AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ: ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ತೀರ್ಮಾನ

2021ರಲ್ಲಿ ಜಾರಿಗೆ ತಂದ ರಾಜ್ಯ ನಾಗರಿಕ ಸೇವಾ ತಿದ್ದುಪಡಿ ನಿಯಮ 16 (ಎ) ದಿಂದ ಸಂಕಷ್ಟಕ್ಕೆ ಸಿಲುಕಿದ್ದ ಪೊಲೀಸ್​ ಇಲಾಖೆ ಸಿಬ್ಬಂದಿಗೆ ಇದೀಗ ಸುಹಿ ಸುದ್ದಿ ಸಿಕ್ಕಿದೆ.

ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ: ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ತೀರ್ಮಾನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 22, 2022 | 8:07 PM

Share

ಬೆಳಗಾವಿ: ಕರ್ನಾಟಕ ಪೊಲೀಸ್ ಇಲಾಖೆ (police Department) ಸಿಬ್ಬಂದಿಗೆ ನಿರ್ಬಂಧಿತವಾಗಿದ್ದ ಅಂತರ್ ಜಿಲ್ಲಾ ವರ್ಗಾವಣೆಗೆ(inter district transfer) ಇದೀಗ ಅವಕಾಶ ನೀಡಲಾಗಿದೆ. ಇಂದು(ಡಿಸೆಂಬರ್ 22) ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.ಆದ್ರೆ, ಕೆಲ ಷರತ್ತುಗಳೊಂದಿಗೆ ಪೊಲೀಸ್ ಸಿಬ್ಬಂದಿ ವರ್ಗಾವಣೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಭೂಕಂದಾಯ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರ, ಇನ್ಮುಂದೆ ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆ ಪ್ರಕ್ರಿಯೆ ಸರಳೀಕರಣ

ಪೊಲೀಸ್ ಇಲಾಖೆಗೆ ನೇಮಕವಾಗಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಿರಬೇಕು. ಹಾಗೂ ಮಾಜಿ ಯೋಧರು ಸಹ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಆಗಬಹುದು. ಯಾವುದೇ ಒಂದು ಜಿಲ್ಲೆಯಲ್ಲಿ, ನೇಮಕಾತಿ ಹೊಂದಿದ ಹಾಗೂ ಅದೇ ಜಿಲ್ಲೆಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾವುದೇ ಸಿಬ್ಬಂದಿ, ಇತರೆ ಜಿಲ್ಲೆಗಳು ಅಥವಾ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅರ್ಹತೆ ಹೊಂದಿರುತ್ತಾರೆ.

ಪೊಲೀಸ್ ಇಲಾಖೆಗೆ ನೇಮಕವಾದ ಹಾಗೂ ಕನಿಷ್ಠ ಮೂರು ವರ್ಷಗಳ ಸೇವೆ ಸಲ್ಲಿಸಿದ ಮಾಜಿ ಯೋಧರು ಸಹ ಬೇರೆ ಜಿಲ್ಲೆಗೆ ವರ್ಗಾವಣೆ ಕೋರಲೂ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ಸಿಕ್ಕಿದೆ.

ಮುಂಚೆ ಅವಕಾಶವಿತ್ತು

ರಾಜ್ಯ ನಾಗರಿಕ ಸೇವಾ ನಿಯಮ 16(ಎ) ಅನ್ವಯ ಈ ಹಿಂದೆ ಸೇವಾ ಜ್ಯೇಷ್ಠತೆ ಬಿಟ್ಟುಕೊಟ್ಟು ಬೇರೆ ಪೊಲೀಸ್‌ ವಲಯ, ಜಿಲ್ಲೆಗಳಿಗೆ ವರ್ಗಾವಣೆಯಾಗುವ ಅವಕಾಶವಿತ್ತು. ಪತಿ/ಪತ್ನಿ ಇಬ್ಬರು ಸರಕಾರಿ ನೌಕರರಾಗಿದ್ದರೆ, ಇಬ್ಬರೂ ಒಂದೇ ಜಿಲ್ಲೆಗೆ ವರ್ಗಾವಣೆ ಪಡೆಯಬಹುದಿತ್ತು. ಆದರೆ, 2021ರಲ್ಲಿ ಜಾರಿಗೆ ತಂದ ರಾಜ್ಯ ನಾಗರಿಕ ಸೇವಾ ತಿದ್ದುಪಡಿ ನಿಯಮ 16 (ಎ) ಅಂತರ್ ವಲಯ ವರ್ಗಾವಣೆಗೆ ಅವಕಾಶ ಇರಲಿಲ್ಲ. ಇದರಿಂದ ಪಿಎಸ್‌ಐ, ಎಎಸ್‌ಐ, ಪೊಲೀಸ್‌ ಕಾನ್ಸ್‌ಟೆಬಲ್‌ಗಳು ಹಾಗೂ ಇಲಾಖೆಯ ಗ್ರೂಪ್‌ (ಸಿ) (ಡಿ)ವೃಂದ ಸಂಕಷ್ಟಕ್ಕೆ ಸಿಲುಕಿದ್ದರು. ಅಲ್ಲದೇ ದಂಪತಿ ‘ಕೌಟುಂಬಿಕ’ ಜೀವನಕ್ಕೆ ವಿಘ್ನ ಉಂಟಾಗಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:04 pm, Thu, 22 December 22

Follow Us
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?