AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಉಚಿತ ವಿದ್ಯುತ್ ಯೋಜನೆ ಬಗ್ಗೆ ಮಹತ್ವದ ಅಪ್‌ಡೇಟ್

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಉಚಿತ ವಿದ್ಯುತ್ ಯೋಜನೆ ಬಗ್ಗೆ ಮಹತ್ವದ ಅಪ್‌ಡೇಟ್

ರಮೇಶ್ ಬಿ. ಜವಳಗೇರಾ
|

Updated on: Aug 31, 2026 | 6:23 PM

Share

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೊತಿ ಯೋಜನೆಗಳ ಪರಿಷ್ಕರಣೆ ನಡೆಯುತ್ತಿದೆ. ಅನರ್ಹ ಫಲಾನುಭವಿಗಳನ್ನು ಯೋಜನೆಯಿಂದ ದೂರವಿಡಲು ಸರ್ಕಾರ ಯೋಜನೆಯ ಪರಿಷ್ಕರಣೆ ಮಾಡಲಾಗುತ್ತಿದೆ. ಇದರ ನಡುವೆಯೇ ಗೃಹಜ್ಯೋತಿ ಪರಿಷ್ಕರಣೆಗೆ ಇನ್ನೂ ಒಂದು ತಿಂಗಳು ಗಡುವು ವಿಸ್ತರಣೆ ಮಾಡಿ ಇಂಧನ ಇಲಾಖೆ ಆದೇಶ ಹೊರಡಿಸಿದೆ. ಗೃಹಜ್ಯೋತಿ ಪರಿಷ್ಕರಣೆ ಫಲಾನುಭವಿಗಳಿಂದ ಸರಿಯಾದ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಗೃಹಜ್ಯೋತಿ ಪರಿಷ್ಕರಣೆಗೆ ಇನ್ನೂ ಒಂದು ತಿಂಗಳು ಗಡುವು ವಿಸ್ತರಣೆ ಮಾಡಲಾಗಿದೆ.

ಬೆಂಗಳೂರು, (ಆಗಸ್ಟ್ 31): ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೊತಿ ಯೋಜನೆಗಳ ಪರಿಷ್ಕರಣೆ (Gruha Jyothi Re-Verification) ನಡೆಯುತ್ತಿದೆ. ಅನರ್ಹ ಫಲಾನುಭವಿಗಳನ್ನು ಯೋಜನೆಯಿಂದ ದೂರವಿಡಲು ಸರ್ಕಾರ ಯೋಜನೆಯ ಪರಿಷ್ಕರಣೆ ಮಾಡಲಾಗುತ್ತಿದೆ. ಇದರ ನಡುವೆಯೇ ಗೃಹಜ್ಯೋತಿ ಪರಿಷ್ಕರಣೆಗೆ ಇನ್ನೂ ಒಂದು ತಿಂಗಳು ಗಡುವು ವಿಸ್ತರಣೆ ಮಾಡಿ ಇಂಧನ ಇಲಾಖೆ ಆದೇಶ ಹೊರಡಿಸಿದೆ. ಗೃಹಜ್ಯೋತಿ ಪರಿಷ್ಕರಣೆ ಫಲಾನುಭವಿಗಳಿಂದ ಸರಿಯಾದ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಗೃಹಜ್ಯೋತಿ ಪರಿಷ್ಕರಣೆಗೆ ಇನ್ನೂ ಒಂದು ತಿಂಗಳು ಗಡುವು ವಿಸ್ತರಣೆ ಮಾಡಲಾಗಿದೆ. ಜುಲೈ 1 ರಿಂದ ಗೃಹಜ್ಯೋತಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಆಗಸ್ಟ್ 31 ರವರೆಗೆ ಸರ್ವೆ ಕಾರ್ಯಕ್ಕೆ ಸರ್ಕಾರ ಅವಧಿ ನಿಗದಿ ಮಾಡಿತ್ತು. ಆದರೆ ಇದೀಗ ಸರ್ಕಾರ ಇನ್ನೂ ಒಂದು ತಿಂಗಳ ಅಂದರೆ ಸೆಪ್ಟೆಂಬರ್ 30ರ ವರೆಗೂ ಗಡುವು ವಿಸ್ತರಣೆ ಮಾಡಿದೆ.

ಬೆಸ್ಕಾಂ ಸೇರಿ ಎಲ್ಲಾ ಎಸ್ಕಾಂ ಗಳಲ್ಲೂ ಗೃಹಜ್ಯೋತಿ ಪರಿಷ್ಕರಣೆ ಮುಂದುವರಿದಿದ್ದು, ಪ್ರತಿದಿನ ಸಿಬ್ಬಂದಿಗಳು ದಿನ ಬೆಸ್ಕಾಂ ಎಸ್ಕಾಂ ವ್ಯಾಪ್ತಿಯಲ್ಲಿ ಮನೆ ಮನೆ ಸರ್ವೆ ನಡೆಸುತ್ತಿದ್ದಾರೆ. ಈಗಾಗಲೇ ಶೇಕಡಾ 70ರಷ್ಟು ಸರ್ವೆ ಮುಕ್ತವಾಗಿದೆ. ಆದರೆ ವಿದ್ಯುತ್ ಗ್ರಾಹಕರು ಸರಿಯಾಗಿ ಸ್ಪಂಧಿಸದ ಹಿನ್ನಲೆ ಇನ್ನೂ ಶೇಕಡಾ 30 ಸರ್ವೆ ಕಾರ್ಯ ಬಾಕಿ ಉಳಿದುಕೊಂಡಿದೆ. ಹೀಗಾಗಿ ಇನ್ನೊಂದು ತಿಂಗಳು ಗಡುವು ವಿಸ್ತರಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us