ಬರದಿಂದ ನಲುಗಿದ ರೈತರಿಗೆ ಗುಡ್ ನ್ಯೂಸ್:ಬರ ಪರಿಹಾರ ಘೋಷಿಸಿದ ಸರ್ಕಾರ

Updated on: Sep 24, 2026 | 9:21 PM

ಮಳೆ ಬೆಳೆ ಇಲ್ಲದೇ ಬರದಿಂದ ನಲುಗಿದ ಕರ್ನಾಟಕದ ರೈತರಿಗೆ ರಾಜ್ಯ ಸರ್ಕಾರ ನೆರವು ನೀಡಲು ಮುಂದಾಗಿದೆ. ಹೌದು...ಪ್ರತಿ ರೈತನಿಗೆ 2500 ರೂಪಾಯಿ ಬರ ಪರಿಹಾರ ನೀಡಲು ತೀರ್ಮಾನಿಸಿದ್ದು, ಈ ಸಂಬಂಧ ಕಂದಾಯ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ ಜಿ. ಪರಮೇಶ್ವರ್ ಅವರು ಸದನದಲ್ಲಿಂದು ಘೋಷಣೆ ಮಾಡಿದ್ದಾರೆ. ಬರ ಪರಿಸ್ಥಿತಿಯ ಕುರಿತ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಪರಮೇಶ್ವರ್, ತಕ್ಷಣವೇ 1250 ಕೋಟಿ ರೂ, ಮೊದಲ ಹಂತದಲ್ಲಿ ಕೊಡುತ್ತಿದ್ದೇವೆ. ಇದು ಸಣ್ಣ ಹಣ ಅಲ್ಲ. 40 ರಿಂದ 50 ಲಕ್ಷ ರೈತರಿಗೆ ತಕ್ಷಣವೇ ಜಾರಿಗೆ ಬರುವಂತೆ ಪ್ರಕಟ ಮಾಡುತ್ತಿದ್ದೇನೆ ಎಂದರು.

ಬೆಂಗಳೂರು, (ಸೆಪ್ಟೆಂಬರ್ 24): ಮಳೆ ಬೆಳೆ ಇಲ್ಲದೇ ಬರದಿಂದ ನಲುಗಿದ ಕರ್ನಾಟಕದ ರೈತರಿಗೆ ರಾಜ್ಯ ಸರ್ಕಾರ ನೆರವು ನೀಡಲು ಮುಂದಾಗಿದೆ. ಹೌದು…ಪ್ರತಿ ರೈತನಿಗೆ 2500 ರೂಪಾಯಿ ಬರ ಪರಿಹಾರ ನೀಡಲು ತೀರ್ಮಾನಿಸಿದ್ದು, ಈ ಸಂಬಂಧ ಕಂದಾಯ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ ಜಿ. ಪರಮೇಶ್ವರ್ ಅವರು ಸದನದಲ್ಲಿಂದು ಘೋಷಣೆ ಮಾಡಿದ್ದಾರೆ. ಬರ ಪರಿಸ್ಥಿತಿಯ ಕುರಿತ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಪರಮೇಶ್ವರ್, ತಕ್ಷಣವೇ 1250 ಕೋಟಿ ರೂ, ಮೊದಲ ಹಂತದಲ್ಲಿ ಕೊಡುತ್ತಿದ್ದೇವೆ. ಇದು ಸಣ್ಣ ಹಣ ಅಲ್ಲ. 40 ರಿಂದ 50 ಲಕ್ಷ ರೈತರಿಗೆ ತಕ್ಷಣವೇ ಜಾರಿಗೆ ಬರುವಂತೆ ಪ್ರಕಟ ಮಾಡುತ್ತಿದ್ದೇನೆ ಎಂದರು.

ಆದ್ರೆ, ಒಂದು ಎಕರೇಗೆ 2500 ರೂಪಾಯಿ ನಿಗದಿ ಮಾಡಲಾಗಿದ್ಯಾ? ಅಥವಾ ಒಂದು ಹೆಕ್ಟರ್​​​ಗೆ ಕೊಡಲಾಗುತ್ತಾ ಎನ್ನುವುದು ಮಾತ್ರ ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ. ಸರ್ಕಾರ ಅಧಿಕೃತ ಆದೇಶ ಹೊರಬಿದ್ದ ಬಳಿಕ ಎಲ್ಲಾ ಸ್ಪಷ್ಟತೆ ಸಿಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More