AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಸರ್ಕಾರಿ ನೌಕರರಿಗೆ ಲಾಂಗ್ ಹಾಲಿಡೇ

ಅಕ್ಟೋಬರ್ 2026ರಲ್ಲಿ ದಸರಾ, ಛತ್ ಪೂಜೆ ಮತ್ತು ದುರ್ಗಾ ಪೂಜೆಯಂತಹ ಪ್ರಮುಖ ಹಬ್ಬಗಳು ಬರುತ್ತವೆ. ಹೀಗಾಗಿ ಸಾಲು ಸಾಲು ಸರ್ಕಾರಿ ರಜೆ ಗಳು ಬಂದಿವೆ. ಇದರ ಮಧ್ಯೆ ಇದೀಗ ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಹೀಗಾಗಿ ಸರ್ಕಾರಿ ನೌಕರರಿಗೆ ಲಾಂಗ್ ಹಾಲಿಡೇ ಸಿಕ್ಕಂತಾಗಿದೆ.

ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಸರ್ಕಾರಿ ನೌಕರರಿಗೆ ಲಾಂಗ್ ಹಾಲಿಡೇ
Valmiki Jayanti
ರಮೇಶ್ ಬಿ. ಜವಳಗೇರಾ
|

Updated on: Oct 05, 2026 | 7:47 PM

Share

ಬೆಂಗಳೂರು, (ಅಕ್ಟೋಬರ್ 05): ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ ನಿಗದಿಪಡಿಸಲಾಗಿದ್ದ ದಿನಾಂಕದ ಬದಲಾಗಿ, ಅಕ್ಟೋಬರ್ 26ರ ಸೋಮವಾರದಂದು ವಾಲ್ಮೀಕಿ ಜಯಂತಿ ಆಚರಿಸಲು ಹಾಗೂ ಅಂದು ಸಾರ್ವತ್ರಿಕ ರಜೆ ನೀಡಿ ಸರ್ಕಾರ ಆದೇಶಿಸಿದೆ. ಶೀಗಿ ಹುಣ್ಣಿಮೆಯಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆಗೆ ಸರ್ಕಾರ ಆದೇಶಿಸಿದೆ. ಹೀಗಾಗಿ ಸಾರ್ವತ್ರಿಕ ರಜೆಯನ್ನು 2026ರ ಅಕ್ಟೋಬರ್ 25ರ ಭಾನುವಾರದ ಬದಲು ಅಕ್ಟೋಬರ್ 26ರ ಸೋಮವಾರಕ್ಕೆ ಬದಲಾಯಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ರವಿಕುಮಾರ್ ಎಸ್ ಆದೇಶ ಹೊರಡಿಸಿದ್ದಾರೆ.

ನೌಕರರಿಗೆ ಸತತ 3 ದಿನಗಳ ಸರಣಿ ರಜೆ

ಸರ್ಕಾರದ ಹಿಂದಿನ ಅಧಿಸೂಚನೆಯನ್ವಯ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು 2026ರ ಅಕ್ಟೋಬರ್ 25ರ ಭಾನುವಾರದಂದು ಘೋಷಿಸಲಾಗಿತ್ತು. ಆದರೆ, ವಾಲ್ಮೀಕಿ ಜಯಂತಿಯನ್ನು ‘ಶೀಗಿ ಹುಣ್ಣಿಮೆ’ ದಿನದಂದೇ ಆಚರಿಸುವ ಸಂಪ್ರದಾಯವಿರುವುದರಿಂದ, ಅಕ್ಟೋಬರ್ 26ರ ಸೋಮವಾರದಂದು ಶೀಗಿ ಹುಣ್ಣಿಮೆ ಬಂದ ಹಿನ್ನೆಲೆಯಲ್ಲಿ ಅಂದೇ ಜಯಂತಿಯನ್ನು ಆಚರಿಸಲು ಮತ್ತು ಸಾರ್ವತ್ರಿಕ ರಜೆ ನೀಡಲು ಆದೇಶಿಸಲಾಗಿದೆ. ಈ ರಜೆ ಬ್ಯಾಂಕ್‌ಗಳಿಗೂ ಅನ್ವಯಿಸಲಿದೆ. ಪರಿಣಾಮವಾಗಿ ಅಕ್ಟೋಬರ್ 24ರ ನಾಲ್ಕನೇ ಶನಿವಾರ, ಭಾನುವಾರ ಮತ್ತು ಸೋಮವಾರ ಸೇರಿ ಸಾರ್ವಜನಿಕರು ಹಾಗೂ ಸರ್ಕಾರಿ ನೌಕರರಿಗೆ ಸತತ 3 ದಿನಗಳ ಸರಣಿ ರಜೆ (ಲಾಂಗ್ ವೀಕೆಂಡ್) ದೊರೆಯಲಿದೆ.

ಸರ್ಕಾರದ ಆದೇಶ ಪತ್ರದಲ್ಲೇನಿದೆ?

ಸಿಆಸುಇ 16 ಹೆಚ್​​ಹೆಚ್​​ಎಲ್225, ದಿನಾಂಕ 7,11,2025ರನ್ವಯ ಪ್ರಕಟಿಸಿರುವ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ ಅಧಿಸೂಚನೆ 1 ಮತ್ತು 11ರಲ್ಲಿ 2026ನೇ ಸಾಲಿಗೆ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ದಿನಾಂಕ 25-10-2026ರ ಭಾನುವಾರದಂದು ಘೋಷಿಸಲಾಗಿರುವ ಬದಲಾಗಿ ದಿನಾಂಕ 26-10-2026ರ ಸೋಮವಾರ ಶೀಗಿ ಹುಣ್ಣಿಮೆ ದಿನದಂದು ಆಚರಿಸಲು ಮತ್ತು ಸದರಿ ದಿನದಂದು ಸಾರ್ವತ್ರಿಕ ರಜೆಯನ್ನಾಗಿ ಘೋಷಿಸಿ ಆದೇಶಿಸಿದೆ.

ಸದರಿ ರಜೆಯನ್ನು ನೆಗೋಷಿಯಬಲ್ ಇನ್ಸ್ಟ್ರುಮೆಂಟ್ ಆಕ್ಟ್ 1881 (1881ರ ಅಧಿನಿಯಮ ಸಂಖ್ಯೆ 26) 25ನೇ ಸೆಕ್ಷನ್​​​​​ನಲ್ಲಿರುವ ವಿವರಣೆಯನ್ವಯ ಸಹ ಸಾರ್ವತ್ರಿಕ ರಜೆಯನ್ನಾಗಿ ಘೋಷಿಸಿ ಆದೇಶಿಸಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ರವಿಕುಮಾರ್ ಎಸ್​​​ ಅವರು ಹೊರಡಿಸಿದ ಆದೇಶ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಸಮಾನ್ಯವಾಗಿ ಕೇಳಲ್ಡಡುವ ಪ್ರಶ್ನೆಗಳು

ಪ್ರಶ್ನೆ: 2026ರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಯಾವಾಗ ಆಚರಿಸಲು ಸರ್ಕಾರ ಆದೇಶಿಸಿದೆ?

ಉತ್ತರ: ಈ ಬಾರಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.26ರ ಬದಲಿಗೆ ಅ.26ರಂದು ಆಚರಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಪ್ರಶ್ನೆ: 2025ರ ರಜಾ ಪಟ್ಟಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ರಜಾ ದಿನವನ್ನು ಯಾವಾಗ ನೀಡಲಾಗಿತ್ತು?

ಉತ್ತರ: ಹಿಂದಿನ ಅಧಿಸೂಚನೆಯನ್ವಯ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 25ರ ಭಾನುವಾರದಂದು ಘೋಷಿಸಲಾಗಿತ್ತು.

ಪ್ರಶ್ನೆ:ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ ಆದೇಶದಲ್ಲೇನಿದೆ?

ಉತ್ತರ: ದಿನಾಂಕ 26-10-2026ರ ಸೋಮವಾರ ಶೀಗಿ ಹುಣ್ಣಿಮೆ ದಿನದಂದು ಆಚರಿಸಲು ಮತ್ತು ಸದರಿ ದಿನದಂದು ಸಾರ್ವತ್ರಿಕ ರಜೆಯನ್ನಾಗಿ ಘೋಷಿಸಿ ಆದೇಶಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?
ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ತುರ್ತು ಸುದ್ದಿಗೋಷ್ಠಿ ಲೈವ್
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ತುರ್ತು ಸುದ್ದಿಗೋಷ್ಠಿ ಲೈವ್
ಬಿಗ್ ಬಾಸ್ ಗೆಲ್ಲೋದು ಇವರೇ; ಭವಿಷ್ಯ ನುಡಿದ ಲಿಖಿತ್
ಬಿಗ್ ಬಾಸ್ ಗೆಲ್ಲೋದು ಇವರೇ; ಭವಿಷ್ಯ ನುಡಿದ ಲಿಖಿತ್
ಹುಬ್ಬಳ್ಳಿಯ ಜೈನ ಮಂದಿರದಲ್ಲಿ ದರೋಡೆ: ಮುಸುಕುಧಾರಿಗಳಿಂದ ಮೂರ್ತಿ ಧ್ವಂಸ!
ಹುಬ್ಬಳ್ಳಿಯ ಜೈನ ಮಂದಿರದಲ್ಲಿ ದರೋಡೆ: ಮುಸುಕುಧಾರಿಗಳಿಂದ ಮೂರ್ತಿ ಧ್ವಂಸ!
‘ನಾನು ತಪ್ಪು ಮಾಡಿದೆ, ಅರ್ಥವಾಗುವಾಗ ತಡವಾಗಿತ್ತು’; ಲಿಖಿತ್
‘ನಾನು ತಪ್ಪು ಮಾಡಿದೆ, ಅರ್ಥವಾಗುವಾಗ ತಡವಾಗಿತ್ತು’; ಲಿಖಿತ್
ಸಿಎಂ ನಿವಾಸದ ಬಳಿ ಪೊಲೀಸರ ಮೇಲೆಯೇ ಶಾಸಕ ಕೊತ್ತೂರು ಮಂಜುನಾಥ್ ಗರಂ
ಸಿಎಂ ನಿವಾಸದ ಬಳಿ ಪೊಲೀಸರ ಮೇಲೆಯೇ ಶಾಸಕ ಕೊತ್ತೂರು ಮಂಜುನಾಥ್ ಗರಂ
ಬೆಂಗಳೂರು- ಹೊಸೂರು ಹೆದ್ದಾರಿಯಲ್ಲಿ ಫುಲ್‌ ಟ್ರಾಫಿಕ್ ಜಾಮ್!
ಬೆಂಗಳೂರು- ಹೊಸೂರು ಹೆದ್ದಾರಿಯಲ್ಲಿ ಫುಲ್‌ ಟ್ರಾಫಿಕ್ ಜಾಮ್!
10 ಕೆಜಿ ತೂಕದ ಪೇಟ, ಮೋಸಂಬಿ ಹಾರ: ಅರಮನೆಗೆ ಅಭಿಮನ್ಯು ಗ್ರ್ಯಾಂಡ್​​ ಎಂಟ್ರಿ
10 ಕೆಜಿ ತೂಕದ ಪೇಟ, ಮೋಸಂಬಿ ಹಾರ: ಅರಮನೆಗೆ ಅಭಿಮನ್ಯು ಗ್ರ್ಯಾಂಡ್​​ ಎಂಟ್ರಿ
ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ರಿಟ್ ಅರ್ಜಿ, ಸುಪ್ರೀಂನಲ್ಲಿ ವಿಚಾರಣೆ
ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ರಿಟ್ ಅರ್ಜಿ, ಸುಪ್ರೀಂನಲ್ಲಿ ವಿಚಾರಣೆ
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್