ಸಿಎಂ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ, ಮಾಧ್ಯಮ ಸಲಹೆಗಾರರ ನೇಮಕ: ಯಾರ್ಯಾರು? ಇಲ್ಲಿದೆ ವಿವರ

ರಾಜ್ಯ ಸರ್ಕಾರ ಇಂದು (ಮೇ 22) ಸಿಎಂ ಆಪ್ತ ಕಾರ್ಯದರ್ಶಿ, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ವಿಶೇಷಾಧಿಕಾರಿ, ಮಾಧ್ಯಮ ಸಲಹೆಗಾರರ ನೇಮಕವಾಗಿದೆ. ಯಾರ್ಯಾರು ಎನ್ನುವ ವಿವರ ಇಲ್ಲಿದೆ.

ಸಿಎಂ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ, ಮಾಧ್ಯಮ ಸಲಹೆಗಾರರ ನೇಮಕ: ಯಾರ್ಯಾರು? ಇಲ್ಲಿದೆ ವಿವರ
ವಿಧಾನಸೌಧ
Follow us
ರಮೇಶ್ ಬಿ. ಜವಳಗೇರಾ
|

Updated on:May 22, 2023 | 2:14 PM

ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ(Karnataka Assembly Elections 2023) ಕಾಂಗ್ರೆಸ್ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರಕ್ಕೇರಿದೆ. ಸಿದ್ದರಾಮಯ್ಯ (Siddaramaiah) ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀರಿಸಿದ್ದಾರೆ. ಇದರ ಬೆನ್ನಲ್ಲೇ ಕೆಲ ಅಧಿಕಾರಿಗಳು ನೇಮಕ, ಸ್ಥಾನಪಲ್ಲಟಗಳು ಸದ್ದಿಲ್ಲದೆ ನಡೆದಿವೆ. ಅದರಂತೆ ಇಂದು (ಮೇ 22) ಸಿಎಂ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ (CM Special Officer), ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ(CM Media Adviser) ನೇಮಕವಾಗಿದೆ. ಯಾರ್ಯರು ಎನ್ನುವ ವಿವರ ಈ ಕೆಳಗಿನಂತಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ ಶಾಸಕ 

ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ಅವರನ್ನು ನೇಮಕಗೊಳಿಸಿ ರಾಜ್ಯಸರ್ಕಾರ ಆದೇಶಿಸಿದೆ. ಗೃಹ ಇಲಾಖೆ ಜೊತೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇನ್ನು ಇದೇ ವೇಳೆ ಶಶಿಕಿರಣ್ ಶೆಟ್ಟಿ ಅವರನ್ನು ನೂತನ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಳಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸಿಎಂ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಆದೇಶ ಹೊರಡಿಸಿದ್ದಾರೆ. ಹಾಗೂ ಸಿಎಂ ವಿಶೇಷಾಧಿಕಾರಿಯಾಗಿ ಎಂ. ವೆಂಕಟೇಶ್ ಅವರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಇನ್ನು ಬೆಂಗಳೂರು: ಸಿಎಂ ಮಾಧ್ಯಮ ಸಲಹೆಗಾರರಾಗಿ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಯಾವುದೇ ಹೊಸ ಸರ್ಕಾರ ಆಡಳಿತಕ್ಕೆ ಬಂದರೆ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಕ ಮಾಡಿಸಿಕೊಳ್ಳುವುದು ಸಾಮಾನ್ಯವಾಗಿದೆ. ಮೊನ್ನೇ ಅಷ್ಟೇ ಅಲೋಕ್ ಮೋಹನ್ ಅವರನ್ನು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನಾಗಿ ಸರ್ಕಾರ ನೇಮಕಗೊಳಿಸಿತ್ತು.

ಮೊನ್ನೇ ಅಷ್ಟೇ ರಾಜ್ಯ ಸರ್ಕಾರದ ನೂತನ ಅಡ್ವೊಕೇಟ್‌ ಜನರಲ್ ಆಗಿ ಹಿರಿಯ ವಕೀಲ ಹಾಗೂ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಪುತ್ರ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿತ್ತು.

Published On - 2:09 pm, Mon, 22 May 23

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು