AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳ, ಎಷ್ಟು ಗೊತ್ತಾ?

Karnataka Governmnet employees DA hiked: ರಾಜ್ಯ ಸರ್ಕಾರಿ ನೌಕರರು ಮತ್ತು ನಿವೃತ್ತ ವೇತನದಾರರಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ನೌಕರರ ತುಟ್ಟಿಭತ್ಯೆಯನ್ನು ಶೇ. 14.25 ರಿಂದ ಶೇ. 15.75 ಕ್ಕೆ ಏರಿಕೆ ಮಾಡಿ ಆರ್ಥಿಕ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಈ ಹೆಚ್ಚಳ ಅನ್ವಯವಾಗಲಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳ, ಎಷ್ಟು ಗೊತ್ತಾ?
Vidhana Soudha
Anil Kalkere
| Edited By: |

Updated on:May 11, 2026 | 2:41 PM

Share

ಬೆಂಗಳೂರು, (ಮೇ 11): ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರು (Karnataka Governmnet employee) ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು (Dearness Allowance) ಶೇ. 14.25 ರಿಂದ ಶೇ. 15.75 ಕ್ಕೆ ಏರಿಕೆ ಮಾಡಿದೆ. ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವು 2026ರ ಜನವರಿ 1 ರಿಂದ ಪೂರ್ವಾನ್ವಯ ಆಗಲಿದೆ. ಇದರಿಂದ ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ.

  • ತುಟ್ಟಿಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ
  • ತುಟ್ಟಿಭತ್ಯೆ ಶೇ.14.25 ರಿಂದ 15.75ಕ್ಕೆ ಹೆಚ್ಚಳ ಮಾಡಿ ಆದೇಶ
  • 2024ರ ಪರಿಷ್ಕೃತ ವೇತನ ಪಡೆಯುತ್ತಿರುವವರಿಗೆ ಅನ್ವಯ
  • 2026 ಜನವರಿ 1ರಿಂದ ಜಾರಿಗೆ ಬರುವಂತೆ ಅನ್ವಯ

ಪ್ರಸ್ತುತ ಮೂಲ ವೇತನದ ಶೇಕಡಾ 14.25 ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇಕಡಾ 15.75 ಕ್ಕೆ ಪರಿಷ್ಕರಿಸಲಾಗಿದೆ. ಅಂದರೆ ಒಟ್ಟು ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವಾದಂತಾಗಿದ್ದು,2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಇದು ಅನ್ವಯವಾಗಲಿದೆ.

ರಾಜ್ಯ ಸರ್ಕಾರವು ವೇತನದಾರರು,ಕುಟುಂಬ ನಿವೃತ್ತು ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾದದರಿಗೂ ಸಹ 2026ರ ಜನವರಿ 1ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ಕುಟುಂಬ ವೇತನದ ಪ್ರಸಕ್ತ ಶೇ.14ರಿಂದ ಶೇ. 15.75ಕ್ಕೆ ಹೆಚ್ಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:32 pm, Mon, 11 May 26

Follow Us