ಬೆಂಗಳೂರು, (ಜನವರಿ 08): ಆರು ಜನ ನಕ್ಸಲ್ ನಾಯಕರ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾಗಿದ್ದು, ಚಿಕ್ಕಮಗಳೂರು ಜಿಲ್ಲಾಡಳಿತ ಬದಲಾಗಿ ಖುದ್ದು ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲೇ ಶರಣಾಗರಾಗುತ್ತಿದ್ದಾರೆ. ಹೀಗಾಗಿ ಆರು ಜನ ನಕ್ಸಲರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಸಂಜೆ ವೇಳೆಗೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಿದ್ದರಾಮಯ್ಯ ಸಮ್ಮುಖದಲ್ಲೇ ಶರಣಾಗಲಿದ್ದಾರೆ. ಇನ್ನು ಶರಣಾಗತಿಯಾಗುತ್ತಿರುವ ನಕ್ಸಲರಿಗೆ ರಾಜ್ಯ ಸರ್ಕಾರ, ಮೂರು ಕೆಟಗರಿಯಲ್ಲಿ ಪ್ಯಾಕೇಜ್ ಘೋಷಿಸಿದೆ.
ಇಂದು ಬೆಳಗ್ಗೆಯಿಂದ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕರ ವೇದಿಕೆ, ದಲಿತ ಸಂಘಟನೆ ಮುಖಂಡರು, ಶರಣಾಗುತ್ತಿರುವ ನಕ್ಸಕರ ಕುಟುಂಬದ ಸದಸ್ಯರ ಹಾಗೂ ಮಾಧ್ಯಮದವರು ಕಾಯುತ್ತಿದ್ದರು.
ಆದ್ರೆ, ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು ನಕ್ಸಲರನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದು ಶರಣಾಗತಿ ಮಾಡಿಸಲಿದ್ದಾರೆ.
ಈ ನಕ್ಸಲರು ಸುಮ್ಮನೇ ಶರಣಾಗುತ್ತಿಲ್ಲ. ಸಾಕಷ್ಟು ಬೇಡಿಕೆಗಳನ್ನಿಟ್ಟುಕೊಂಡೇ ಶರಣಾಗುತ್ತಿದ್ದಾರೆ. ಶರಣಾಗತಿಯಾಗುತ್ತಿರುವ ನಕ್ಸಲರಿಗೆ ಸರ್ಕಾರ ಪ್ಯಾಕೇಜ್ ನೀಡುತ್ತಿದೆ. ಇದರಲ್ಲಿ ಮೂರು ಕೆಟಗರಿ ಇದೆ.
ಕೆಟಗರಿ ಎ:
ಕೆಟಗರಿ ಬಿ:
ಕೆಟಗರಿ ಸಿ:
ಹಾಗೇ ನಕ್ಸಲರು ತಮ್ಮ ಬಳಿ ಇರುವ ಶಸ್ತ್ರಾಸ್ತ್ರ ಹಾಗೂ ಆಯುಧಗಳನ್ನು ನೀಡಿದರೂ ಸಹ ಅವುಗಳಿಗೆ ತಕ್ಕಂತೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಯಾವುದಕ್ಕೆ ಎಷ್ಟು ಹಣ ಎನ್ನುವ ವಿವರ ಈ ಕೆಳಗಿನಂತಿದೆ.
ಇನ್ನು ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಪೋಸ್ಟ್ ಮಾಡಿ ಅಸಮಾಧಾನ ಹೊರ ಹಾಕಿರುವ ಸುನಿಲ್ ಕುಮಾರ್, ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿ ಆಗಿದ್ದ ತಣ್ಣಗಿನ ಮಲೆನಾಡಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯ ನವರೇ?ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ?ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ
Published On - 2:52 pm, Wed, 8 January 25