AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Governor: ಒಂದೇ ವಾಕ್ಯದಲ್ಲಿ ಮಾತು ಮುಗಿಸಿದ ರಾಜ್ಯಪಾಲರು, ಸರ್ಕಾರದ ಭಾಷಣ ಓದಲು ನಕಾರ: ವಿಧಾನಸಭೆಯಲ್ಲಿ ಹೈಡ್ರಾಮಾ

ಕರ್ನಾಟಕ ರಾಜ್ಯಪಾಲ VS ಕಾಂಗ್ರೆಸ್ ಸರ್ಕಾರ: ಕರ್ನಾಟಕ ವಿಧಾನಸಭೆ ವಿಶೇಷ ಅಧಿವೇಶನ ಗುರುವಾರ ಬೆಳಗ್ಗೆ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ಭಾರಿ ಕುತೂಹಲಗಳ ನಡುವೆ ವಿಧಾನಸಭೆಗೆ ಬಂದ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಸರ್ಕಾರ ಕೊಟ್ಟ ಭಾಷಣ ಓದದೆ ಒಂದೆರಡು ವಾಕ್ಯಗಳಲ್ಲಿ ಶುಭಾಶಯ ತಿಳಿಸಿ ತೆರೆಳಿದರು. ಇದು ಭಾರಿ ಕೋಲಾಹಲಕ್ಕೆ ಕಾರಣವಾಯಿತು.

Karnataka Governor: ಒಂದೇ ವಾಕ್ಯದಲ್ಲಿ ಮಾತು ಮುಗಿಸಿದ ರಾಜ್ಯಪಾಲರು, ಸರ್ಕಾರದ ಭಾಷಣ ಓದಲು ನಕಾರ: ವಿಧಾನಸಭೆಯಲ್ಲಿ ಹೈಡ್ರಾಮಾ
ವಿಧಾನಸಭೆಯಲ್ಲಿ ಹೈಡ್ರಾಮಾ
ಗಣಪತಿ ಶರ್ಮಾ
|

Updated on:Jan 22, 2026 | 11:48 AM

Share

ಬೆಂಗಳೂರು, ಜನವರಿ 22: ನರೇಗಾ (NREGA) ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ ಅಧಿವೇಶನ (Karnataka Assembly Special Session) ಕೂಡ ರಾಜ್ಯಪಾಲರು (Karnataka Governor) ಮತ್ತು ಸರ್ಕಾರದ ವಿರುದ್ಧದ ಸಂಘರ್ಷಕ್ಕೆ ಕಾರಣವಾಗಿದೆ. ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ವಿಧಾನಸಭೆಗೆ ಬರುತ್ತಾರೆಯೇ ಎಂಬ ಅನುಮಾನವಿತ್ತು. ಆದರೆ, ಇದನ್ನು ಹುಸಿ ಮಾಡಿದ ರಾಜ್ಯಪಾಲರು, ಕೇವಲ ಒಂದೆರಡು ವಾಕ್ಯಗಳಲ್ಲಿ ಮಾತನಾಡಿ ಶುಭಾಶಯ ತಿಳಿಸಿ ಸರ್ಕಾರ ಕೊಟ್ಟ ಭಾಷಣದ ಪ್ರತಿ ಪೂರ್ತಿ ಓದದೆ ತೆರಳಿದರು. ಇದಕ್ಕೆ ಆಡಳಿತ ಪಕ್ಷದ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ವಿಧಾನಸಭೆ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು.

ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ 11 ಅಂಶಗಳನ್ನು ತೆಗೆಯುವಂತೆ ರಾಜ್ಯಪಾಲರು, ಬುಧವಾರ ಸೂಚಿಸಿದ್ದರು. ಆದರೆ, ಅದನ್ನು ಸರ್ಕಾರ ನಿರಾಕರಿಸಿತ್ತು. ಹೀಗಾಗಿ ರಾಜ್ಯಪಾಲರು ಭಾಷಣ ಮಾಡಲು ಬರುವುದು ಅನುಮಾನ ಎಂದು ಹೇಳಲಾಗಿತ್ತು. ಒಂದು ವೇಳೆ ರಾಜ್ಯಪಾಲರು ವಿಧಾನಸಭೆಗೆ ಬಾರದಿದ್ದರೆ ಮುಂದಿನ ಕಾನೂನು ಕ್ರಮಕ್ಕಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಕ್ಕೆ ಕೂಡ ಸರ್ಕಾರ ಸಿದ್ಧತೆ ನಡೆಸಿತ್ತು.

ರಾಜ್ಯಪಾಲರು ಮಾಡಿದ್ದೇನು?

ಆಡಳಿತಾರೂಢ ಕಾಂಗ್ರೆಸ್ ನಾಯಕರ ನಿರೀಕ್ಷೆಗಳನ್ನು ಹುಸಿ ಮಾಡಿದ ರಾಜ್ಯಪಾಲರು, ವಿಧಾನಸಭೆಗೆ ಬಂದು ಭಾಷಣ ಆರಂಭಿಸಿದರು. ಸರ್ಕಾರ ಸಿದ್ಧಪಡಿಸಿದ ಭಾಷಣದ ಮೊದಲ ಮತ್ತು ಕೊನೆಯ ಪ್ಯಾರದ ಒಂದೆರಡು ಲೈನ್ ಮಾತ್ರ ಓದಿ, ಶುಭಾಶಯ ಕೋರಿ ಸರ್ಕಾರಕ್ಕೆ ಶಾಕ್ ಕೊಟ್ಟರು. ಬಳಿಕ ಅಲ್ಲಿಂದ ನಿರ್ಗಮಿಸಿದರು.

ವಿಧಾನಸಭೆಯಲ್ಲಿ ಹೈಡ್ರಾಮಾ

ರಾಜ್ಯಪಾಲರು ನಿರ್ಗಮಿಸುತ್ತಿದ್ದಂತೆಯೇ ಅವರನ್ನು ತಡೆಯಲು ಎಂಎಲ್‌ಸಿ ಬಿಕೆ ಹರಿಪ್ರಸಾದ್ ಮುಂದಾದರು. ಕಾಂಗ್ರೆಸ್ ಪಕ್ಷದ ಶಾಸಕರು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ, ವಿಧಾನಸಭೆಯಲ್ಲಿ ಹೈಡ್ರಾಮವೇ ನಡೆಯಿತು. ನಂತರ ಸ್ಪೀಕರ್ ಯುಟಿ ಖಾದರ್, ಸಭಾಪತಿ ಹೊರಟ್ಟಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರನ್ನು ಬೀಳ್ಕೊಟ್ಟರು. ರಾಜ್ಯಪಾಲರು ಕಾರು ಹತ್ತಿದ ಕೂಡಲೇ, ‘ಸಂವಿಧಾನ ಧಿಕ್ಕರಿಸಿದ ರಾಜ್ಯಪಾಲರಿಗೆ’ ಎಂದು ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಸೇರಿ ಇತರರು ಘೋಷಣೆ ಕೂಗಿದರು.

ವಿಶೇಷ ಅಧಿವೇಶನದ ಕಥೆ ಮುಂದೇನು?

ರಾಜ್ಯಪಾಲರು ಮೊದಲ ಮತ್ತು ಕೊನೆ ಪ್ಯಾರಾ ಮಾತ್ರ ಓದಿದ ಕಾರಣ ಅವರು ಭಾಷಣ ಓದಿದ್ದಾರೆ ಎಂದೇ ಭಾವಿಸಲಾಗುತ್ತದೆ. ಹೀಗಾಗಿ ಅಧಿವೇಶನ ನಡೆಯುವುದಕ್ಕೆ ಸಮಸ್ಯೆ ಎದುರಾಗದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ವಿಶೇಷ ಅಧಿವೇಶನ: ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲರು? ಕುತೂಹಲ ಮೂಡಿಸಿದ ನಡೆ!

ಸಂವಿಧಾನದ ಪ್ರಕಾರ ಭಾಷಣ ಮಾಡುವುದು ರಾಜ್ಯಪಾಲರ ಕರ್ತವ್ಯ. ರಾಜ್ಯಪಾಲರು ಅವರು ಸಿದ್ಧ ಮಾಡಿ ಭಾಷಣವನ್ನು ಓದುವಂತಿಲ್ಲ. ನರೇಗಾ ಬದಲಿ ವಿಬಿ ಜಿ ರಾಮ್​ ಜಿ ಕಾಯ್ದೆಯನ್ನು ತಂದಿದ್ದಾರೆ. ಯೋಜನೆಯಲ್ಲಿ ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆದುಹಾಕಿದ್ದಾರೆ. ಹೊಸ ಕಾಯ್ದೆಯಲ್ಲಿ ರಾಜ್ಯ ಸರ್ಕಾರ ಅಧಿಕಾರವನ್ನು ಕಿತ್ತುಹಾಕಿದ್ದಾರೆ. ವಿಪಕ್ಷಗಳು ಉದ್ದೇಶಪೂರ್ವಕವಾಗಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:27 am, Thu, 22 January 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ