ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಎಸ್​​ಐಟಿಗೆ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯ ಕುರುಬರಕೇರನಹಳ್ಳಿ ಫಾರ್ಮ್‌ಹೌಸ್‌ ಮೇಲೆ ದಾಳಿ ನಡೆಸಿದ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಔಷಧ ಜಾರಿ ವಿಭಾಗದ ಅಧಿಕಾರಿಗಳು, ಕಾನೂನುಬಾಹಿರವಾಗಿ ನಡೆಯುತ್ತಿದ್ದ ಬೃಹತ್ ನಕಲಿ ಔಷಧ ಮರು ಪ್ಯಾಕಿಂಗ್ ಹಾಗೂ ಲೇಬಲಿಂಗ್ ಜಾಲವನ್ನು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲವರನ್ನು ಬಂಧಿಸಲಾಗಿದ್ದು, ಇದೀಗ ಈ ಪ್ರಕರಣವನ್ನು ಮತ್ತಷ್ಟು ತನಿಖೆಗಾಗಿ ರಾಜ್ಯ ಸರ್ಕಾರ ಎಸ್​​​ಐಟಿಗೆ ನೀಡಿದೆ,

ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಎಸ್​​ಐಟಿಗೆ ನೀಡಿ ರಾಜ್ಯ ಸರ್ಕಾರ ಆದೇಶ
ವಿಧಾನಸೌಧ
Image Credit source: Getty Image

Updated on: Aug 20, 2026 | 7:04 PM

ಬೆಂಗಳೂರು, (ಆಗಸ್ಟ್ 20): ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ (Fake Drug Case) ಸಂಬಂಧ ಬಗೆದಷ್ಟೂ ಶಾಕಿಂಗ್​​ ವಿಚಾರಗಳು ಬಯಲಾಗ್ತಿವೆ. ಪ್ರತಿಷ್ಠಿತ MNC ಬ್ರ್ಯಾಂಡ್‌ಗಳ ಹೆಸರಿನಲ್ಲಿ ಜೀವಕ್ಕೇ ಕಂಟಕ ತರುವ ನಕಲಿ ಇಂಜೆಕ್ಷನ್‌ ಹಾಗೂ ಮಾತ್ರೆಗಳನ್ನು ಪೂರೈಸುತ್ತಿದ್ದ ಈ ಅಂತಾರಾಜ್ಯ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನ ಬಂಧಿಸಲಾಗಿದ್ದು, ಇದರ ಕಿಂಗ್​ ಪಿನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಪ್ರಕರಣವನ್ನು ಇದೀಗ ಎಸ್​​​ಐಟಿ ತನಿಖೆಗೆ ನೀಡಿ ಆದೇಶ ಹೊರಡಿಸಿದೆ. ಐಪಿಎಸ್ ಹಿರಿಯ ಅಧಿಕಾರಿ ಸಿ ವಂಶಿಕೃಷ್ಣ ನೇತೃತ್ವದಲ್ಲಿ ಎಸ್​ಐಟಿ ರಚಿಸಿ ಆದೇಶಿಸಲಾಗಿದೆ.

ವಂಶಿಕೃಷ್ಣ ನೇತೃತ್ವದ SITಯಲ್ಲಿ IPS​ ಅಧಿಕಾರಿಗಳಾದ ಶಿವಪ್ರಕಾಶ್, ಲೋಕೇಶ್, ಸಹಾಯಕ ಔಷಧ ನಿಯಂತ್ರಕರಾದ ಮಂಜುನಾಥ್ ರೆಡ್ಡಿ, ನಮ್ರತಾ ಹಲ್ಲೂರು, ಔಷಧ ನಿರೀಕ್ಷಕ ನೇಹಾ ಮುರ್ಗಿ ಅವರನ್ನೊಳಗೊಡಿರುವ ತಂಡವನ್ನು ರಚಿಸಲಾಗಿದೆ. ಪತ್ತೆಯಾದ  ದಿನವೇ ಆರೋಗ್ಯ ಸಚಿವ ಯುಟಿ ಖಾದರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಪ್ರಕರಣವನ್ನು ಎಸ್​​​ಐಟಿಗೆ ನೀಡುವ ಬಗ್ಗೆ ಸುಳಿವು ನೀಡಿದ್ದರು.

ಇದನ್ನೂ ಓದಿ: ಬೆಂಗಳೂರಿನಿಂದ ಮುಂಬೈ, ಹಿಮಾಚಲವರೆಗೂ ನಕಲಿ ಔಷಧ ಜಾಲ! ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ಔಷಧಗಳೇ ಟಾರ್ಗೆಟ್, ದೇಶಾದ್ಯಂತ ಹೈ ಅಲರ್ಟ್

ಕರ್ನಾಟಕದ ಡ್ರಗ್ ಎನ್‌ಫೋರ್ಸ್‌ಮೆಂಟ್ ವಿಂಗ್ ಆಗಸ್ಟ್ 18ರಂದು ಬಿದದಿ ಸಮೀಪದ ನಂ.34 ಕುರುಬರಹಳ್ಳಿ ಗ್ರಾಮದಲ್ಲಿ ಲೈಸೆನ್ಸ್ ಇಲ್ಲದ ಔಷಧ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ನಕಲಿ ಔಷಧಗಳು, ಬಲ್ಕ್ ಸ್ಟಾಕ್, ಪ್ಯಾಕೇಜಿಂಗ್ ಯಂತ್ರಗಳು, ಖಾಲಿ ವಯಲ್‌ಗಳು ಹಾಗೂ ನಕಲಿ ಲೇಬಲ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ವಸ್ತುಗಳ ಒಟ್ಟು ಅಂದಾಜು ಮೌಲ್ಯ 5,05,49,575 ರೂ. ಎಂದು ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us