AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಕೇಂದ್ರದ ಮಾದರಿಯಂತೆ ರಾಜ್ಯದಲ್ಲೂ ಆರೋಗ್ಯ ಭಾಗ್ಯ

ರಾಜ್ಯ ಸರ್ಕಾರವು ತನ್ನ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ಮಾದರಿಯಂತೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಅಡಿಯಲ್ಲಿ 40 ವರ್ಷ ವಯಸ್ಸು ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ಉಚಿತವಾಗಿ ವಾರ್ಷಿಕ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಮಂಜೂರು ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಹಾಗಾದ್ರೆ, ಏನೆಲ್ಲಾ ಚೆಕಪ್ ಮಾಡಿಸಿಕೊಳ್ಳಬಹುದು? ಎನ್ನುವ ಡಿಟೇಲ್ಸ್ ಇಲ್ಲಿದೆ.

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಕೇಂದ್ರದ ಮಾದರಿಯಂತೆ ರಾಜ್ಯದಲ್ಲೂ ಆರೋಗ್ಯ ಭಾಗ್ಯ
Vidhana Soudha
Vinay Kashappanavar
| Edited By: |

Updated on:Jun 22, 2026 | 6:35 PM

Share

ಬೆಂಗಳೂರು, (ಜೂನ್.22): ಕೇಂದ್ರ ಸರ್ಕಾರದ ಮಾದರಿಯಂತೆ ಕರ್ನಾಟಕದಲ್ಲೂ ರಾಜ್ಯ ಸರ್ಕಾರಿ ನೌಕರರಿಗೆ (Karnataka Governmnet employees) ಉಚಿತ ಆರೋಗ್ಯ ತಪಾಸಣೆ ಸೌಲಭ್ಯ ಘೋಷಿಸಲಾಗಿದೆ. ಹೌದು…ಆರೋಗ್ಯ ಸಂಜೀವಿನಿ ಯೋಜನೆ (KASS) ಅಡಿಯಲ್ಲಿ 40 ವರ್ಷ ವಯಸ್ಸು ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ಉಚಿತವಾಗಿ ವಾರ್ಷಿಕ ವೈದ್ಯಕೀಯ ತಪಾಸಣೆ (Annual Health Checkup) ಸೌಲಭ್ಯವನ್ನು ಮಂಜೂರು ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಆಧುನಿಕ ಜೀವನ ಶೈಲಿ ಮತ್ತು ಕೆಲಸದ ಒತ್ತಡದಿಂದಾಗಿ ನೌಕರರಲ್ಲಿ ಹೆಚ್ಚಾಗುತ್ತಿರುವ ಮಧುಮೇಹ, ರಕ್ತದೊತ್ತಡ ಹಾಗೂ ಹೃದಯಾಘಾತದಂತಹ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ತಡೆಗಟ್ಟುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮುಖ್ಯಾಂಶಗಳು

  • 40 ವರ್ಷ ಮೇಲ್ಪಟ್ಟ ಸರ್ಕಾರಿ ನೌಕರರಿಗೆ ವಾರ್ಷಿಕ ಆರೋಗ್ಯ ತಪಾಸಣೆ
  • ಕೇಂದ್ರ ಸರ್ಕಾರದ ಮಾದರಿಯಂತೆ ರಾಜ್ಯ ಸರ್ಕಾರದಲ್ಲೂ ಯೋಜನೆ
  • ಆರೋಗ್ಯ ಸಂಜೀವಿನಿ ಅಡಿಯಲ್ಲಿ ವಾರ್ಷಿಕ ತಪಾಸಣೆಗೆ ಮುಂದು
  • ಬಿಪಿ,ಶುಗರ್, ಇಸಿಜಿ, ಮೆಮೋಗ್ರಫಿ, ಇಎನ್ ಟಿ ಸೇರಿದಂತೆ ನಿಗದಿ ಪಡಿಸಿದ ತಪಾಸಣೆಗೆ ಅಸ್ತು

ಯಾವ್ಯಾವ ತಪಾಸಣೆ ಮಾಡಿಸಿಕೊಳ್ಳಬಹುದು?

ವಾರ್ಷಿಕ ವೈದ್ಯಕೀಯ ತಪಾಸಣೆಗಾಗಿ ಸರ್ಕಾರವು ಪುರುಷ ನೌಕರರಿಗೆ ಗರಿಷ್ಠ 2,000 ರೂಪಾಯಿ ಹಾಗೂ ಮಹಿಳಾ ನೌಕರರಿಗೆ ಗರಿಷ್ಠ 2,200 ರೂಪಾಯಿಗಳ ಸಂಚಿತ ದರಗಳನ್ನು ನಿಗದಿಪಡಿಸಿದೆ. ಈ ಯೋಜನೆಯಡಿ ಸಾಮಾನ್ಯ ದೈಹಿಕ ತಪಾಸಣೆ, ರಕ್ತದೊತ್ತಡ, ಕಣ್ಣು ಮತ್ತು ಇಎನ್ಟಿ ತಪಾಸಣೆಗಳ ಜೊತೆಗೆ ರಕ್ತದ ಗ್ಲುಕೋಸ್, ಲಿಪಿಡ್ ಪ್ರೊಫೈಲ್, ಲಿವರ್ ಹಾಗೂ ಕಿಡ್ನಿ ಕಾರ್ಯನಿರ್ವಹಣಾ ಪರೀಕ್ಷೆಗಳು ಸೇರಿದಂತೆ ಹಲವು ಪ್ರಮುಖ ರೋಗನಿರ್ಣಯ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ. ಮಹಿಳಾ ನೌಕರರಿಗೆ ಹೆಚ್ಚುವರಿಯಾಗಿ ಸ್ತನ ಹಾಗೂ ಗರ್ಭಕಂಠದ ತಪಾಸಣೆಗಳಿಗೂ ಅವಕಾಶ ಕಲ್ಪಿಸಲಾಗಿದೆ. ನೌಕರರು ಒಂದೇ ಸಂಸ್ಥೆಯಲ್ಲಿ ತಪಾಸಣೆ ಪಡೆದು ಒಂದೇ ಕ್ಲೈಮ್ನಲ್ಲಿ ಇದನ್ನು ಇತ್ಯರ್ಥಪಡಿಸಿಕೊಳ್ಳಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಡಿಸಿಎಂ ಮಹತ್ವದ ಸಭೆ: ಕಂದಾಯ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ, ಬಡ್ತಿ ಪ್ರಕ್ರಿಯೆ ಚುರುಕು

ಯಾರ್ಯಾರಿಗೆ ಈ ಸೌಲಭ್ಯ ಅನ್ವಯ?

ಕೇಂದ್ರ ಸರ್ಕಾರದ ಮಾದರಿಯಲ್ಲೇ ಈ ಯೋಜನೆಯನ್ನು ರೂಪಿಸಲಾಗಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಇಂದು ಈ ಆದೇಶವನ್ನು ಹೊರಡಿಸಿದೆ. ಈ ಸೌಲಭ್ಯವು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಟ್ಟಿರುವ (Opt-in ಆಗಿರುವ) ಎಲ್ಲಾ ಸರ್ಕಾರಿ ನೌಕರರಿಗೆ ಪ್ರತಿ  ವರ್ಷದಲ್ಲಿ ಒಂದು ಬಾರಿ ನಗದು ರಹಿತವಾಗಿ ಲಭ್ಯವಿರಲಿದೆ. ಆದರೆ, ಸ್ವ-ಇಚ್ಛೆಯಿಂದ ಈ ಯೋಜನೆಯಿಂದ ಹೊರಗುಳಿದ (Opt-out ಆದ) ನೌಕರರಿಗೆ ಹಾಗೂ ನೌಕರರ ಕುಟುಂಬದ ಅವಲಂಬಿತ ಸದಸ್ಯರಿಗೆ ಈ ವಾರ್ಷಿಕ ತಪಾಸಣೆಯ ಸೌಲಭ್ಯ ಅನ್ವಯಿಸುವುದಿಲ್ಲ.

ಎಲ್ಲಿ ತಪಾಸಣೆ ಮಾಡಿಸಿಕೊಳ್ಳಬಹುದು?

ಇನ್ನು ಈ ಆರೋಗ್ಯ ತಪಾಸಣೆಯನ್ನು ನೌಕರರು ಸರ್ಕಾರಿ ಆಸ್ಪತ್ರೆಗಳು, ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳು ಅಥವಾ ಯೋಜನೆಯಡಿ ನೋಂದಾಯಿತವಾಗಿರುವ ಖಾಸಗಿ ಆಸ್ಪತ್ರೆಗಳಲ್ಲಿ ಮಾಡಿಸಿಕೊಳ್ಳಬಹುದಾಗಿದೆ.

ಇದರ  ಷರತ್ತುಗಳು

  • ಸ್ವ-ಇಚ್ಛೆಯಿಂದ ಯೋಜನೆಗೆ ಒಳಪಡದ (Opt-out ಆದ) ಸರ್ಕಾರಿ ನೌಕರರು ಈ ಸೌಲಭ್ಯಕ್ಕೆ ಅರ್ಹರಾಗುವುದಿಲ್ಲ.
  • ವಾರ್ಷಿಕ ಆರೋಗ್ಯ ತಪಾಸಣೆ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯವಾಗುತ್ತದೆ. ಸರ್ಕಾರಿ ನೌಕರರ ಕುಟುಂಬದ ಅವಲಂಬಿತ ಸದಸ್ಯರು ಈ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ.
  • ಈ ತಪಾಸಣೆಗಳನ್ನು ಸರ್ಕಾರಿ ಆಸ್ಪತ್ರೆ (ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳನ್ನು ಒಳಗೊಂಡಂತೆ) ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ (KASS) ನೋಂದಾಯಿಸಲ್ಪಟ್ಟಿರುವ ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ ಪಡೆಯತಕ್ಕದ್ದು.
  • ಈ ತಪಾಸಣೆಗಳನ್ನು ಒಂದೇ ಸಂಸ್ಥೆಯಲ್ಲಿ ಪಡೆದು ಒಂದೇ ಕ್ಷೇಮಿನಲ್ಲಿ ಅವುಗಳನ್ನು ಇತ್ಯರ್ಥಪಡಿಸತಕ್ಕದ್ದು.
  • ನಿಗದಿಪಡಿಸಿರುವ ವಾರ್ಷಿಕ ವೈದ್ಯಕೀಯ ತಪಾಸಣೆಗಳಿಗೆ ರೂ. 2000/- (ಪುರುಷ ನೌಕರರಿಗೆ) ರೂ. 2,200- (ಮಹಿಳಾ ನೌಕರರಿಗೆ) ಸಂಚಿತ ದರಗಳನ್ನು (Consolidated Rates) ನಿಗದಿಪಡಿಸಲಾಗಿದೆ. ವಿವಿಧ ತಪಾಸಣೆಗಳಿಗೆ ಸರ್ಕಾರ ನಿಗದಿಪಡಿಸಿದ ಗರಿಷ್ಠ ಮೊತ್ತದ ಮಿತಿಗೊಳಪಟ್ಟು ಮಂಜೂರಾತಿ ನೀಡತಕ್ಕದ್ದು.
  •  ವಾರ್ಷಿಕ ವೈದ್ಯಕೀಯ ತಪಾಸಣೆಗಳನ್ನು KASS ಯೋಜನೆಯಡಿ ಅಳವಡಿಸಿಕೊಳ್ಳಲು ಹಾಗೂ ಈ ಸಂಬಂಧ ನೋಂದಾಯಿತ ಖಾಸಗಿ ಆಸ್ಪತ್ರೆಗಳೊಂದಿಗೆ ಸೂಕ್ತ ಒಡಂಬಡಿಕೆಯನ್ನು ಮಾಡಿಕೊಳ್ಳಲು ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರು ಸೂಕ್ತ ಕ್ರಮ ಕೈಗೊಳ್ಳತಕ್ಕದ್ದು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:25 pm, Mon, 22 June 26

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!