AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶಾ ಕಾರ್ಯಕರ್ತೆಯರ ಜೊತೆಗಿನ ಸಿಎಂ ಸಂಧಾನ ಸಕ್ಸಸ್: 2 ಸಾವಿರ ರೂ. ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ

ಕಳೆದ 12 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಆಶಾ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ಕೊನೆಗೂ ಸುಖಾಂತ್ಯವಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಶಾ ಕಾರ್ಯಕರ್ತರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಗ್ಯ ಸಚಿವ ಯು.ಟಿ.ಖಾದರ್ ಮುಂದೆ 2 ಸಾವಿರ ಹೆಚ್ಚಳಕ್ಕೆ ಸುತಾರಾಂ ಒಪ್ಪದ ಆಶಾಗಳು, ಇದೀಗ ಸಿಎಂ ಮಾತಿಗೆ ಒಪ್ಪಿಗೆ ಸೂಚಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಜೊತೆಗಿನ ಸಿಎಂ ಸಂಧಾನ ಸಕ್ಸಸ್: 2 ಸಾವಿರ ರೂ. ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ
ಡಿಕೆ ಶಿವಕುಮಾರ್, Asha workers
ಪ್ರಸನ್ನ ಗಾಂವ್ಕರ್​
| Edited By: |

Updated on:Nov 28, 2026 | 5:51 PM

Share

ಬೆಂಗಳೂರು, (ನವೆಂಬರ್.28): 1500 ರೂ.ವೇತನ ನೀಡುವಂತೆ ಕಳೆದ 12 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಮನವೊಲಿಸುವಲ್ಲಿ ಸಿಎಂ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಗೃಹ ಕಚೇರಿಯಲ್ಲಿ ನಡೆದ ಆಶಾ ಕಾರ್ಯಕರ್ತೆಯರೊಂದಿಗಿನ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರು 2 ಸಾವಿರ ರೂಪಾಯಿ ಹೆಚ್ಚಳ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದ್ರೆ, ಇದಕ್ಕೆ ಆರಂಭದಲ್ಲಿ ಆಶಾ ಕಾರ್ಯಕರ್ತೆಯರು ಒಪ್ಪಲಿಲ್ಲವಾದರೂ,  ಸಿಎಂ ಎಲ್ಲವನ್ನೂ ತಿಳಿ ಹೇಳಿ ಮನವೊಲಿಸಿದ್ದು, ಅಂತಿಮವಾಗಿ  ಆಶಾ ಕಾರ್ಯಕರ್ತೆಯರು  2 ಸಾವಿರ ರೂಪಾಯಿಗೆ ಒಪ್ಪಿಗೆ ಸೂಚಿಸಿದ್ದಾರೆ. ಇದರೊಂದಿಗೆ  ಆಶಾ ಕಾರ್ಯಕರ್ತೆಯರ ಜೊತೆಗಿನ ಸಿಎಂ ಸಂಧಾನ ಸಕ್ಸಸ್ ಆಗಿದೆ.

ಬೆಳಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಸಹ ಆಶಾ ಕಾರ್ಯಕರ್ತೆಯರ ಜೊತೆ ಸಭೆ ಮಾಡಿದ್ದು, 2000 ರೂಪಾಯಿ ಹೆಚ್ಚಳ ಮಾಡುತ್ತೇವೆ ಪ್ರತಿಭಟನೆ ಕೈಬಿಡಿ ಎಂದು ಮನವಿ ಮಾಡಿದ್ದರು. ಆದ್ರೆ, ಆಶಾ ಕಾರ್ಯಕರ್ತೆಯರು ಒಪ್ಪಿರಲಿಲ್ಲ. ಈಗ ಅಂತಿಮವಾಗಿ ಸಿಎಂ ಡಿಕೆ ಶಿವಕುಮಾರ್ ಮಾತಿಗೆ ಆಶಾ ಕಾರ್ಯಕರ್ತೆಯರು 2000 ರೂಪಾಯಿಗೆ ಒಪ್ಪಿಕೊಂಡಿದ್ದಾರೆ.

Published On - 5:47 pm, Sat, 28 November 26

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More