
ಬೆಂಗಳೂರು, ಏಪ್ರಿಲ್ 08: ಕರ್ನಾಟಕದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರಿಗೆ ಸಂಕಷ್ಟ ಎದುರಾಗಿದೆ. ದಿನವಿಡಿ ದುಡಿಮೆ ಬಿಟ್ಟು ಬಂಕ್ಗಳ ಬಳಿ ಗಂಟೆಗಟ್ಟಲೇ ಕಾಯುವಂತ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಆಟೋ ಚಾಲಕರು ಹೈರಾಣಾಗಿ ಹೋಗಿದ್ದಾರೆ. ಈ ಮಧ್ಯೆ ಆಟೋ ಗ್ಯಾಸ್ (Auto LPG) ಕೊರತೆ ಬಗ್ಗೆ ವಂದತಿಗಳು ಕೂಡ ಹರಿದಾಡಿದ್ದವು. ಸದ್ಯ ಆಟೋ ಎಲ್‌ಪಿಜಿ ಸರಬರಾಜು ಕುರಿತು ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರ, ಸರಬರಾಜಿನಲ್ಲಿ ವ್ಯತ್ಯಾಸ ಕಂಡುಬಂದಿದ್ದರೂ ಯಾವುದೇ ತೊಂದರೆ ಇಲ್ಲ ಎಂದು ಹೇಳಿದೆ.
ಆಟೋ ಎಲ್‌ಪಿಜಿ ಸರಬರಾಜು ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ, ಸರಬರಾಜಿನಲ್ಲಿ ವ್ಯತ್ಯಾಸ ಕಂಡುಬಂದಿದ್ದರೂ ಯಾವುದೇ ತೊಂದರೆ ಇಲ್ಲ. IOCL, BPC, HPC ಕಂಪನಿಗಳಿಂದ ಗ್ಯಾಸ್ ಪೂರೈಕೆ ನಡೆಯುತ್ತಿದೆ. ಏಪ್ರಿಲ್ 2ರಿಂದ ಏಪ್ರಿಲ್ 6ರವರೆಗೆ ದಿನನಿತ್ಯ ಸರಬರಾಜು ಆಗುತ್ತಿದೆ. ಪ್ರತಿದಿನ 83ರಿಂದ 94 ಮೆಟ್ರಿಕ್ ಟನ್ವರೆಗೂ ಪೂರೈಕೆ ಮಾಡಲಾಗಿದೆ. ಏಪ್ರಿಲ್ 5ರಂದು ಅತಿ ಹೆಚ್ಚು 94.11 MT ಸರಬರಾಜು ಮಾಡಲಾಗಿದೆ. ಆಟೋ ಚಾಲಕರು ಆತಂಕಪಡಬೇಕಾಗಿಲ್ಲ ಎಂದು ಸರ್ಕಾರ ಹೇಳಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಆಟೋ ಎಲ್‌ಪಿಜಿ ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯ್ಲ್! ಡ್ಯುಯಲ್ ಫ್ಯೂಯಲ್ ಬಳಕೆಗೆ ಸಲಹೆ
ಇನ್ನು ಎಲ್‌ಪಿಜಿ ಪೂರೈಕೆ ವ್ಯವಸ್ಥೆಯನ್ನು ಸರ್ಕಾರ ಸಮೀಕ್ಷೆ ಮಾಡುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಏಪ್ರಿಲ್ 5ರಂದು ಗರಿಷ್ಠ 94.11 MT ಪೂರೈಕೆಯಾಗಿದೆ. ಆಟೋ ಚಾಲಕರಿಗೆ ಆತಂಕ ಬೇಡ, ಪೂರೈಕೆ ಮೇಲೆ ಸರ್ಕಾರದ ನಿಗಾ ಇದೆ.
ಇನ್ನೂ ಓದಿ: ಸಚಿವ ಕೆ. ಹೆಚ್ ಮುನಿಯಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ ಆಟೋ ಚಾಲಕರು ! ಸಚಿವ ಹೇಳಿದ್ದೇನು?
ಸದ್ಯ ರಾಜ್ಯದಲ್ಲಿನ ಆಟೋ ಮಾಲೀಕರು ಮತ್ತು ಚಾಲಕರುಗಳು ಆತಂಕ ಪಡದೇ ಮತ್ತು ಯಾವುದೇ ವದಂತಿಗಳಿಗೆ ಕಿವಿ ಕೊಡದೇ ಸಹಕರಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ಇನ್ನು ಕೈಗಾರಿಕಾ ವಲಯಕ್ಕೆ ಎಲ್‌ಪಿಜಿ ಹಂಚಿಕೆ ಕುರಿತು ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಕಾರ್ಯದರ್ಶಿ ಡಾ.ನೀರಜ್ ಮಿತ್ತಲ್ರಿಂದ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಅಧಿಕೃತ ಪತ್ರ ರವಾನಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:14 pm, Wed, 8 April 26