AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL Bhyrappa: ಎಸ್​ಎಲ್ ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಘೋಷಣೆ

ಖ್ಯಾತ ಕಾದಂಬರಿಕಾರ, ಬುಧವಾರ ನಿಧನರಾದ ಎಸ್​​ಎಲ್​ ಭೈರಪ್ಪ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಘೋಷಣೆ ಮಾಡಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಸಾಹಿತ್ಯ ಕ್ಷೇತ್ರಕ್ಕೆ ಭೈರಪ್ಪ ಅವರ ಕೊಡುಗೆಗಳನ್ನು ಸ್ಮರಿಸಿದರು.

SL Bhyrappa: ಎಸ್​ಎಲ್ ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಘೋಷಣೆ
ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ
ಗಣಪತಿ ಶರ್ಮಾ
|

Updated on:Sep 25, 2025 | 2:20 PM

Share

ಬೆಂಗಳೂರು, ಸೆಪ್ಟೆಂಬರ್ 25: ಖ್ಯಾತ ಸಾಹಿತಿ, ಕಾದಂಬರಿಕಾರ ಎಸ್​ಎಲ್ ಭೈರಪ್ಪ (SL Bhyrappa) ಅವರ ಸ್ಮಾರಕ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಕುರಿತು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದರು. ಅಪಾರ ಓದುಗರನ್ನ ಸಂಪಾದಿಸಿದವರು ಭೈರಪ್ಪನವರು. ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರದ್ದು ಜಗತ್ ಪ್ರಸಿದ್ಧ ಆಗಿರುವಂತಹ ಕಾದಂಬರಿಗಳು. ಅವರ, ಕೆಲವು ಕಾದಂಬರಿಗಳನ್ನು ನಾನು ಓದಿದ್ದೇನೆ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಿದ್ದರಾಮಯ್ಯ ಹೇಳಿದರು.

ಭೈರಪ್ಪ ಅವರು ಹೆಚ್ಚಿನ ಸಮಯ ಮೈಸೂರಿನಲ್ಲೇ ಇದ್ದವರು. ಹೀಗಾಗಿ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು. ಭೈರಪ್ಪ ಅವರ ಕಾದಂಬರಿಗಳು ಅನೇಕ ಭಾಷೆಗಳಿಗೆ ಅನುನಾದಗೊಂಡಿವೆ. ಬಹುಶಃ ಕನ್ನಡದ ಇತರ ಯಾವ ಸಾಹಿತಿಯ ಕೃತಿಗಳೂ ಅಷ್ಟೊಂದು ಸಂಖ್ಯೆಯಲ್ಲಿ ಬೇರೆ ಭಾಷೆಗಳಿಗೆ ಅನುವಾದಗೊಂಡಿಲ್ಲ. ಸರಸ್ವತಿ ಸಮ್ಮಾನ್ ಪುರಸ್ಕೃತ ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ಕೂಡ ಸಿಗಬೇಕಿತ್ತು. ಅವರು ಅದಕ್ಕೆ ಅರ್ಹರಾಗಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

ಭೈರಪ್ಪ ಪಾರ್ಥಿವ ಶರೀರಕ್ಕೆ ಸಿದ್ದರಾಮಯ್ಯ ಅಂತಿಮ ನಮನ: ವಿಡಿಯೋ ನೋಡಿ

ಅಂತಿಮ ದರ್ಶನ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಭೈರಪ್ಪ ಅವರ ಪತ್ನಿ ಹಾಗೂ ಮಕ್ಕಳ ಜತೆ ಕುಳಿತುಕೊಂಡು ಮಾತನಾಡಿ ಅವರಿಗೆ ಸಾಂತ್ವನ ಹೇಳಿದರು.

ಇದನ್ನೂ ಓದಿ: 1 ವಾರ ಬಾನು ಮುಷ್ತಾಕ್ ಮನೆಯಲ್ಲಿ ತಂಗಿದ್ದ ಭೈರಪ್ಪ, ಮಸೀದಿಗೂ ಹೋಗಿದ್ರು: ಕುತೂಹಲಕಾರಿ ಸಂಗತಿಗಳು ಇಲ್ಲಿವೆ

ಎಸ್ಎಲ್ ಭೈರಪ್ಪ ಬುಧವಾರ ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಸದ್ಯ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಅಂತಿಮ ದರ್ಶನ ನಡೆಯುತ್ತಿದ್ದು, ಮಧ್ಯಾಹ್ನದ ನಂತರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ಯಲಾಗುತ್ತದೆ. ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇದೆ. ಶುಕ್ರವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:41 pm, Thu, 25 September 25

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ
ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ