AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಶ್ವತ ನಿವಾಸಿ ಪ್ರಮಾಣ ಪತ್ರ ಮಾರ್ಗಸೂಚಿ ಪ್ರಕಟ: ಅರ್ಜಿ ಎಲ್ಲಿ-ಹೇಗೆ ಸಲ್ಲಿಸಬೇಕು? ಇಲ್ಲಿದೆ ವಿವರ

ಶಾಶ್ವತ ನಿವಾಸ ಪ್ರಮಾಣ ಪತ್ರ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕದ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆಯಲ್ಲಿ ಪಾರದರ್ಶಕತೆ ಹಾಗೂ ಏಕರೂಪದ ಕಾನೂನುಬದ್ದ ವ್ಯವಸ್ಥೆಗಾಗಿ ಶಾಶ್ವತ ನಿವಾಸಿ ಪ್ರಮಾಣ ಪತ್ರಕ್ಕಾಗಿ ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹಾಗಾದ್ರೆ, ಶಾಶ್ವತ ನಿವಾಸಿ ಪ್ರಮಾಣ ಪತ್ರ ಪಡೆಯಲು ಏನೆಲ್ಲಾ ಅರ್ಹತೆ ಇರಬೇಕು? ಹೇಗೆ ಎಲ್ಲಿ ಅರ್ಜಿ ಸಲ್ಲಿಸಬೇಕು ಎನ್ನುವ ಡಿಟೇಲ್ಸ್ ಇಲ್ಲಿದೆ.

ಶಾಶ್ವತ ನಿವಾಸಿ ಪ್ರಮಾಣ ಪತ್ರ ಮಾರ್ಗಸೂಚಿ ಪ್ರಕಟ: ಅರ್ಜಿ ಎಲ್ಲಿ-ಹೇಗೆ ಸಲ್ಲಿಸಬೇಕು? ಇಲ್ಲಿದೆ ವಿವರ
permanent resident certificate
ರಮೇಶ್ ಬಿ. ಜವಳಗೇರಾ
|

Updated on:Jul 07, 2026 | 10:52 PM

Share

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಇನ್ಮುಂದೆ ಶಾಶ್ವತ ನಿವಾಸ ಪ್ರಮಾಣ ಪತ್ರ
  • ಕರ್ನಾಟ ಶಾಶ್ವತ ನಿವಾಸಿ ಪ್ರಮಾಣ ಪತ್ರ ಮಾರ್ಗಸೂಚಿ ಪ್ರಕಟ
  • ಸತತ ಕನಿಷ್ಠ 10 ವರ್ಷ ಕರ್ನಾಟಕದಲ್ಲಿ ವಾಸವಿದ್ದವರಿಗೆ ಶಾಶ್ವತ ನಿವಾಸ ಪ್ರಮಾಣ ಪತ್ರ

ಬೆಂಗಳೂರು, (ಜುಲೈ 07): ಕರ್ನಾಟಕದಲ್ಲಿ (Karnataka) ಇನ್ಮುಂದೆ ಶಾಶ್ವತ ನಿವಾಸ ಪ್ರಮಾಣ ಪತ್ರ (permanent resident certificate) ಸಿಗಲಿದೆ. ಹೌದು…ಶಾಶ್ವತ ನಿವಾಸ ಪ್ರಮಾಣ ಪತ್ರ ನೀಡಲು ರಾಜ್ಯ ಸರ್ಕಾರವೇ ಅಧಿಕೃತ ಆದೇಶಿಸಿದ್ದು, ಮಾರ್ಗಸೂಚಿಗಳನ್ನೂ ಸಹ ಬಿಡುಗಡೆ ಮಾಡಿದೆ. ಸತತ ಕನಿಷ್ಠ 10 ವರ್ಷ ಕರ್ನಾಟಕದಲ್ಲಿ ವಾಸವಿದ್ದವರಿಗೆ ಶಾಶ್ವತ ನಿವಾಸ ಪ್ರಮಾಣ ಪತ್ರ ನೀಡಲು ಮುಂದಾಗಿದೆ.  7 ದಿನಗಳೊಳಗೆ ಶಾಶ್ವತ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಆರಂಭಿಸಲು ಸರ್ಕಾರದ ಸೂಚಿಸಿದ್ದು, ಆಯಾ ಜಿಲ್ಲಾಧಿಕಾರಿಗಳಿಗೆ ಮೇಲ್ವಿಚಾರಣೆ ವಹಿಸಿದೆ. ಇನ್ನು, ಇದು ಕೇವಲ ಆಡಳಿತಾತ್ಮಕ ಉದ್ದೇಶದ ಪುರಾವೆಯಾಗಿದ್ದು, ಉದ್ಯೋಗ ಅಥವಾ ಭೂ ಮಂಜೂರಾತಿಯ ಮೀಸಲಾತಿಗೆ ಅನ್ವಯಿಸುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ.

ಜಿಲ್ಲಾಧಿಕಾರಿಗಳಿಗೆ ಮೇಲ್ವಿಚಾರಣೆ

ಎಲ್ಲಾ‌ ಜಿಲ್ಲಾಧಿಕಾರಿಗಳು ಅಧಿಕೃತಗೊಳಿಸಲಾದ ತಹಶೀಲ್ದಾರ್ ಅಥವಾ ಉಪ ತಹಸೀಲ್ದಾರ್ ಅಥವಾ ಇತರೆ ಯಾವುದೇ ಅಧಿಕಾರಿ ಪ್ರಮಾಣಪತ್ರ ನೀಡುವ ಪ್ರಾಧಿಕಾರವಾಗಿರುತ್ತಾರೆ. ಸಹಾಯಕ ಆಯುಕ್ತರು (ಎಸಿ)ಮೇಲ್ಮನವಿ ಪ್ರಾಧಿಕಾರವಾಗಿದ್ದರೆ, ಜಿಲ್ಲಾಧಿಕಾರಿಗಳು ಪುನರ್ ಪರಿಶೀಲನಾ ಪ್ರಾಧಿಕಾರವಾಗಿರುತ್ತಾರೆ. ಪ್ರಮಾಣ ಪತ್ರ ನೀಡುವ ಪ್ರಾಧಿಕಾರವು ಅಗತ್ಯ ವಿಚಾರಣೆ, ಪರಿಶೀಲನೆ ನಂತರ ಅರ್ಜಿದಾರರು ರಾಜ್ಯದ ನಿಜವಾದ ಮತ್ತು ಶಾಶ್ವತ ನಿವಾಸಿಯಾಗಿದಾರೆಂಬುದರ ಬಗ್ಗೆ ಖಚಿತಪಡಿಸಿಕೊಂಡು ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡಬಹುದು ಎಂದು ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಂದರ್‌ಕುಮಾರ್ ಕಟಾರಿಯಾ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಕಂದಾಯ ಇಲಾಖೆ ತೀರ್ಮಾನವೇ ಅಂತಿಮ

ಅರ್ಜಿದಾರರು ರಾಜ್ಯದಲ್ಲಿ ಜನಿಸಿರಬೇಕು ಅಥವಾ ಕನಿಷ್ಠ 10 ವರ್ಷ ವಾಸವಿರಬೇಕು ಹಾಗೂ ಇಲ್ಲಿಯೇ ಪಿಯುಸಿ ತನಕ ಓದಿರಬೇಕು ಸೇರಿದಂತೆ ವಿವಿಧ ಅಂಶಗಳನ್ನು ಪರಿಗಣಿಸಿ ಎಲ್ಲಾ‌ ಜಿಲ್ಲಾಧಿಕಾರಿಗಳು ಅಧಿಕೃತಗೊಳಿಸಲಾದ  ತಹಶೀಲ್ದಾರ್ ಅಥವಾ ಉಪ ತಹಶೀಲ್ದಾರ್ ಈ ಪ್ರಮಾಣಪತ್ರ ನೀಡಲಿದ್ದಾರೆ. ಕರ್ನಾಟಕವೇ ಅರ್ಜಿದಾರರ ಪ್ರಮುಖ ಹಾಗೂ ಶಾಶ್ವತ ವಾಸಸ್ಥಳವಾಗಿದೆ ಎಂಬುದನ್ನು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ದಾಖಲಾತಿ, ವಿದ್ಯುನ್ಮಾನ ಅಥವಾ ಮೌಖಿಕ ಸಾಕ್ಷ್ಯಗಳನ್ನು ಇತರೆ ಪುರಾವೆಗಳೆಂದು ಪರಿಗಣಿಸುವಂತೆ ಆದೇಶ ಮಾಡಲಾಗಿದೆ. ಕಂದಾಯ ಇಲಾಖೆ ತೀರ್ಮಾನವೇ ಅಂತಿಮ ಎಂಬುದನ್ನ ಸಹ ಸ್ಪಷ್ಟಪಡಿಸಿದೆ.

ಶಾಶ್ವತ ನಿವಾಸಿ ಪ್ರಮಾಣಪತ್ರದ ಮಾರ್ಗಸೂಚಿಗಳು

ಪ್ರಮಾಣ ಪತ್ರ ನೀಡುವ ಪ್ರಾಧಿಕಾರವು ಅಗತ್ಯ ವಿಚಾರಣೆ ಹಾಗೂ ಪರಿಶೀಲನೆಯ ನಂತರ ಅರ್ಜಿದಾರರು ಕರ್ನಾಟಕ ರಾಜ್ಯದ ನಿಜವಾದ ಮತ್ತು ಶಾಶ್ವತ ನಿವಾಸಿಯಾಗಿದ್ದಾರೆ ಎಂಬ ಬಗ್ಗೆ ಖಚಿತಪಡಿಸಿಕೊಂಡು ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡಬಹುದು. ವಾಸಸ್ಥಳ ಅರ್ಜಿದಾರರು ಅಥವಾ ಅವರ ತಂದೆ,ತಾಯಿ ಅಥವಾ ಕಾನೂನುಬದ್ಧ ಪಾಲಕರು ಕರ್ನಾಟಕ ರಾಜ್ಯದಲ್ಲಿ ಸತತವಾಗಿ ಕನಿಷ್ಠ 10 ವರ್ಷಗಳ ಕಾಲ ಕರ್ನಾಟಕದಲ್ಲಿ ವಾಸವಿರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಪ್ರಮಾಣಪತ್ರ ಪಡೆಯಲು ಅರ್ಹತೆಗಳು

  • ಕರ್ನಾಟಕದಲ್ಲಿ ಜನನ-ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಜನಿಸಿರಬೇಕು.
  • ಅರ್ಜಿದಾರರು ಅಥವಾ ಅವರ ತಂದೆ, ತಾಯಿ ಅಥವಾ ಕಾನೂನು ಬದ್ಧ ಪಾಲಕರು ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸವಿರಬೇಕು.
  • ಅರ್ಜಿದಾರರು ಕರ್ನಾಟಕದಲ್ಲಿನ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿತೀಯ ಪಿಯುಸಿ/12ನೇ ತರಗತಿ ಅಥವಾ ತತ್ಸಮಾನ ಹಂತದವರಿಗೆ ಕನಿಷ್ಠ 10 ಶೈಕ್ಷಣಿಕ ವರ್ಷಗಳ ಕಾಲ ವ್ಯಾಸಂಗ ಮಾಡಿರಬೇಕು.
  • ಪೋಷಕರು ಅಥವಾ ಸಂಗಾತಿಯ ವಾಸಸ್ಥಳ, ಅರ್ಜಿದಾರರ ತಂದೆ, ತಾಯಿ, ಕಾನೂನುಬದ್ಧ ಪಾಲಕರು ಅಥವಾ ಪತಿ/ಪತ್ನಿಯು ಕರ್ನಾಟಕದಲ್ಲಿ ಸಾಮಾನ್ಯ ಹಾಗೂ ಶಾಶ್ವತ ನಿವಾಸಿಯಾಗಿರಬೇಕು.
  • ವಸತಿ ಆಸ್ತಿ-ಅರ್ಜಿದಾರರು ಅಥವಾ ಅವರ ಕುಟುಂಬವು ಕರ್ನಾಟಕದಲ್ಲಿ ವಸತಿ ಅಥವಾ ಇತರೆ ಸ್ಥಿರಾಸ್ತಿಯ ಮಾಲೀಕತ್ವ ಹೊಂದಿರಬೇಕು. ಕಾನೂನುಬದ್ಧವಾದ ವಾರಸುದಾರರಾಗಿರಬೇಕು ಅಥವಾ ಬಳಸುತ್ತಿರಬೇಕು.

ಯಾವ ದಾಖಲೆಗಳು ಬೇಕು?

ಇನ್ನು ಶಾಸ್ವತ ನಿವಾಸಿ ಪ್ರಮಾಣಪತ್ರ ಪಡೆಯಲು ಯಾವೆಲ್ಲಾ ದಾಖಲೆಗಳು ಬೇಕು ಎನ್ನುವುದನ್ನು ನೋಡಿದರೆ, ಮತದಾರರ ಪಟ್ಟಿ, ಆಧಾರ್‌, ಪಡಿತರ ಚೀಟಿ, ಕಂದಾಯ ದಾಖಲೆಗಳು ಅಥವಾ ಇತರೆ ಸರ್ಕಾರಿ ದಾಖಲೆಗಳಲ್ಲಿ ಅರ್ಜಿದಾರರು ಅಥವಾ ಅವರ ಪೋಷಕರ ಹೆಸರು ಸಾಮಾನ್ಯ ನಿವಾಸಿಯಾಗಿ ದಾಖಲಾಗಿರಬೇಕು. ಅರ್ಜಿದಾರರು ಕರ್ನಾಟಕದಲ್ಲಿ ವಾಸಿಸುವ ವ್ಯಕ್ತಿಯನ್ನು ವಿವಾಹವಾಗಿದ್ದು, ರಾಜ್ಯದಲ್ಲಿ ವಾಸವಿದ್ದರೆ ಸಂಬಂಧಪಟ್ಟ ದಾಖಲೆ ನೀಡಬೇಕು.

ಪ್ರಮಾಣ ಪತ್ರದ ಉಪಯೋಗ

ಇನ್ನು, ಇದು ಕೇವಲ ಆಡಳಿತಾತ್ಮಕ ಉದ್ದೇಶದ ಪುರಾವೆಯಾಗಿದ್ದು, ಉದ್ಯೋಗ ಅಥವಾ ಭೂ ಮಂಜೂರಾತಿಯ ಮೀಸಲಾತಿಗೆ ಅನ್ವಯಿಸುವುದಿಲ್ಲ ಎಂಬುದನ್ನು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಸಹಾಯ, ಸೌಲಭ್ಯ ಕೌಂಟರ್‌ ಸ್ಥಾಪನೆ

ಪ್ರತಿ ಗ್ರಾಪಂ ಹಾಗೂ ಪ್ರತಿಯೊಂದು ನಗರ ಸ್ಥಳೀಯ ಸಂಸ್ಥೆಯ ವಾರ್ಡ್‌ ಕಚೇರಿಯಲ್ಲಿ ಸಹಾಯ ಮತ್ತು ಸೌಲಭ್ಯ ಕೌಂಟರ್‌ ಸ್ಥಾಪಿಸಬೇಕು. ಅಟಲ್‌ ಜನಸ್ನೇಹಿ ಕೇಂದ್ರ, ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌, ಸಿಎಸ್‌ಸಿಗಳು ಮತ್ತು ಇತರೆ ಅಧಿಕೃತ ಕೇಂದ್ರಗಳು ಅರ್ಜಿಗಳ ಪ್ರಕ್ರಿಯೆ ನಡೆಸಬೇಕು. ಆದೇಶ ಆದ ಒಂದು ವಾರದಲ್ಲಿ ಎಲ್ಲಾ ಕೌಂಟರ್‌ಗಳ ವ್ಯವಸ್ಥೆ ಆಗಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಆನ್‌ಲೈನ್‌ ಅರ್ಜಿಗೆ ಅವಕಾಶ

ಅರ್ಹ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌, ಅಟಲ್‌ ಜನಸ್ನೇಹಿ ಕೆಂದ್ರ (ಎಜೆಎಸ್‌ಕೆ) ಪೋರ್ಟಲ್‌ ಅಥವಾ ಸರ್ಕಾರ ಕಾಲಕಾಲಕ್ಕೆ ಅಧಿಸೂಚಿಸುವ ಇತರೆ ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:45 pm, Tue, 7 July 26

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ