ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್: ಕಾಂಗ್ರೆಸ್ ನಾಯಕರ ಬಳಿ ರಾಜ್ಯಪಾಲರಿಂದ ಅಚ್ಚರಿಯ ಹೇಳಿಕೆ

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರತಿಭಟಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರ ಬಳಿ ಥಾವರ್ ಚಂದ್ ಗೆಹ್ಲೋಟ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪ್ರಾಸಿಕ್ಯೂಷನ್​ಗೆ ನೇರ ಅನುಮತಿ ನೀಡಿಲ್ಲ ಎಂದಿದ್ದಾರೆ. ಹಾಗಾದರೆ ಅವರು ಹೇಳಿದ್ದೇನು? ಇಲ್ಲಿದೆ ಓದಿ.

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್: ಕಾಂಗ್ರೆಸ್ ನಾಯಕರ ಬಳಿ ರಾಜ್ಯಪಾಲರಿಂದ ಅಚ್ಚರಿಯ ಹೇಳಿಕೆ
ಥಾವರ್ ಚಂದ್ ಗೆಹ್ಲೋಟ್
Edited By:

Updated on: Aug 31, 2024 | 1:12 PM

ಬೆಂಗಳೂರು, ಆಗಸ್ಟ್​ 31: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರತಿಭಟಿಸಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ‘ರಾಜಭವನ ಚಲೋ’ ಹಮ್ಮಿಕೊಂಡಿದ್ದು, ಹಿಂದಿನ ಪ್ರಕರಣಗಳ ವಿರುದ್ಧವೂ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಆಗ್ರಹಿಸಿದ್ದಾರೆ. ಜತೆಗೆ, ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ, ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಮನವಿ ಸಲ್ಲಿಕೆ ಮಾಡಿದ್ದಾರೆ. ಆದರೆ, ಈ ವೇಳೆ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಸಂಬಂಧ ರಾಜ್ಯಪಾಲರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿಯೇ ಇಲ್ಲವೆಂದ ರಾಜ್ಯಪಾಲ!

ಕಾಂಗ್ರೆಸ್ ನಾಯಕರ ಬಳಿ ಸಮಜಾಯಿಷಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ‘ನಾನು ನೇರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿಯೇ ಇಲ್ಲ’ ಎಂದರು. ಕಾಂಗ್ರೆಸ್ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿಲ್ಲ. ಕೇವಲ ತನಿಖೆಗೆ ಸೂಚಿಸಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯಪಾಲರಿಗೆ ದೂರು ನೀಡಿದ್ದೇವೆ: ಡಿಕೆ ಶಿವಕುಮಾರ್

ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ನಿರಾಣಿ, ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಮನವಿ ಸಲ್ಲಿಕೆ ಮಾಡಿದ್ದೇವೆ. ರಾಜ್ಯಪಾಲರು ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದ್ದಾರೆ. ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು. ಇಲ್ಲಿ ಯಾರೂ ಕೂಡ ಶಾಶ್ವತ ಅಲ್ಲ ಎಂದರು.

ಇದನ್ನೂ ಓದಿ: ಮುಡಾ ಹಗರಣ: ಪರ ಅಥವಾ ವಿರೋಧ ಆದೇಶ ಬಂದರೆ ಸಿದ್ದರಾಮಯ್ಯ ಮುಂದಿನ ಆಯ್ಕೆಗಳೇನು?

ರಾಜ್ಯಪಾಲರ ಪೀಠ ಪವಿತ್ರವಾದದ್ದು. ಅದು ಸಂವಿಧಾನ ರಕ್ಷಿಸುವ ಪೀಠ. ರಾಜ್ಯಪಾಲರ ಕಚೇರಿ ಸರ್ಕಾರವನ್ನು ರಕ್ಷಿಸುವ ಪೀಠವಾಗಿದೆ. ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದೆ. ಈ ಕಚೇರಿಯಿಂದ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಆಗಬಾರದು. ಹೀಗಾಗಿ ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದೇವೆ. ನಮ್ಮ ಸಚಿವ ಸಂಪುಟದ ವಿಚಾರದ ಬಗ್ಗೆಯೂ ಮನವರಿಕೆ ಮಾಡಿದ್ದೇವೆ. ಎಲ್ಲಾ ವಿಚಾರಗಳಲ್ಲೂ ಪಕ್ಷಾತೀತವಾಗಿ ನಡೆದುಕೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us