ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಕಣಕ್ಕೆ ರಾಷ್ಟ್ರಪತಿ ಎಂಟ್ರಿ!

ಮುಡಾ ಹಗರಣ ದಿನಬೆಳಗಾದರೆ ಒಂದಲ್ಲ ಒಂದು ರೀತಿಯಲ್ಲಿ ಚರ್ಚೆಗೀಡಾಗುತ್ತಲೇ ಇದೆ. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ವಿಚಾರದಲ್ಲಿ ರಾಷ್ಟ್ರಪತಿಗಳ ಎಂಟ್ರಿಯೂ ಆಗಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ರಾಷ್ಟ್ರಪತಿಗಳ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಆ ಪತ್ರದಲ್ಲೇನಿದೆ ಎಂಬ ವಿವರ ಇಲ್ಲಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಕಣಕ್ಕೆ ರಾಷ್ಟ್ರಪತಿ ಎಂಟ್ರಿ!
ರಾಷ್ಟ್ರಪತಿ ದ್ರೌಪದಿ ಮುರ್ಮು
Edited By:

Updated on: Aug 31, 2024 | 10:43 AM

ಬೆಂಗಳೂರು, ಆಗಸ್ಟ್ 31: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದರ ವಿರುದ್ಧ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್​​ ಬಾಬು ನೀಡಿರುವ ದೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಕ್ರಿಯಿಸಿದ್ದಾರೆ. ಇದರೊಂದಿಗೆ, ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ ಪ್ರಕರಣದಲ್ಲಿ ರಾಷ್ಟ್ರಪತಿ ಕೂಡ ಎಂಟ್ರಿಯಾದಂತಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯದರ್ಶಿ ರಾಜೇಶ್​ ವರ್ಮ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ಗೆ ಪತ್ರ ಬರೆದಿದ್ದು, ರಮೇಶ್ ಬಾಬು ನೀಡಿದ ದೂರಿನ ಬಗ್ಗೆ ಸೂಕ್ತ ಗಮನಹರಿಸುವಂತೆ ಸೂಚನೆ ನೀಡಿದ್ದಾರೆ. ಈ ವಿಚಾರದ ಬಗ್ಗೆ ದೂರುದಾರರಿಗೆ ನೇರವಾಗಿ ಮಾಹಿತಿ ನೀಡಲು ಸೂಚನೆ ನೀಡಿದ್ದಾರೆ. ಇದರೊಂದಿಗೆ ಪ್ರಾಸಿಕ್ಯೂಷನ್ ವಿಚಾರ ರಾಷ್ಟ್ರಪತಿ ಭವನದ ಅಂಗಳಕ್ಕೂ ತಲುಪಿದೆ.

ರಾಷ್ಟ್ರಪತಿಗಳ ಕಾರ್ಯದರ್ಶಿ ಪತ್ರದಲ್ಲೇನಿದೆ?

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಹಿಂತೆಗೆದುಕೊಳ್ಳುವಂತೆ ನಿರ್ದೇಶಿಸಲು ತಕ್ಷಣ ಮಧ್ಯಸ್ಥಿಕೆ ವಹಿಸಬೇಕು ಎಂದು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ರಮೇಶ್ ಬಾಬು ವಿನಂತಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಶಾಲಿನಿ ರಜನೀಶ್​​ಗೆ ಪತ್ರ ಬರೆದಿರುವ ರಾಷ್ಟ್ರಪತಿಗಳ ಕಾರ್ಯದರ್ಶಿ, ದಯವಿಟ್ಟು ಮೇಲೆ ತಿಳಿಸಿದ ವಿಷಯದ ಕುರಿತು ಭಾರತದ ರಾಷ್ಟ್ರಪತಿಗಳಿಗೆ ಸ್ವ-ವಿವರಣೆಯ ಮನವಿಯನ್ನು ಲಗತ್ತಿಸಿ. ಅರ್ಜಿಯ ಮೇಲೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ನೇರವಾಗಿ ಅರ್ಜಿದಾರರಿಗೆ ನೀಡಬೇಕು ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಮುಡಾ ಹಗರಣ: ಪರ ಅಥವಾ ವಿರೋಧ ಆದೇಶ ಬಂದರೆ ಸಿದ್ದರಾಮಯ್ಯ ಮುಂದಿನ ಆಯ್ಕೆಗಳೇನು?

ಅಲ್ಲದೆ, ಅರ್ಜಿದಾರರು ಈ ವಿಷಯದಲ್ಲಿ ಹೆಚ್ಚಿನ ಮಾಹಿತಿಗಾಗಿ ವಿಳಾಸದಾರರನ್ನು (ಯಾರಿಗೆ ಅರ್ಜಿಯನ್ನು ರವಾನಿಸಲಾಗಿದೆ) ನೇರವಾಗಿ ಸಂಪರ್ಕಿಸಲು ವಿನಂತಿಸಲಾಗಿದೆ ಎಂದೂ ಉಲ್ಲೇಖಿಸಲಾಗಿದೆ. ಅರ್ಜಿದಾರರು ತಮ್ಮ ಅರ್ಜಿ/ದೂರು ನೋಂದಾಯಿಸಲು https://helpline.rb.nic.in ಪೋರ್ಟಲ್ ಅನ್ನು ಬಳಸಬಹುದು ಎಂದೂ ಸಲಹೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us