ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ವಜುಭಾಯಿ ವಾಲಾ
ಯಡಿಯೂರಪ್ಪ ಅವರು ರಮೇಶ್ ರಾಜೀನಾಮೆ ಪತ್ರವನ್ನು ರಾಜ್ಯಪಾಲ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಕಳುಹಿಸಿದ್ದರು. ಈಗ ವಜುಭಾಯಿ ವಾಲಾ ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದಾರೆ.
ಅಶ್ಲೀಲ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮುಜುಗರ ತಪ್ಪಿಸಲು ರಮೇಶ್ ಜಾರಕಿಹೊಳಿ ಜಲಸಂಪನ್ಮೂಲ ಸಚಿವ ಸ್ಥಾನಕ್ಕೆ ರಾಜೀನಾಮೆ ಇಂದು ಮುಂಜಾನೆ ರಾಜೀನಾಮೆ ಸಲ್ಲಿಕೆ ಮಾಡಿದ್ದರು. ಸಿಎಂ ಬಿ.ಎಸ್.ಯಡಿಯೂರಪ್ಪಗೆ ರಾಜೀನಾಮೆ ಪತ್ರ ರವಾನೆ ಮಾಡಿದ್ದು ತಮ್ಮ ನಿಲುವನ್ನು ತಿಳಿಸಿದ್ದಾರು. ಯಡಿಯೂರಪ್ಪ ಅವರು ರಮೇಶ್ ರಾಜೀನಾಮೆ ಪತ್ರವನ್ನು ರಾಜ್ಯಪಾಲ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಕಳುಹಿಸಿದ್ದರು. ಈಗ ವಜುಭಾಯಿ ವಾಲಾ ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದಾರೆ.
ಸಿಡಿ ವಿಚಾರದಲ್ಲಿ ಪಕ್ಷಕ್ಕೆ ಸಹಿಸಲಾಗದಷ್ಟು ಮುಜುಗರ ಉಂಟುಮಾಡಿದ್ದಕ್ಕೆ ಬಿಜೆಪಿ ಹೈಕಮಾಂಡ್ ಸಿಡಿಮಿಡಿಗೊಂಡು ಮೊದಲು ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯಿರಿ, ಉಳಿದಿದ್ದು ಆಮೇಲೆ ನೋಡೋಣ ಎನ್ನುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಾಹಿತಿ ರವಾನಿಸಿರುವುದಾಗಿ ಕೆಲ ಮೂಲಗಳು ಈ ಹಿಂದೆ ತಿಳಿಸಿದ್ದವು. ಈ ಬೆನ್ನಲ್ಲೇ ರಮೇಶ್ ರಾಜೀನಾಮೆ ನೀಡಿದ್ದರು.
ನಿನ್ನೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಿಡಿ ಬಿಡುಗಡೆ ಮಾಡಿದ ನಂತರ ಬಳಿಕ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನವೇ ಉಂಟಾಗಿದ್ದು, ಪ್ರತಿಪಕ್ಷಗಳು ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಕೊಡಿಸಲಿ ಎಂದು ಪಟ್ಟು ಹಿಡಿದಿದ್ದವು. ಆದರೆ, ರಮೇಶ್ ಜಾರಕಿಹೊಳಿ ಈ ವಿಡಿಯೋಗೂ ನನಗೂ ಸಂಬಂಧವಿಲ್ಲ, ಬೇಕಿದ್ದರೆ ತನಿಖೆ ನಡೆಯಲಿ. ಆರೋಪ ಸಾಬೀತಾದರೂ ನಾನು ನಿವೃತ್ತಿ ತೆಗೆದುಕೊಳ್ಳುವೆ ಎಂದು ಹೇಳಿಕೆ ನೀಡಿದ್ದರು. ಅವರ ಬೆನ್ನಿಗೆ ನಿಂತ ಬಾಲಚಂದ್ರ ಜಾರಕಿಹೊಳಿ, ತನ್ನ ಸಣ್ಣ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ. ಇಂತಹ ಫೇಕ್ ಸಿಡಿಗಳಿಗಾಗಿ ರಾಜೀನಾಮೆ ನೀಡಿಸಿದರೆ ಸಂಪುಟವೇ ಉಳಿಯುವುದಿಲ್ಲ ಎಂಬ ಮಾತುಗಳನ್ನಾಡಿದ್ದರು.
ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಬಂದ್ ಇದೀಗ, ರಮೇಶ್ ಜಾರಕಿಹೊಳಿ ರಾಜೀನಾಮೆ ಸಲ್ಲಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ಗೋಕಾಕದಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದು, ರಾಜೀನಾಮೆ ಅಂಗೀಕಾರ ಮಾಡಿದರೆ ಬೆಳಗಾವಿ ಬಂದ್ ಮಾಡೋದಾಗಿ ಎಚ್ಚರಿಕೆಯನ್ನೂ ನೀಡಿದ್ದರು. ಯಾವುದೇ ಕಾರಣಕ್ಕೂ ರಮೇಶ್ ಅವರಿಂದ ರಾಜೀನಾಮೆ ಪಡೆಯಬಾರದು ಎಂದು ಒತ್ತಾಯಿಸುತ್ತಿರುವ ಬೆಂಬಲಿಗರು ನಗರದ ಬಸವ ವೃತ್ತದಲ್ಲಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ; ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ರವಾನೆ
Published On - 6:58 pm, Wed, 3 March 21