ಕಾಡಿನಿಂದ ಹೊರಬಂದ ನಕ್ಸಲರು; ಶರಣಾಗೋರಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ

ಆರು ಜನ ನಕ್ಸಲ್ ನಾಯಕರ ಶರಣಾಗತಿ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆ ಆಗಿದ್ದು, ಇಡೀ ಕಾರ್ಯಕ್ರಮ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಶಿಫ್ಟ್ ಆಗಿದೆ. ಜಿಲ್ಲಾಡಳಿತ ಬದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಆರು ಮಂದಿ ನಕ್ಸಲ್‌ ಹೋರಾಟಗಾರರು ಶರಣಾಗತರಾಗಲಿದ್ದಾರೆ. ಈ ಮುಂಚೆ ನಿಗದಿಯಾದಂತೆ ಚಿಕ್ಕಮಗಳೂರಿನ ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶರಣಾಗತರಾಗಬೇಕಿತ್ತು. ಬದಲಾದ ಕಾರ್ಯಕ್ರಮದಲ್ಲಿ ಸಿಎಂ ಸಮ್ಮುಖದಲ್ಲಿ ಶರಣಾಗರಾಗುತ್ತಿದ್ದಾರೆ. ಇನ್ನು ಶರಣಾಗತಿಯಾಗುತ್ತಿರುವ ನಕ್ಸಲರಿಗೆ ಸರ್ಕಾರ ಪ್ಯಾಕೇಜ್ ನೀಡುತ್ತಿದೆ.

ಕಾಡಿನಿಂದ ಹೊರಬಂದ ನಕ್ಸಲರು; ಶರಣಾಗೋರಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ
Naxal
Follow us
ರಮೇಶ್ ಬಿ. ಜವಳಗೇರಾ
|

Updated on:Jan 08, 2025 | 4:17 PM

ಬೆಂಗಳೂರು, (ಜನವರಿ 08): ಆರು ಜನ ನಕ್ಸಲ್ ನಾಯಕರ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾಗಿದ್ದು, ಚಿಕ್ಕಮಗಳೂರು ಜಿಲ್ಲಾಡಳಿತ ಬದಲಾಗಿ ಖುದ್ದು ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲೇ ಶರಣಾಗರಾಗುತ್ತಿದ್ದಾರೆ. ಹೀಗಾಗಿ ಆರು ಜನ ನಕ್ಸಲರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಸಂಜೆ ವೇಳೆಗೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಿದ್ದರಾಮಯ್ಯ ಸಮ್ಮುಖದಲ್ಲೇ ಶರಣಾಗಲಿದ್ದಾರೆ. ಇನ್ನು ಶರಣಾಗತಿಯಾಗುತ್ತಿರುವ ನಕ್ಸಲರಿಗೆ ರಾಜ್ಯ ಸರ್ಕಾರ, ಮೂರು ಕೆಟಗರಿಯಲ್ಲಿ ಪ್ಯಾಕೇಜ್ ಘೋಷಿಸಿದೆ.

ಇಂದು ಬೆಳಗ್ಗೆಯಿಂದ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕರ ವೇದಿಕೆ, ದಲಿತ ಸಂಘಟನೆ ಮುಖಂಡರು, ಶರಣಾಗುತ್ತಿರುವ ನಕ್ಸಕರ ಕುಟುಂಬದ ಸದಸ್ಯರ ಹಾಗೂ ಮಾಧ್ಯಮದವರು ಕಾಯುತ್ತಿದ್ದರು. ಆದ್ರೆ, ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು ನಕ್ಸಲರನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದು ಶರಣಾಗತಿ ಮಾಡಿಸಲಿದ್ದಾರೆ.

ನಕ್ಲರಿಗೆ  ಪ್ಯಾಕೇಜ್ ಘೋಷಣೆ

ಈ ನಕ್ಸಲರು ಸುಮ್ಮನೇ ಶರಣಾಗುತ್ತಿಲ್ಲ. ಸಾಕಷ್ಟು ಬೇಡಿಕೆಗಳನ್ನಿಟ್ಟುಕೊಂಡೇ ಶರಣಾಗುತ್ತಿದ್ದಾರೆ. ಶರಣಾಗತಿಯಾಗುತ್ತಿರುವ ನಕ್ಸಲರಿಗೆ ಸರ್ಕಾರ ಪ್ಯಾಕೇಜ್ ನೀಡುತ್ತಿದೆ. ಇದರಲ್ಲಿ ಮೂರು ಕೆಟಗರಿ ಇದೆ.

ಕೆಟಗರಿ ಎ:

  • ರಾಜ್ಯದ ನಕ್ಸಲರಾಗಿ ಆ್ಯಕ್ಟಿವ್ ಆಗಿರಬೇಕು
  • ಪ್ರಕರಣ ಇದ್ರೆ 7 ಲಕ್ಷದ 50 ಸಾವಿರ ಹಣ
  • ಆಯುಧಗಳನ್ನ ಹಾಜರುಪಡಿಸಿದ್ರೆ ಹಣ
  • ವ್ಯಾಪಾರಕ್ಕಾಗಿ ತರಬೇತಿಗೆ ಸೇರಿದ್ರೆ ತಿಂಗಳಿಗೆ 5000 ಹಣ.

ಕೆಟಗರಿ ಬಿ:

  • ಹೊರರಾಜ್ಯವರಾಗಿ ಆ್ಯಕ್ಟಿವ್ ಆಗಿರಬೇಕು
  • ಒಂದಕ್ಕಿಂತ ಹೆಚ್ಚು ಪ್ರಕರಣ ಇದ್ರೆ 4 ಲಕ್ಷ ಹಣ
  • ಆಯುಧಗಳನ್ನ ಹಾಜರುಪಡಿಸಿದ್ರೆ ಹಣ
  • ವ್ಯಾಪಾರಕ್ಕಾಗಿ ತರಬೇತಿಗೆ ಸೇರಿದ್ರೆ ತಿಂಗಳಿಗೆ 5000 ಹಣ

ಕೆಟಗರಿ ಸಿ:

  • ಎಡಪಂಥೀಯ ಭಯೋತ್ಪಾದನಾ ಚಟುಟಿಕೆ ಬೆಂಬಲಿಸುವವರು
  • ನಕ್ಸಲರ ಸಂಪರ್ಕ ಹೊಂದಿ ಪ್ರಕರಣಗಳು ಇದ್ರೆ 2 ಲಕ್ಷ ಹಣ
  • ಆಯುಧಗಳನ್ನ ಹಾಜರುಪಡಿಸಿದ್ರೆ ಸರ್ಕಾರದಿಂದ ಹಣ
  • ವ್ಯಾಪಾರಕ್ಕಾಗಿ ತರಬೇತಿಗೆ ಸೇರಿದ್ರೆ ತಿಂಗಳಿಗೆ 5000 ಹಣ

ಶಸ್ತ್ರಾಸ್ತ್ರ ಹಾಗೂ ಆಯುಧ ನೀಡಿದರೆ ಹಣ

ಹಾಗೇ ನಕ್ಸಲರು ತಮ್ಮ ಬಳಿ ಇರುವ ಶಸ್ತ್ರಾಸ್ತ್ರ ಹಾಗೂ ಆಯುಧಗಳನ್ನು ನೀಡಿದರೂ ಸಹ ಅವುಗಳಿಗೆ ತಕ್ಕಂತೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಯಾವುದಕ್ಕೆ ಎಷ್ಟು ಹಣ ಎನ್ನುವ ವಿವರ ಈ ಕೆಳಗಿನಂತಿದೆ.

Karnataka Govt Announce Money Package To Naxals Who Comes out to surrender news in Kannada

Naxal (2)

ಶರಣಾಗುವ ನಕ್ಸಲರು ಯಾರು?

  1. . ಮುಂಡುಗಾರು ಲತಾ (ಮುಂಡಗಾರು ಶೃಂಗೇರಿ)
  2.  ವನಜಾಕ್ಷಿ (ಬಾಳೆಹೊಳೆ ಕಳಸ)
  3.  ಸುಂದರಿ (ಕುಂತಲೂರು ದಕ್ಷಿಣ ಕನ್ನಡ)
  4.  ಮಾರಪ್ಪ ಅರೋಳಿ (ರಾಯಚೂರು)
  5.  ವಸಂತ ಟಿ (ತಮಿಳುನಾಡು)
  6.  ಎನ್. ಜೀಶಾ (ಕೇರಳ)

ಪ್ಯಾಕೇಜ್​ಗೆ ಸುನಿಲ್ ಕುಮಾರ್ ತೀವ್ರ ಆಕ್ರೋಶ

ಇನ್ನು ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಎಕ್ಸ್ ಪೋಸ್ಟ್ ಮಾಡಿ ಅಸಮಾಧಾನ ಹೊರ ಹಾಕಿರುವ ಸುನಿಲ್ ಕುಮಾರ್, ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿ ಆಗಿದ್ದ ತಣ್ಣಗಿನ ಮಲೆನಾಡಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯ ನವರೇ?ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ?ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

Published On - 2:52 pm, Wed, 8 January 25

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM