AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತೇಕ ಘಟನೆ: ಕೇಂದ್ರ ಸಚಿವರ ಹೆಸರಿನಲ್ಲಿ ರಾಜ್ಯಪಾಲ ಗೆಹ್ಲೋಟ್​​​ಗೆ ಫೋನ್ ಕರೆ, ಜಡ್ಜ್​​ಗೆ 12 ಸಾವಿರ ರೂ. ವಂಚನೆ!

ಈ ಹಿಂದೆ ಅಷ್ಟೇ ಕರ್ನಾಟಕ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್​ ಅವರ ಫೋಟೋ, ಹೆಸರು ಬಳಸಿ ನಕಲಿ ಫೇಸ್​ಬುಕ್ ಖಾತೆ ಓಪನ್ ಮಾಡಲಾಗಿತ್ತು. ಈ ಸಂಬಂಧ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ದೂರಿನೆ ಮೇರೆಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಇದೀಗ ಕೇಂದ್ರ ಸಚಿವರರೊಬ್ಬರ ಹೆಸರಿನಲ್ಲಿ ಗೆಹ್ಲೋಟ್​ ಅವರಿಗೆ ದೂರವಾಣಿ ಕರೆ ಮಾಡಿ ವಂಚನೆಗೆ ಯತ್ನಿಸಿರುವ ಘಟನೆ ನಡೆದಿದೆ. ಇನ್ನು ಮತ್ತೊಂಡೆದೆ ಕುಮಾರಕೃಪಾ ಗೆಸ್ಟ್ ಹೌಸ್ ಬುಕ್ಕಿಂಗ್ ಹೆಸರಿನಲ್ಲಿ ಕೋರ್ಟ್ ಜಡ್ಜ್ ಗೆ 12 ಸಾವಿರ ರೂ. ವಂಚನೆ ಮಾಡಲಾಗಿದೆ. ಈ ಎರಡು ಪ್ರತ್ಯೇಕ ಘಟನೆ ವಿವರ ಇಲ್ಲಿದೆ.​

ಪ್ರತೇಕ ಘಟನೆ: ಕೇಂದ್ರ ಸಚಿವರ ಹೆಸರಿನಲ್ಲಿ ರಾಜ್ಯಪಾಲ ಗೆಹ್ಲೋಟ್​​​ಗೆ ಫೋನ್ ಕರೆ, ಜಡ್ಜ್​​ಗೆ  12 ಸಾವಿರ ರೂ. ವಂಚನೆ!
Kumarakrupa And Thawar Chand Gehlot
ರಮೇಶ್ ಬಿ. ಜವಳಗೇರಾ
|

Updated on: Sep 09, 2025 | 6:15 PM

Share

ಬೆಂಗಳೂರು, (ಸೆಪ್ಟೆಂಬರ್ 09): ಕೇಂದ್ರ ಸಚಿವರ ಹೆಸರಿನಲ್ಲಿ ಕರ್ನಾಟಕ ರಾಜ್ಯಪಾಲ (Karnataka Governor) ಥಾವರ್ ಚೆಂದ್ ಗೆಹ್ಲೋಟ್  ( thawar chand Gehlot) ಅವರಿಗೆ ಫೋನ್ ಕರೆ ಮಾಡಿ ವಂಚನೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್  (Union Minister Dharmendra Pradhan ) ಹೆಸರಿನಲ್ಲಿ ಗೆಹ್ಲೋಟ್ ಅವರಿಗೆ 2 ಬಾರಿ ಫೋನ್ ಕರೆ ಮಾಡಲಾಗಿದ್ದು, ಧರ್ಮೇಂದ್ರ ಪ್ರಧಾನ್ ಅವರಂತೆ ಮಾತನಾಡಿದ್ದಾರೆ. ಬಳಿಕ ಪರಿಶೀಲಿಸಿದಾಗ ಕರೆ ಮಾಡಿದ್ದ ನಂಬರ್ ಫೇಕ್ ಎಂದು ಗೊತ್ತಾಗಿದೆ. ಕೂಡಲೇ ಈ ಬಗ್ಗೆ ರಾಜಭವನದ ಅಧಿಕಾರಿ ದೂರಿನ ಅನ್ವಯ ಕೇಂದ್ರ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಕುಮಾರಕೃಪಾ ಗೆಸ್ಟ್ ಹೌಸ್ ಬುಕ್ಕಿಂಗ್ ನೆಪದಲ್ಲಿ ಜಡ್ಜ್​​​ಗೆ  ವಂಚನೆ

ಅಚ್ಚರಿ ಅನ್ನಿಸಿದರೂ ಸತ್ಯ ಸೈಬರ್ ವಂಚಕರು ಕೋರ್ಟ್​ ಜಡ್ಜ್​ ಗಳನ್ನೇ ಬಿಟ್ಟಿಲ್ಲ. ಹೌದು…ಬೆಂಗಳೂರಿನ ಕುಮಾರ ಕೃಪಾ ಗೆಸ್ಟ್ ಹೌಸ್ ರೂಮ್​ ಬುಕ್ಕಿಂಗ್ ನೆಪದಲ್ಲಿ ಪಂಜಾಬ್ ಮೂಲದ ನ್ಯಾಯಾಧೀಶರಿಗೆ 12 ಸಾವಿರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ನಡೆದಿದೆ. ಸೆಪ್ಟೆಂಬರ್ 2ರಂದು ಬೆಂಗಳೂರಿನ ಪರಿಚಯಸ್ಥ ಪೊಲೀಸ್ ಅಧಿಕಾರಿಗೆ ಕರೆ ಮಾಡಿದ್ದ ಜಡ್ಜ್, ಕುಮಾರಕೃಪಾ ಗೆಸ್ಟ್ ಹೌಸ್ ಬುಕ್ ಮಾಡಿಕೊಡಲು ಸಂಬಂಧಪಟ್ಟವರ ಮಾಹಿತಿ ಕೇಳಿದ್ದರು. ಬಳಿಕ ಪೊಲೀಸ್ ಅಧಿಕಾರಿ ವೆಬ್ ಸೈಟ್ ಚೆಕ್‌ ಮಾಡಿದಾಗ https://kumarakrupaaguesthouse.com/ ಲಿಂಕ್ ನಲ್ಲಿದ್ದ ನಂಬರ್ ಕಲೆಕ್ಟ್ ಮಾಡಿ ಜಡ್ಜ್ ಗೆ ನೀಡಿದ್ದರು. ನಂತರ ನ್ಯಾಯಾಧೀಶರು ಆ ನಂಬರ್ ಗೆ ಕರೆ ಮಾಡಿ ಕುಮಾರಕೃಪಾದಲ್ಲಿ ರೂಮ್ ಬುಕ್ ಮಾಡುವಂತೆ ಹೇಳಿದ್ದಾರೆ. ಆದ್ರೆ, ಇದಕ್ಕೆ 12 ಸಾವಿರ ರೂ. ಪಾವತಿಸುವಂತೆ ಆಕಡೆಯಿಂದ ವ್ಯಕ್ತಿ ಹೇಳಿದ್ದಾನೆ. ಇದನ್ನು ನಂಬಿದ ಜಡ್ಜ್​, 12 ಸಾವಿರ ರೂಪಾಯಿ ಪಾವತಿಸಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಫೋಟೋ, ಹೆಸರು ಬಳಸಿ ನಕಲಿ ಫೇಸ್​ಬುಕ್ ಖಾತೆ ಓಪನ್, ಎಫ್​ಐಆರ್ ದಾಖಲು

ರೂಮ್ ಬುಕ್ ಆಗಿದೆ ಎಂದು ನಂಬಿ ನ್ಯಾಯಾಧೀಶರು, ಸೆಪ್ಟೆಂಬರ್ 6ರಂದು ಬೆಂಗಳೂರಿಗೆ ಬಂದಿಳಿದು ನೇರವಾಗಿ ಕುಮಾರ ಕೃಪಾಗೆ ಗೆಸ್ಟ್​ ಹೌಸ್​ ಗೆ ಆಗಮಿಸಿ ರೂಮ್​ ಬಗ್ಗೆ ವಿಚಾರಿಸಿದ್ದಾರೆ. ಆಗ ಜಡ್ಜ್ ಹೆಸರಲ್ಲಿ ಯಾವುದೇ ರೂಮ್ ಬುಕ್ ಆಗಿಲ್ಲದಿರುವುದು ಬೆಳಕಿಗೆ ಬಂದಿದೆ. ಕೂಡಲೇ ಜಡ್ಜ್​ ಆ ನಂಬರ್​ ಕರೆ ಮಾಡಿದ್ರೆ ಸ್ವೀಚ್ ಆಫ್ ಎಂದು ಹೇಳಿದೆ. ಕೊನೆಗೆ ವಂಚನೆಗೊಳಗಾಗಿರುವುದು ಗೊತ್ತಾಗಿದೆ. ಇನ್ನು ಈ ಬಗ್ಗೆ ಬೆಂಗಳೂರಿನ ಪೊಲೀಸ್ ಅಧಿಕಾರಿ ನೀಡಿದ ದೂರಿನ ಮೇರೆಗೆ ಕೇಂದ್ರ ಸೈಬರ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ತನಿಖೆ ನಡೆದಿದೆ.

ಬೆಂಗಳೂರು ಪೊಲೀಸ್ ಆಯುಕ್ತ ಹೇಳಿದ್ದೇನು?

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿದ್ದು, ಸೈಬರ್ ನಲ್ಲಿ ಬೇರೆ ಬೇರೆ ತರ ಅಪರಾಧ ಆಗುತ್ತಿದೆ. ಇದು ಎರಡು ತಿಂಗಳ ಹಿಂದೆ ಆಗಿದ್ದು, ತಡವಾಗಿ ದೂರು‌ ಕೊಟ್ಟಿದ್ದಾರೆ. ಇದರ ಬಗ್ಗೆ ಕೇಸ್ ದಾಖಲಿಸಿ ತನಿಖೆ‌ ಮಾಡಲಾಗುತ್ತಿದೆ. ಫ್ರಾಡ್ ಮಾಡುವರು ಪ್ರತಿಸಲ ಹೊಸ ಹೊಸ ಟೆಕ್ನಿಕ್ ಬಳಸುತ್ತಿದ್ದಾರೆ. ಡಿಜಿಟಲ್ ಅರೆಸ್ಟ್ ತುಂಬಾ ಕಾಮನ್ ಆಗಿದೆ . ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಜಾಗೃತಿ ಹೆಚ್ಚು ಮೂಡಿಸುತ್ತಿದ್ದೇವೆ ಎಂದರು.

ವರದಿ: ಪ್ರದೀಪ್ ಚಿಕ್ಕಾಟೆ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ