ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲ ಗೆಹ್ಲೋಟ್‌ರಿಂದ ಅಂತಿಮ ಮುದ್ರೆ
ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಸುಗ್ರೀವಾಜ್ಞೆಗೆ ರಾಜ್ಯಪಾಲ ಗೆಹ್ಲೋಟ್‌ರಿಂದ ಅಂತಿಮಮುದ್ರೆ ಬಿದ್ದಿದೆ.
ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ(Anti-Conversion Bill) ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಸುಗ್ರೀವಾಜ್ಞೆಗೆ ರಾಜ್ಯಪಾಲ ಗೆಹ್ಲೋಟ್‌ರಿಂದ(Thawar Chand Gehlot) ಅಂತಿಮಮುದ್ರೆ ಬಿದ್ದಿದೆ. ಮತಾಂತರ ನಿಷೇಧ ಕಾಯ್ದೆಯನ್ನು ವಿಧಾನಸಭೆ ಅಂಗೀಕರಿಸಿತ್ತು. ವಿಧಾನಪರಿಷತ್‌ನಲ್ಲಿ ಅಂಗೀಕಾರ ಸಿಗದಿದ್ದಕ್ಕೆ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಿತ್ತು. ಸದ್ಯ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತಾಂತರ ವಿರೋಧಿ ಸುಗ್ರೀವಾಜ್ಞೆಗೆ ಮಂಗಳವಾರ ಒಪ್ಪಿಗೆ ನೀಡಿದ್ದಾರೆ. ಸುಗ್ರೀವಾಜ್ಞೆಯನ್ನು ಪ್ರಕಟಿಸುವ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅಂದರೆ ರಾಜ್ಯದಲ್ಲಿ ಈಗ ಕಾನೂನು ಜಾರಿಯಲ್ಲಿರುತ್ತದೆ. ಈ ಮೂಲಕ ಮತಾಂತರ ತಡೆ ಕಾನೂನನ್ನು ಜಾರಿಗೊಳಿಸಿದ 9ನೇ ರಾಜ್ಯ ಕರ್ನಾಟಕವಾಗಿದೆ. ಈ ಕಾನೂನು ವಂಚನೆ, ಅನಗತ್ಯ ಪ್ರಭಾವ, ಬಲಾತ್ಕಾರ, ಆಮಿಷ ಅಥವಾ ಮದುವೆಯ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಗೊಳ್ಳುವುದನ್ನು ನಿಷೇಧಿಸುತ್ತದೆ. ಬಲವಂತದ ಮತಾಂತರಕ್ಕೆ 25,000 ರೂ ದಂಡದೊಂದಿಗೆ 3-5 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.ಇದನ್ನೂ ಓದಿ: ಕರ್ನಾಟಕದಲ್ಲಿ ಮತಾಂತರ ನಿಷೇಧ ಮಸೂದೆಗೆ ಸಂಪುಟ ಒಪ್ಪಿಗೆ; ಅಲ್ಲಿಯವರೆಗೆ ಸುಗ್ರೀವಾಜ್ಞೆ ಜಾರಿ ಎಂದ ಆರಗ ಜ್ಞಾನೇಂದ್ರ
ಅಪ್ರಾಪ್ತೆ ಅಥವಾ ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಮತಾಂತರಿಸಿದರೆ 50,000 ರೂಪಾಯಿ ದಂಡದೊಂದಿಗೆ 3-10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಸಾಮೂಹಿಕ ಪರಿವರ್ತನೆಗೆ 3-10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಮತಾಂತರಗೊಳ್ಳಲು ಬಯಸುವ ಜನರು ಕನಿಷ್ಠ 60 ದಿನಗಳ ಮುಂಚಿತವಾಗಿ ಜಿಲ್ಲಾಧಿಕಾರಿಗಳಿಗೆ ತಿಳಿಸಬೇಕು. ಇಲ್ಲವೆ ಮತಾಂತರವಾದ 30 ದಿನಗಳೊಳಗೆ ತಿಳಿಸಬೇಕು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ಈ ಮಸೂದೆ ಜಾರಿಗೆ ನಮ್ಮ ಸಂಪೂರ್ಣ ವಿರೋಧ ಇದೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು ನಾವು ಈಗಾಗಲೇ ಈ ಮಸೂದೆಯನ್ನ ವಿರೋಧಿಸಿದ್ದೇನೆ. ಈ ಮಸೂದೆ ಜಾರಿಗೆ ನಮ್ಮ ಸಂಪೂರ್ಣ ವಿರೋಧ ಇದೆ. ಇದರ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ ಎಂದರು.
Published On - 5:59 pm, Tue, 17 May 22