AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thawar Chand Gehlot: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರನ್ನೇ ಬಿಟ್ಟು ಹಾರಿದ ವಿಮಾನ

ಹೈದರಾಬಾದ್‌ಗೆ ತೆರಳಬೇಕಿದ್ದ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನೇ ಬಿಟ್ಟು ವಿಮಾನ ಹಾರಿರುವ ಘಟನೆ ನಡೆದಿದೆ.

Thawar Chand Gehlot: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರನ್ನೇ ಬಿಟ್ಟು ಹಾರಿದ ವಿಮಾನ
ಥಾವರ್ ಚಂದ್ ಗೆಹ್ಲೋಟ್
TV9 Web
| Edited By: |

Updated on:Jul 28, 2023 | 9:34 AM

Share

ಬೆಂಗಳೂರು, (ಜುಲೈ 28): ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನೇ ಬಿಟ್ಟು ವಿಮಾನ ಹಾರಿದ ಘಟನೆ ನಡೆದಿದೆ. ನಿನ್ನೆ (ಜುಳಯ 28) ಬೆಂಗಳೂರಿನಿಂದ(Bengaluru) ಹೈದರಾಬಾದ್​ಗೆ (Hyderabad) ತೆರಳಬೇಕಿದ್ದ ರಾಜ್ಯಪಾಲರು,  ಸಿಬ್ಬಂದಿಯ ನಿರ್ಲಕ್ಷ್ಯದಿಂದ ವಿಮಾನವನ್ನು ಮಿಸ್ ಮಾಡಿಕೊಂಡಿದ್ದಾರೆ. ಹೌದು…ಥಾವರ್ ಚಂದ್ ಗೆಹ್ಲೋಟ್ ಅವರು ಹೈದರಾಬಾದ್​ಗೆ ತೆರಳು ಮಧ್ಯಾಹ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ(Bangalore Kempegowda international airport) ಬಂದಿದ್ದರು, ಆದ್ರೆ, ಇನ್ನೂ ಏರ್‌ ಏಷ್ಯಾ ವಿಮಾನ ಹೊರಡಲು ಸಮಯ ಇದೆ ಎಂದು ಸಿಬ್ಬಂದಿ ರಾಜ್ಯಪಾರನ್ನು ಕರೆದುಕೊಂಡು ಹೋಗಿ ವಿಐಪಿ ಲಾಂಜ್​ನಲ್ಲಿ ಕೂರಿಸಿದ್ದು, ಟೈಮ್​ ಆಗಿರುವುದು ಅವರ ಗಮನಕ್ಕೆ ಬಂದಿಲ್ಲ. ಇದರಿಂದ ವಿಮಾನ ಸರಿಯಾದ ಸಮಯಕ್ಕೆ ಟೇಕಫ್​ ಆಗಿ ಹೋಗಿದೆ.

ಇದನ್ನೂ ಓದಿ: Karnataka Breaking News Live: ಚಿಕ್ಕಮಗಳೂರಲ್ಲಿ ಗುಡ್ಡ ಕುಸಿತ; ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ನಿರ್ಬಂಧ

ಬಳಿಕ ಫ್ಲೈಟ್ ಸಮಯವಾಗಿರುವುದು ಗಮನಕ್ಕೆ ಬಂದ ಕೂಡಲೇ ರಾಜ್ಯಪಾಲರು ವಿಮಾನ ಹತ್ತಲು ಹೋಗಿದ್ದಾರೆ. ಆದ್ರೆ, ಅಷ್ಟರಲ್ಲಾಗಲೇ ವಿಮಾನ ಹೋಗಿತ್ತು. ಪ್ರೋಟೋಕಾಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿಮಾನ ತಪ್ಪಿದೆ. ಬಳಿಕ ಅಧಿಕಾರಿಗಳು ಮತ್ತೊಂದು ವಿಮಾನದ ಮೂಲಕ ಅವರನ್ನು ಹೈದರಾಬಾದ್​ಗೆ ಕಳುಹಿಸಿಕೊಟ್ಟಿದ್ದಾರೆ.  ಸಿಬ್ಬಂದಿ ನಿರ್ಲಕ್ಷ್ಯತನದಿಂದ ರಾಜ್ಯಪಾಲರು ಒಂದು ಗಂಟೆ ತಡವಾಗಿ ಹೈದರಾಬಾದ್​ಗೆ ತೆರಳಬೇಕಾಯ್ತು.

ಏರ್​ಲೈನ್ಸ್​ ವಿರುದ್ಧ ದೂರು ದಾಖಲು

ಏರ್​ಪೋರ್ಟ್​​ನಲ್ಲಿ ರಾಜ್ಯಪಾಲರಿಗೆ ವಿಮಾನ ಮಿಸ್​ ಆದ ಹಿನ್ನೆಲೆ​ಯಲ್ಲಿ ಶಿಷ್ಟಾಚಾರ ಅಧಿಕಾರಿಗಳು ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್​ ಠಾಣೆಗೆ ಏರ್ ಏಷ್ಯಾ ಏರ್​​ಲೈನ್ಸ್ ದೂರು ನೀಡಿದ್ದಾರೆ.‌ ವಿಮಾನ ಮಿಸ್ ಆಗಲು ಕಾರಣ ಜೊತೆಗೆ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರು ಆಧರಿಸಿ ಏರ್​ಪೋರ್ಟ್​ ಪೊಲೀಸರು ಇಂದು ಎಫ್​ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವ ಸಾಧ್ಯತೆಗಳಿವೆ.

ಆಗಿದ್ದೇನು?

ಮಧ್ಯಾಹ್ನ 02 ಗಂಟೆಯ ವಿಮಾನದಲ್ಲಿ ಹೋಗಲು ನಿಲ್ದಾಣಕ್ಕೆ 1:30ಕ್ಕೆ ಆಗಮಿಸಿದ್ದರು. ಸಿಬ್ಬಂದಿ ವಿಮಾನದಲ್ಲಿ ಲಗೇಜ್ ಇಟ್ಟು ಬಂದಿದ್ದರು. ಆದ್ರೆ, ಟೈಮ್​ ಇದೆ ಎಂದು ಪ್ರೋಟೋಕಾಲ್ ಸಿಬ್ಬಂದಿ ರಾಜ್ಯಪಾಲರನ್ನು ವಿಐಪಿ ಲಾಂಜ್ ನಲ್ಲಿ ಕೂರಿಸಿದ್ದಾರೆ. ಇತ್ತ ಸಮಯವಾಗಿದ್ದರಿಂದ ವಿಮಾನ ಟೇಕಫ್ ಆಗಿ ಹೋಗಿದೆ. ಒಂದು ನಿಮಿಷ ತಡವಾಗಿ ಬಂದಿದ್ದಕ್ಕೆ ಗರ್ವನರ್​ಗೆ ವಿಮಾನ ಮಿಸ್ ಆಗಿದೆ. ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ರಾಜ್ಯಪಾಲರು ಹಾಗೂ ಹಿರಿಯ ಅಧಿಕಾರಿಗಳು ಗರಂ ಆಗಿದ್ದು, ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:15 am, Fri, 28 July 23

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ