನಾಗರಿಕ ಸಂಘಟನೆಗಳು ನನಗೆ ದೂರು ನೀಡಿವೆ. ಜೊತೆಗೆ, ವಿಧಾನಸಭೆ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರು, ಬಿಜೆಪಿ ಸದಸ್ಯರು ವಿಧೇಯಕ ವಿರೋಧಿಸಿ ಮನವಿ ಪತ್ರ ಸಲ್ಲಿಸಿದ್ದಾರೆ. ಅವರು ಸಲ್ಲಿಸಿರುವ ಆಕ್ಷೇಪಗಳಿಗೆ ಸ್ಪಷ್ಟನೆ ಅಗತ್ಯವಿದೆ ಎಂದು ರಾಜ್ಯಪಾಲರು ಸರ್ಕಾರಕ್ಕೆ ಹೇಳಿದ್ದಾರೆ.
ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ವಿಧೇಯಕ ಪಾಸು ಮಾಡಿಕೊಳ್ಳಲು ಬಿಜೆಪಿಯ 18 ಶಾಸಕರನ್ನು ಸಸ್ಪೆಂಡ್ ಮಾಡಲಾಗಿದೆ: ಯತ್ನಾಳ್
ಈ ವಿಧೇಯಕದಲ್ಲಿ ಬಿಬಿಎಂಪಿಯನ್ನು ಏಳು ಪಾಲಿಕೆಗಳಾಗಿ ವಿಭಜಿಸಲು ಅವಕಾಶ ನೀಡಲಾಗಿದೆ. ಈ ಮಾದರಿ ದೆಹಲಿಯಲ್ಲಿ ವಿಫಲವಾಗಿದೆ. ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಪ್ರಾಧಿಕಾರ ರಚಿಸಲು ಉದ್ದೇಶಿಸಲಾಗಿದೆ. ಇದು ಚುನಾಯಿತ ಪಾಲಿಕೆಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದ್ದು ಮರುಪರಿಶೀಲಿಸುವಂತೆ ಸೂಚಿಸಿದ್ದಾರೆ.
Published On - 5:37 pm, Tue, 8 April 25