AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ vs ರಾಜಭವನ: ವಿಧೇಯಕ ಅನುಮೋದಿಸದೆ ವಾಪಸ್ಸು​ ಕಳುಹಿಸಿದ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರು ನಾಲ್ಕು ಪ್ರಮುಖ ವಿಧೇಯಕಗಳಿಗೆ ಅನುಮೋದನೆ ನೀಡಲು ನಿರಾಕರಿಸಿದ್ದಾರೆ. ಇದರಿಂದ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ತೀವ್ರ ಘರ್ಷಣೆ ಉಂಟಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಮುಜರಾಯಿ ವಿಧೇಯಕವೂ ಇದರಲ್ಲಿದೆ. ಸರ್ಕಾರ ಕಾನೂನು ಹೋರಾಟಕ್ಕೆ ಸಿದ್ಧವಾಗಿದೆ. ಈ ಘಟನೆಯಿಂದ ರಾಜಕೀಯ ಅಸ್ಥಿರತೆ ಹೆಚ್ಚಾಗುವ ಸಾಧ್ಯತೆಯಿದೆ.

ಸರ್ಕಾರ vs ರಾಜಭವನ: ವಿಧೇಯಕ ಅನುಮೋದಿಸದೆ ವಾಪಸ್ಸು​ ಕಳುಹಿಸಿದ ರಾಜ್ಯಪಾಲರು
ಸಿದ್ದರಾಮಯ್ಯ, ರಾಜ್ಯಾಪಾಲ ಥಾವರ್​ ಚಂದ್​ ಗೆಹ್ಲೋಟ್​
ಪ್ರಸನ್ನ ಗಾಂವ್ಕರ್​
| Edited By: |

Updated on: Jan 24, 2025 | 12:31 PM

Share

ಬೆಂಗಳೂರು, ಜನವರಿ 24: ಕರ್ನಾಟಕ ಹಿಂದೂ ಧಾರ್ಮಿಕಸಂಸ್ಥೆಗಳು ಮತ್ತು ಮುಜರಾಯಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳಿಗೆ ಅನುಮೋದನೆ ನೀಡದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ (Karnataka Government) ಹಾಗೂ ರಾಜ್ಯಪಾಲರ (Governor) ನಡುವಿನ ಶೀತಲ ಸಮರ ಮುಂದುವರೆದಿದೆ.

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಿದ್ದ ಕರ್ನಾಟಕ ಮಿನರಲ್ಸ್ ಹಕ್ಕು ಮತ್ತು ಬೇರಿಂಗ್ ಲ್ಯಾಂಡ್ ಟ್ಯಾಕ್ಸ್ ಬಿಲ್ 2024, ಕರ್ನಾಟಕ ಹಿಂದೂ ಧಾರ್ಮಿಕಸಂಸ್ಥೆಗಳು ಮತ್ತು ಮುಜರಾಯಿ ವಿಧೇಯಕ 2024, ಕರ್ನಾಟಕ ಸಹಕಾರಿ ಸೊಸೈಟಿ ಗಳ ತಿದ್ದುಪಡಿ ವಿಧೇಯಕ 2024 ಮತ್ತು ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ವಿಧೇಯಕ 2024 ಅಂಗೀಕಾರವಾಗಿತ್ತು. ಅನುಮೋದನೆಗಾಗಿ ರಾಜ್ಯಪಾಲರ ಕಚೇರಿಗೆ ಕಳುಹಿಸಲಾಗಿತ್ತು. ಆದರೆ, ವಿಧೇಯಕದ ಬಗ್ಗೆ ಸ್ಪಷ್ಟನೆ ಕೋರಿ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವಾಪಸ್ಸು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾನೂನು ಹೋರಾಟಕ್ಕೆ ಮುಂದಾದ ಸರ್ಕಾರ

ರಾಜ್ಯಪಾಲರ ನಡೆಯಿಂದ ಆಕ್ರೋಶಗೊಂಡಿರುವ ರಾಜ್ಯ ಸರ್ಕಾರ ಕಾನೂನು ಹೋರಾಟ ನಡೆಸಲು ಮುಂದಾಗಿದೆ. ರಾಜ್ಯಪಾಲರ ನಡೆ ವಿರುದ್ಧ ಕಾನೂನು ಕ್ರಮದ ಮೊರೆ ಹೋಗಲು ರಾಜ್ಯ ಸರ್ಕಾರದ ಚಿಂತನೆ ನಡೆಸಿದೆ. ಇನ್ನು ನಾಲ್ಕು ಮಸೂದೆಗಳನ್ನು ಅಂಗೀಕರಿಸಲು ರಾಜ್ಯಪಾಲರು ಬಾಕಿ ಉಳಿಸಿಕೊಂಡಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ವೈಫಲ್ಯ ಮತ್ತು ದುರಾಡಳಿತದಿಂದ ಜನ ಸಾವಿನ ಮೊರೆ ಹೋಗುತ್ತಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ

ರಾಜ್ಯಪಾಲರಿಂದ 11 ಮಸೂದೆ ವಾಪಸ್

ಈ ಹಿಂದೆ ರಾಜ್ಯಪಾಲರು 11 ಮಸೂದೆಗಳಿಗೆ ಹೆಚ್ಚಿನ ಮಾಹಿತಿ ಕೋರಿ ರಾಜ್ಯ ಸರ್ಕಾರ ಹಿಂತಿರುಗಿಸಿದ್ದರು. ಇದರಿಂದ ಮಸೂದೆಗಳು ಪಾಸಾಗದೆ ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಿತ್ತು. 2024ರ ಜನವರಿಯಿಂದ 2024ರ ಆಗಸ್ಟ್​​ವರೆಗೆ​​​​ ರಾಜ್ಯಪಾಲರು ಒಟ್ಟು 11 ಮಸೂದೆಗಳನ್ನು ಹೆಚ್ಚಿನ ಮಾಹಿತಿ ಕೋರಿ ವಾಪಸ್​ ಕಳುಹಿಸಿದ್ದರು. ಇದು ಸರ್ಕಾರ ತಲೆನೋವಾಗಿದ್ದರೂ, ರಾಜ್ಯಪಾಲರಿಗೆ ಸ್ಪಷ್ಟನೆ ನೀಡಿತ್ತು. ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಘರ್ಷಣೆ ನಡೆಯುತ್ತಿದ್ದು, ಈ ಮಸೂದೆಗಳನ್ನ ಜಾರಿಗೆ ತರಲು ಸರ್ಕಾರ ಯಾವ ಹೆಜ್ಜೆ ಇಡುತ್ತೆ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ