ಜೂನ್ 30ರವರೆಗೆ ವಾಹನ ತೆರಿಗೆ ಪಾವತಿಸುವ ಅವಧಿ ವಿಸ್ತರಣೆ

TV9kannada Web Team

TV9kannada Web Team | Edited By: guruganesh bhat

Updated on: Jun 11, 2021 | 9:09 PM

ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ವಾಹನಗಳಿಗೆ 15-06-2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡರಹಿತವಾಗಿ ಪಾವತಿಗೆ ಅವಕಾಶ ನೀಡಿದ್ದು, 30-06-2021 ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ. ಆದರೆ ಸಾರಿಗೆ ಇಲಾಖೆ ಹೊಸ ವಾಹನಗಳ ನೋಂದಣಿಗೆ ಯಾವುದೇ ವಿನಾಯಿತಿ ನೀಡಿಲ್ಲ. 

ಜೂನ್ 30ರವರೆಗೆ ವಾಹನ ತೆರಿಗೆ ಪಾವತಿಸುವ ಅವಧಿ ವಿಸ್ತರಣೆ
ಸಾಂದರ್ಭಿಕ ಚಿತ್ರ

ಬೆಂಗಳೂರು: ಜೂನ್ 30ರವರೆಗೆ ವಾಹನ ತೆರಿಗೆ ಪಾವತಿಸುವ ಅವಧಿ ವಿಸ್ತರಿಸಿ ಕರ್ನಾಟಕ ಸರ್ಕಾರ ಆದೇಶ ಪ್ರಕಟಿಸಿದೆ. ಮೋಟಾರು ವಾಹನ ತೆರಿಗೆ ದಂಡರಹಿತ ಪಾವತಿಗೆ ಅವಕಾಶ ನೀಡಲಾಗಿದ್ದು, ಹೊಸ ವಾಹನಗಳ ನೋಂದಣಿಗೆ ಯಾವುದೇ ವಿನಾಯಿತಿ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ವಾಹನಗಳಿಗೆ 15-06-2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡರಹಿತವಾಗಿ ಪಾವತಿಗೆ ಅವಕಾಶ ನೀಡಿದ್ದು, 30-06-2021 ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ. ಆದರೆ ಸಾರಿಗೆ ಇಲಾಖೆ ಹೊಸ ವಾಹನಗಳ ನೋಂದಣಿಗೆ ಯಾವುದೇ ವಿನಾಯಿತಿ ನೀಡಿಲ್ಲ.

ತಾಜಾ ಸುದ್ದಿ

ಇಂದಿನ ಕೊವಿಡ್ ಸೋಂಕಿತರೆಷ್ಟು? ಕರ್ನಾಟಕ ರಾಜ್ಯದಲ್ಲಿ ಕೊವಿಡ್ ಸೋಂಕು ಪ್ರಕರಣಗಳು ಶುಕ್ರವಾರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. 2ನೇ ಅಲೆ ವ್ಯಾಪಕವಾಗಿ ಹರಡಿದ ನಂತರ ಇದೇ ಮೊದಲ ಬಾರಿಗೆ ಸೋಂಕಿತರ ಒಟ್ಟು ಸಂಖ್ಯೆ 9 ಸಾವಿರದ ಗಡಿಯಿಂದ ಕೆಳಗಿಳಿದಿದೆ. ಒಟ್ಟು 8,249 ಜನರಿಗೆ ಸೋಂಕು ದೃಢಪಟ್ಟಿದ್ದು, 159 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 14,975 ಜನರು ಗುಣಮುಖರಾಗಿದ್ದು ಪಾಸಿಟಿವಿಟಿ ದರವು ಶೇ 4.86ಕ್ಕೆ ಇಳಿದಿದೆ. ಪಾಸಿಟಿವಿಟಿ ದರ ಶೇ 5ರ ಒಳಗೆ ಇರಬೇಕು ಎಂಬುದು ರಾಜ್ಯದ ಗುರಿಯಾಗಿತ್ತು.

ರಾಜ್ಯದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 27,47,539ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 25,11,105 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಒಟ್ಟು 32,644 ಜನರು ಮೃತಪಟ್ಟಿದ್ದಾರೆ. 20,3,769 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 1154 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಒಂದೇ ದಿನ 4,769 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು 48 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 11,92,886ಕ್ಕೇರಿಕೆಯಾಗಿದೆ. 10,85,862 ಮಂದಿ ಚೇತರಿಸಿಕೊಂಡಿದ್ದಾರೆ. 91760 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದಲ್ಲಿ ಈವರೆಗೆ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 15,263ಕ್ಕೆ ಏರಿದೆ.

ಇದನ್ನೂ ಓದಿ: ದಲಿತ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ ನಿಧನ ದುಃಖ ತಂದಿದೆ: ಪ್ರಧಾನಿ ಮೋದಿ ಸಂತಾಪ

ಕೊವಿಡ್​ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ನಟಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಬಿಜೆಪಿ

( Karnataka govt announces Expansion of vehicle tax payment period until June 30)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada