AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡ್ ನ್ಯೂಸ್: ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ ಪರಿಷ್ಕರಣೆ

ಕರ್ನಾಟಕದಲ್ಲಿ ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮಿ ಪರಿಷ್ಕರಣೆ ಟೆನ್ಷನ್​ ಬಳಿಕ ಇದೀಗ ಪಡಿತರ ಚೀಟಿಯ ಇ-ಕೆವೈಸಿ ಟೆನ್ಷನ್​ ಹೆಚ್ಚಿದ್ದು, ಬಿಪಿಎಲ್​-ಎಪಿಎಲ್​ ಕಾರ್ಡ್​​ದಾರರು ಇ-ಕೆವೈಸಿ ಮಾಡಿಸಲು ಬೆಳಗ್ಗೆಯಿಂದ ಸಂಜೆವೆರಗೂ ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂ ನಿಂತರೂ ಕೆಲಸ ಆಗ್ತಿಲ್ಲ. ರೇಷನ್​ ಕಾರ್ಡ್ ಕಳೆದುಕೊಳ್ಳುವ ಭಯದಲ್ಲಿದ್ದ ಜನರಿಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಗುಡ್ ನ್ಯೂಸ್ ನೀಡಿದೆ.

ಗುಡ್ ನ್ಯೂಸ್: ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ ಪರಿಷ್ಕರಣೆ
Ration Card E Kyc
ಹರೀಶ್ ಜಿ.ಆರ್​.
| Edited By: |

Updated on: Sep 17, 2026 | 2:46 PM

Share

ಬೆಂಗಳೂರು, (ಸೆಪ್ಟೆಂಬರ್ 17): ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್​ ನೀಡಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಎದುರಾಗುತ್ತಿರುವ ತೀವ್ರ ಸರ್ವರ್ ಸಮಸ್ಯೆಯಿಂದಾಗಿ ಇ-ಕೆವೈಸಿಗೆ ಅಡಚಣೆ ಉಂಟಾದ ಹಿನ್ನೆಲೆ ಪಡಿತರ ಇ-ಕೆವೈಸಿ ಅವಧಿ ವಿಸ್ತರಣೆ ಮಾಡಿ ಸರ್ಕಾರ ಅದೇಶ ಹೊರಡಿಸಿದೆ. ಸೆಪ್ಟೆಂಬರ್ 30ರವರೆಗೆ ಇದ್ದ ಕೊನೆ ದಿನಾಂಕವನ್ನು ಇದೀಗ ಅಕ್ಟೋಬರ್ 20ರವರೆಗೆ ಅವಧಿ ವಿಸ್ತರಿಸಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಆದೇಶ ಹೊರಡಿಸಿದೆ. ಅಲ್ಲದೇ ಇದರ ಜೊತೆಗೆ ನ್ಯಾಯಬೆಲೆ ಅಂಗಡಿಗಳ ಸಮಯದಲ್ಲೂ ಬದಲಾವಣೆ ಮಾಡಿದೆ.

ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ

ಸೆಪ್ಟೆಂಬರ್ 30ರೊಳಗೆ ಪಡಿತರ ಚೀಟಿ ಇ-ಕೆವೈಸಿ ಪೂರ್ಣಗೊಳಿಸಲು ಗಡುವು ನೀಡಲಾಗಿತ್ತು. ಆದ್ರೆ, ಸರ್ವರ್ ಸಮಸ್ಯೆಯಿಂದಾಗಿ ಜನರು ಆತಂಕಗೊಂಡಿದ್ದು, ದಿನವಿಡೀ ನ್ಯಾಯಬೆಲೆ ಅಂಗಡಿ ಮುಂದೆಯೇ ಕ್ಯೂ ನಿಂತುಕೊಳ್ಳುತ್ತಿದ್ದರು. ಈ ಸಂಬಂಧ ನ್ಯಾಯಬೆಲೆ ಅಂಗಡಿಯವರು ಈ ಸಮಸ್ಯೆಯನ್ನು ಸರ್ಕಾರಕ್ಕೆ ಗಮನ ತಂದಿದ್ದರು. ಈ ಹಿನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪೂರ್ಣಗೊಳಿಸಲು ಅಕ್ಟೋಬರ್ 20ರವರೆಗೆ ಕಾಲಾವಕಾಶ ನೀಡಿ ಡೆಡ್​​ಲೈನ್​ ವಿಸ್ತರಣೆ ಮಾಡಿದೆ.

ಇದನ್ನೂ ಓದಿ: ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್: ಝೀರೋ ಬಿಲ್ ಬರುತ್ತಿದ್ದ ಮನೆಗಳಿಗೆ ಸಾವಿರಾರು ರೂ. ಬಿಲ್

ಇ-ಕೆವೈಸಿ ಪೂರ್ಣಗೊಳಿಸಿ ಸೌಲಭ್ಯ ಪಡೆಯಿರಿ ಎಂದ ಸಚಿವ

ಈ ಸಂಬಂಧ ಸಚಿವ ರಿಜ್ವಾನ್ ಅರ್ಷದ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನ್ಯಾಯಬೆಲೆ ಅಂಗಡಿಗಳಲ್ಲಿ ಉಂಟಾಗಿರೋ ಸರ್ವರ್ ಸಮಸ್ಯೆಗೆ ಜನಸಾಮಾನ್ಯರು ಕಂಗಾಲಾಗಬೇಕಿಲ್ಲ, ಇ-ಕೆವೈಸಿ ಗಡುವನ್ನ ಅಕ್ಟೋಬರ್ 20 ರವರೆಗೆ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಸರ್ವರ್ ಸಮಸ್ಯೆಯಿಂದ ಜನಸಾಮಾನ್ಯರು ಕಂಗಾಲಾಗುವ ಅಗತ್ಯವಿಲ್ಲ. ಇ-ಕೆವೈಸಿ ಮಾಡಿಸಲು ಅಕ್ಟೋಬರ್ 20 ರವರೆಗೆ ಗಡುವು ವಿಸ್ತರಿಸಿದ್ದು, ಯಾರೊಬ್ಬರೂ ಆತಂಕಕ್ಕೆ ಒಳಗಾಗುವುದು ಬೇಡ, ಇ-ಕೆವೈಸಿ ಪೂರ್ಣಗೊಳಿಸಿ ಸೌಲಭ್ಯ ಪಡೆಯಿರಿ ಎಂದು ತಿಳಿಸಿದ್ದಾರೆ. ಇದರೊಂದಿಗೆ ಆತಂಕದಲ್ಲಿದ್ದ ಪಡಿತರ ಕಾರ್ಡುದಾರರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ.

ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ ಪರಿಷ್ಕರಣೆ

ಇನ್ನು ಬಡವರು, ದಿನಗೂಲಿ ಕಾರ್ಮಿಕರ ಹಿತದೃಷ್ಟಿಯಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎರಡು ಮಹತ್ವದ ನಿರ್ಧಾರ ಕೈಗೊಂಡಿದೆ. ಅಕ್ಟೋಬರ್ 1ರಿಂದ ಜಾರಿಯಾಗುವಂತೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಬೆಳಿಗ್ಗೆ 07:00 ರಿಂದ ಮಧ್ಯಾಹ್ನ 12:00 ರವರೆಗೆ ಹಾಗೂ ಸಂಜೆ 04:00 ರಿಂದ ರಾತ್ರಿ 08:00 ರವರೆಗೆ ನ್ಯಾಯಬೆಲೆ ಅಂಗಡಿಗಳು ಓಪನ್ ಇರಬೇಕೆಂದು ಆದೇಶದಲ್ಲಿ ತಿಳಿಸಿದೆ. ದಿನಗೂಲಿ ಕಾರ್ಮಿಕರ ಆದಾಯಕ್ಕೆ ಧಕ್ಕೆಯಾಗದಂತೆ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’