ಬೆಂಗಳೂರು ಕಾಲ್ತುಳಿತ ಕೇಸ್: ಅಮಾನತು ರದ್ದಾದ IPS ಅಧಿಕಾರಿಗಳಿಗೆ ಸ್ಥಳ ನಿಯೋಜನೆ

Chinnaswamy stampede: ಬೆಂಗಳೂರಿನಲ್ಲಿ ಸಂಭವಿಸಿದ್ದ ಕಾಲ್ತುಳಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್‌, ಡಿಸಿಪಿ ಶೇಖರ್ ಎಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎಎಸ್‌ಐ ಬಾಲಕೃಷ್ಣ ಹಾಗೂ ಇನ್ಸ್‌ಪೆಕ್ಟರ್​ ಗಿರೀಶ್​ ಅವರನ್ನು ಅಮಾನತು ಮಾಡಲಾಗಿತ್ತು. ಆದ್ರೆ, ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಲಾಗಿದ್ದು, ಇದೀಗ ಅವರಿಗೆ ಸ್ಥಳ ನಿಯೋಜನೆ ಮಾಡಲಾಗಿದೆ.

ಬೆಂಗಳೂರು ಕಾಲ್ತುಳಿತ ಕೇಸ್: ಅಮಾನತು ರದ್ದಾದ IPS ಅಧಿಕಾರಿಗಳಿಗೆ ಸ್ಥಳ ನಿಯೋಜನೆ
Ips Dayanand
Updated By: ರಮೇಶ್ ಬಿ. ಜವಳಗೇರಾ

Updated on: Jul 31, 2025 | 6:09 PM

ಬೆಂಗಳೂರು, (ಜುಲೈ 31): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿದ ((Chinnaswamy Stampede)) ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಲ್ವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಅಮಾನತು ರದ್ದಾದ ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್ ಅವರನ್ನ ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಎಡಿಜಿಪಿಯಾಗಿ ಸ್ಥಳ ನಿಯೋಜನೆ ಮಾಡಿದ್ದರೆ, ಇನ್ನೋರ್ವ ಐಪಿಎಸ್ ಶೇಖರ್‌.ಹೆಚ್‌.ಟಿ ಅವರನ್ನು ಗುಪ್ತಚರ ಇಲಾಖೆಯ ಎಸ್‌ಪಿ ಹುದ್ದೆ ನೀಡಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತಕ್ಕೆ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿತ್ತು. ಇದರಿಂದ ರಾಜ್ಯ ಸರ್ಕಾರ, ಅಂದಿನ ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಬಿ.ದಯಾನಂದ್‌, ಡಿಸಿಪಿ ಶೇಖರ್ ಹೆಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ASI ಬಾಲಕೃಷ್ಣ ಹಾಗೂ ಇನ್ಸ್​ಪೆಕ್ಟರ್​ ಗಿರೀಶ್​ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದ್ರೆ, ಇದೀಗ ಏಕಾಏಕಿ ರಾಜ್ಯ ಸರ್ಕಾರ ಯುಟರ್ನ್ ಹೊಡೆದಿದ್ದು, ಪೊಲಿಸ್ ಅಧಿಕಾರಿಗಳ ಅಮಾನತು ಆದೇಶವನ್ನು ವಾಪಸ್ ಪಡೆದುಕೊಂಡಿದೆ.ಇದರ ಬೆನ್ನಲ್ಲೇ ಇದೀಗ ದಯಾಂನದ್ ಹಾಗೂ ಶೇಖರ್ ಹೆಚ್.ಟಿ ಅವರಿಗೆ ಹುದ್ದೆ ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ರಾಜ್ಯ ಸರ್ಕಾರ ಯುಟರ್ನ್​, ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

ಬಿ. ದಯಾನಂದ್​ ಅವರಿಗೆ ಬಹಳ ದೊಡ್ಡ ಜವಾಬ್ದಾರಿ ನೀಡಲಾಗಿದೆ. ಈ ಹಿಂದೆ ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದಾಗ ಇವರ ಮೇಲೆ ಮಹಾನಿರ್ದೇಶಕರು ಇದ್ದರು. ಆದ್ರೆ, ಈಗ ಅವರನ್ನು ಕಾರಾಗೃಹ ಮತ್ತು ಸುಧಾರಣಾ ಎಡಿಜಿಪಿಯಾಗಿ ಮಾಡಲಾಗಿದೆ. ಹೀಗಾಗಿ ಅವರಿಗೆ ಈಗ ಯಾರು ಹೆಡ್​ ಇಲ್ಲ. ದಯಾನಂದ್ ಅವರೇ ಮುಖ್ಯಸ್ಥರು. ಇದರಿಂದ ದಯಾನಂದ್ ಅವರಿಗೆ ನೀಡಿರುವುದು ದೊಡ್ಡ ಹುದ್ದೆಯಾಗಿದೆ.

ಇತ್ತೀಚೆಗೆ ರಾಜ್ಯದ ವಿವಿಧ ಕಾರಾಗೃಹದಲ್ಲಿ ಹೊರಗಿನಿಂದ ಮೊಬೈಲ್, ಗುಟ್ಕಾ, ಸಿಗರೇಟ್ ಗಾಂಜಾ ಸಪ್ಲೈ ಆಗುತ್ತಿರುವುದು ಕಂಡುಬಂದಿದೆ. ಇದರ ನಡುವೆ ಇದೀಗ ದಯಾನಂದ್ ಅವರಿಗೆ ಕಾರಾಗೃಹ ಸುಧಾರಣಾ ಇಲಾಖೆ ಮುಖ್ಯಸ್ಥರನ್ನಾಗಿ ಮಾಡಲಾಗಿದೆ.  ಕಾರಗೃಹಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕುವುದು ಒಂದು ದೊಡ್ಡ ಚಾಲೆಂಜ್ ಆಗಿದ್ದಯ, ಇದನ್ನು ಹೇಗೆ ನಿಭಾಯಿಸಿಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.